ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಗಂಡ ಹೆಂಡತಿ ನಡುವೆ ಸದಾ ಒಂದಿಲ್ಲೊಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಬುಧವಾರ ತಡರಾತ್ರಿ ಇಬ್ಬರ ನಡುವೆ ಗಲಾಟೆ ಉಲ್ಬಣಿಸಿದೆ. ಹೆಂಡತಿಯನ್ನು ನೇಣಿಗೆ ಹಾಕಿದ ಗಂಡ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 28, 2025 8:39 AM

ಬಳ್ಳಾರಿ: ಪತಿ ಪತ್ನಿಯರ (wife - husband) ನಡುವಿನ ಕೌಟುಂಬಿಕ ಕಲಹ (Quarrel) ಇಬ್ಬರ ದುರಂತ ಸಾವಿನಲ್ಲಿ ಪರ್ಯವಸಾನವಾದ ಘಟನೆ ಬಳ್ಳಾರಿ (bellary news, bellary crime) ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಹೆಂಡತಿಯನ್ನು ಕೊಂದ (Murder case) ಗಂಡ ಬಳಿಕ ತಾನು ಕೂಡ ಆತ್ಮಹತ್ಯೆಗೆ (Self harming) ಶರಣಾಗಿದ್ದಾನೆ. ಹಲಿಮಾ (42) ಹಾಗು ಪತಿ ಖರೀಂ ಸಾಬ್ (45) ಸಾವನ್ನಪ್ಪಿರುವ ದಂಪತಿಗಳು ಎಂದು ತಿಳಿದುಬಂದಿದೆ. ವೈಯಕ್ತಿಕ ವಿಚಾರಗಳಿಗಾಗಿ ದಂಪತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಗೊತ್ತಾಗಿದೆ.

ಬುಧವಾರ ತಡರಾತ್ರಿ ಇಬ್ಬರ ಮಧ್ಯ ಗಲಾಟೆ ನಡೆದಿದೆ. ಈ ವೇಳೆ ಕೋಪಗೊಂಡಿದ್ದ ಪತಿ ಗುರುವಾರ ಬೆಳಗಿನ ಜಾವ ಪತ್ನಿಯನ್ನು ನೇಣಿಗೆ ಹಾಕಿ ಕೊಂದು ತಾನೂ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಜಗಳಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಕುಡತಿನಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಚೆಕ್‌ಡ್ಯಾಂನಲ್ಲಿ ಮುಳುಗಿ ಬಾಲಕ ಸಾವು

ದಾವಣಗೆರೆ : ಹಳ್ಳದ ಚೆಕ್‌ಡ್ಯಾಂನಲ್ಲಿ ಈಜಾಡಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬಾನುವಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಬಾನುವಳ್ಳಿ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಮೊಹ್ಮದ್ ತನ್ವೀರ್ (13) ಎಂದು ಗುರುತಿಸಲಾಗಿದೆ.

ಗ್ರಾಮದ ಸಮೀಪ ರಾಯಪುರ ರಸ್ತೆಯಲ್ಲಿರುವ ದೊಡ್ಡಹಳ್ಳದ ಚೆಕ್‌ಡ್ಯಾಂನಲ್ಲಿ ಈಜಾಡಿ ಬರುವುದಾಗಿ ಸಂಜೆ 4ಕ್ಕೆ ಹೊರಟಿದ್ದ ತನ್ವೀರ್ ಮನೆಗೆ ಮರಳಿರಲಿಲ್ಲ. ಹಳ್ಳಕ್ಕೆ ಈಜುಗಾರರೊಂದಿಗೆ ಹೋಗಿ ಹುಡುಕಾಡಿದಾಗ ಮಧ್ಯರಾತ್ರಿ ಶವ ಪತ್ತೆಯಾಯಿತು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಾಮಪಿಶಾಚಿ ತಂದೆಯ ಬಂಧನ

ದೇವನಹಳ್ಳಿ: ಇದೇ ರೀತಿಯ ಪ್ರಕರಣವೊಂದು ಕೆಲವು ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿತ್ತು. ಆ ಪ್ರಕರಣದಲ್ಲಿ ತಂದೆಯೇ ಮಗಳ ಮೇಲೆ ಕಾಮಪಿಶಾಚಿಯಂತೆ ಅತ್ಯಾಚಾರ ಎಸಗಿದ್ದ. ತಂದೆಯಿಂದ ಅತ್ಯಾಚಾರಕ್ಕೊಳಗಾದ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ದೂರು ದಾಖಲಾಗುತ್ತಿದ್ದಂತೆ ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದರು.

19 ವರ್ಷ ವಯಸ್ಸಿನ ಮಗಳ‌ ಮೇಲೆ ತಂದೆ ಮಂಜುನಾಥ ಅತ್ಯಾಚಾರ ಮಾಡಿದ್ದರ ಜತೆಗೆ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದ. ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂವರು ಮಕ್ಕಳು. ಈ ಪೈಕಿ ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿತ್ತು. ಕೊನೆಗೆ ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡತೊಡಗಿದ್ದಳು. ಮಂಜುನಾಥನನ್ನು ಪೊಲೀಸರು ಬಂಧಿಸಿದ್ದು, ಬಾಯಿ ಬಿಡಿಸಲಾಗುತ್ತಿದೆ. ಈತ ಇನ್ನಿತರರ ಮೇಲೂ ಇಂಥ ಕೃತ್ಯ ಎಸಗಿದ್ದಾನೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಅಪಘಾತದಲ್ಲಿ ಸಾವು