Murder Case: ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ
ನರಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದ ಅಡ್ಡಕಸುಬಿ ಜ್ಯೋತಿಷಿಯ ಮಾತು ನಂಬಿದ ದುರುಳನೊಬ್ಬ ತನಗೆ ಯಾವ ರೀತಿಯಲ್ಲೂ ಸಂಬಂಧವಿಲ್ಲದ ಅಮಾಯಕನೊಬ್ಬನನ್ನು ಪುಸಲಾಯಿಸಿ ಕರೆದೊಯ್ದು ಕೊಚ್ಚಿ ಕೊಲೆ ಮಾಡಿದ್ದಾನೆ. ಪೊಲೀಸರು ಹಂತಕ ಹಾಗೂ ಜ್ಯೋತಿಷಿ ಇಬ್ಬರನ್ನೂ ಬಂಧಿಸಿದ್ದಾರೆ.
![ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ](https://cdn-vishwavani-prod.hindverse.com/media/original_images/Dead_Body.jpg)
ಸಾಂದರ್ಭಿಕ ಚಿತ್ರ
![ಹರೀಶ್ ಕೇರ](https://cdn-vishwavani-prod.hindverse.com/media/images/Harish_Kerargylr_YyRvY8Q.2e16d0ba.fill-100x100.jpg)
ಚಿತ್ರದುರ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಯೊಂದು (Crime news) ನಡೆದಿದೆ. ದುಷ್ಕರ್ಮಿಗಳು ಡ್ರಾಪ್ ಕೊಡುವ ನೆಪದಲ್ಲಿ ಸಂಬಂಧವೇ ಇಲ್ಲದ ವ್ಯಕ್ತಿಯೊಬ್ಬನನ್ನು ಕರೆದೊಯ್ದು ನಿಧಿಯಾಸೆಗಾಗಿ ಆತನನ್ನೇ ಬಲಿ (human sacrifice) ಕೊಟ್ಟಿದ್ದಾರೆ. ಈ ನರಬಲಿ (Murder Case) ಘಟನೆ ಚಿತ್ರದುರ್ಗದಲ್ಲಿ (Chitradurga crime news) ನಡೆದಿದೆ.
ಆಂಧ್ರಪ್ರದೇಶ ಮೂಲದ ಆನಂದ ರೆಡ್ಡಿ ಎಂಬಾತ ಪಾವಗಡದ ಜ್ಯೋತಿಷಿಯೊಬ್ಬರ ಮಾತು ನಂಬಿ ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುತ್ತಿದ್ದ ಪ್ರಭಾಕರ ಎಂಬಾತನನ್ನು ಕರೆದೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜ್ಯೋತಿಷಿ ರಾಮಕೃಷ್ಣ ಹಾಗೂ ಆರೋಪಿ ಆನಂದ ರೆಡ್ಡಿ ಇಬ್ಬರನ್ನೂ ಬಂಧಿಸಿದ್ದಾರೆ.
ಡಾಬಾವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆನಂದ್ ರೆಡ್ಡಿ, ನಿಧಿಯಾಸೆಗೆ ಬಿದ್ದಿದ್ದ. ಪಾವಗಡದ ಜ್ಯೋತಿಷಿ ರಾಮಕೃಷ್ಣ ಎಂಬಾತನಲ್ಲಿ ಜ್ಯೋತಿಷ್ಯ ಕೇಳಿದ್ದು, ನಿಧಿ ಸಿಗಬೇಕು ಎಂದರೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಡಬೇಕು ಎಂದು ಆತ ಹೇಳಿದ್ದಾನೆ. ಈ ಮಾತನ್ನು ನಂಬಿದ ರೆಡ್ಡಿ ನರಬಲಿಗಾಗಿ ಹೊಂಚು ಹಾಕಿದ್ದ.
ನಂತರ ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಿದ್ದ ಪ್ರಭಾಕರ ಎಂಬವರ ಬಳಿ ಆನಂದ ರೆಡ್ಡಿ ಬೈಕ್ ನಿಲ್ಲಿಸಿ ಡ್ರಾಪ್ ಕೊಡುತ್ತೇನೆ ಬನ್ನಿ ಎಂದು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿಯಲ್ಲಿ ಟೆಂಪೋ ಬ್ರೇಕ್ ಫೇಲ್, ಒಬ್ಬ ಸಾವು
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮಿನಿ ಟೆಂಪೋ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಪರಿಣಾಮ ಟೆಂಪೋದಲ್ಲಿದ್ದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಈ ದುರ್ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಮುಳ್ಳೂರಲ್ಲಿ ನಡೆದಿದೆ.
ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ (38) ಎಂದು ಗುರುತಿಸಲಾಗಿದೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ರಾಜ (37), ಆದಿತ್ಯ (20) ಭದ್ರಾವತಿಯ ಬಾಬು (55), ಶಾಬಾಸ್ (25) ಗಂಭೀರ ಗಾಯಗೊಂಡವರು. ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
ವಾಹನದಲ್ಲಿದ್ದ ಪ್ರಯಾಣಿಕರೆಲ್ಲಾ ಜಾತ್ರಾ ವ್ಯಾಪಾರಿಗಳಾಗಿದ್ದು, ಕಳಸ ಜಾತ್ರೆ ಮುಗಿಸಿ ಮಂದಾರ್ತಿ ಜಾತ್ರೆಗೆ ಪ್ರಯಾಣಿಸುತ್ತಿದ್ದ ವೇಳೆ ಮಾಳ ಮುಳ್ಳೂರು ಘಾಟಿ ಕೆಳಗೆ ಪೆಟ್ರೋಲ್ ಬಂಕ್ ಬಳಿ ಬ್ರೇಕ್ ವೈಫಲ್ಯಕ್ಕೊಳಗಾಗಿ ವಾಹನ ಪಲ್ಟಿಯಾಗಿದೆ. ಅಪಘಾತದ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bhagappa Harijan Murder: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ ಕೊಚ್ಚಿ ಕೊಲೆ