ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mysuru News: ಮೈಸೂರಿನಲ್ಲಿ ಆಘಾತಕಾರಿ ಘಟನೆ; ಹೆಂಡತಿ, ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಗಂಡ ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೈಸೂರಿನಲ್ಲಿ ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆ

-

Prabhakara R
Prabhakara R Jul 21, 2026 3:15 PM

ಮೈಸೂರು: ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಗಂಡನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೈಸೂರು ಜಿಲ್ಲೆಯ (Mysuru News) ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಅಲ್ಲದೇ ಸಾಯುವ ಮುನ್ನ ವ್ಯಕ್ತಿ ಡೆತ್​ನೋಟ್​ ಬರೆದಿಟ್ಟಿದ್ದು, ಅದರಲ್ಲಿ ಕೆಲ ಆಘಾತಕಾರಿ ವಿಚಾರ ಬಯಲಾಗಿದೆ.

ಹರೀಶ್ (43) ಎಂಬ ವ್ಯಕ್ತಿ ತನ್ನ ಹೆಂಡತಿ ನಿಶ್ಚಿತಾ (40), ಪುತ್ರಿಯರಾದ ನೆಕ್ಸಾ (7) ಮತ್ತು ರಕ್ಷಾಳನ್ನು ಕೊಂದಿದ್ದಾನೆ. ಹೆಂಡತಿ ಮತ್ತು ಮಕ್ಕಳ ಬಾಯಿ ಮತ್ತು ಮೂಗಿಗೆ ಪ್ಲಾಸ್ಟರ್ ಅಂಟಿಸಿ ಉಸಿರು ಕೊಲೆ ಮಾಡಿದ್ದಾನೆ. ನಂತರ, ತಾನು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕಂಡುಬಂದಿದೆ. ಅದರಲ್ಲಿ ತಾನು ಮಹಡಿ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಸಾಯುತ್ತಿದ್ದೇನೆ. ನನ್ನ ಕೊನೆಯ ಆಸೆಗಳು ಇದೆ ಎಂದು ಕೆಲವು ಮುಖ್ಯವಾದ ಮಾಹಿತಿಗಳನ್ನು ಡೈರಿಯಲ್ಲಿ ಬರೆದಿದ್ದಾರೆ.

ಇನ್ನು ಇವರ ಮನೆಯಲ್ಲಿ ತಾಯಿ ಕೂಡ ವಾಸವಿದ್ದರು. ಅವರನ್ನು ಮೂರು ದಿನಗಳ ಹಿಂದೆ ಅಜ್ಜಿ ಮನೆಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಹುಣಸೂರು ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ವಿಜಯಪುರದಲ್ಲಿ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳ ದುರ್ಮರಣ

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿವೆ.

ಮೃತ ಕಾರ್ಮಿಕರು ಇಂಡಿಯಿಂದ ಮಂಡ್ಯ ಜಿಲ್ಲೆಗೆ ಕಬ್ಬು ಕಟಾವು ಕೆಲಸಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮುದ್ದೇಬಿಹಾಳ ಕ್ರಾಸ್ ಬಳಿ ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಕಂಡು ಚಾಲಕ ಟ್ರ್ಯಾಕ್ಟರ್ ವೇಗವನ್ನು ಕಡಿಮೆ ಮಾಡಿದ್ದಾನೆ. ಈ ವೇಳೆ ಅದೇ ಮಾರ್ಗವಾಗಿ ಹಿಂಬದಿಯಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ ಹಾಗೂ ಮಗಳು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ಮಾತನಾಡ್ತಿಲ್ಲ ಅಂತ 41 ವರ್ಷದ ವ್ಯಕ್ತಿ ಆತ್ಮಹತ್ಯೆ!

ವಿಷಯ ತಿಳಿಯುತ್ತಿದ್ದಂತೆಯೇ ನಿಡಗುಂದಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮೃತದೇಹಗಳನ್ನು ಹಾಗೂ ಗಾಯಾಳುಗಳನ್ನು ತಕ್ಷಣವೇ ನಿಡಗುಂದಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.