ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Belagavi News: ಮನೆಯಲ್ಲಿ ಸೀರೆ ಬಿಟ್ಟು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ!

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ದಂಪತಿ ನಡುವೆ ನೈಟಿ ಧರಿಸುವ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಪತಿಯ ತೀವ್ರ ವಿರೋಧದ ನಡುವೆಯೂ ನೈಟಿ ಧರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ಗಂಡ ಬೆಂಕಿ ಹಚ್ಚಿದ್ದಾನೆ.

ಬೆಳಗಾವಿ: ಮನೆಯಲ್ಲಿ ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಪತಿರಾಯ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ (Belagavi) ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಪಾಟೀಲ್ ಎಂಬಾತ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದು, ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಂಜುಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಟ್ಟ ಗಾಯಗಳಿಂದ ಗಾಯಗೊಂಡಿರುವ ಮಂಜುಳಾ ಪಾಟೀಲ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮಂಜುಳಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಾ ಪಾಟೀಲ್, ಕುಟುಂಬ ಸಮೇತನಾಗಿ ಹತ್ತರವಾಡ ಗ್ರಾಮದಲ್ಲಿ ವಾಸವಾಗಿದ್ದನು. ಎಂಟು ವರ್ಷಗಳ ಹಿಂದೆ ಕೃಷ್ಣಾ ಮತ್ತು ಮಂಜುಳಾ ಮದುವೆ ನಡೆದಿತ್ತು. ಕಳೆದ ಕೆಲವು ದಿನಗಳಿಂದ ದಂಪತಿ ನಡುವೆ ನೈಟಿ ಧರಿಸುವ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

Lover murder case: 4.5 ಲಕ್ಷದ ಬೈಕ್‌ ಕೊಡಿಸಿದ ಪ್ರೇಯಸಿಯೇ ಕೈಕಾಲು ಕಟ್ಟಿಹಾಕಿ, ಬೆಂಕಿ ಹಚ್ಚಿ ಪ್ರಿಯಕರನ ಕೊಂದಳೇಕೆ?

ಪತಿಯ ತೀವ್ರ ವಿರೋಧದ ನಡುವೆಯೂ ಮಂಜುಳಾ ನೈಟಿ ಧರಿಸಿದ್ದರು. ಇದರಿಂದ ಕೋಪಗೊಂಡ ಕೃಷ್ಣಾ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದಾನೆ. ಬೆಂಕಿ ತಾಗುತ್ತಿದ್ದಂತೆ ಮಂಜುಳಾ ಸಹಾಯಕ್ಕಾಗಿ ಜೋರಾಗಿ ಕೂಗಿದ್ದಾರೆ. ಮಂಜುಳಾ ಅವರ ಧ್ವನಿ ಕೇಳುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ನಂತರ ಸ್ಥಳೀಯರೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಗಂಡ, ಮಕ್ಕಳನ್ನು ಬಿಟ್ಟು ಕಟಿಂಗ್‌ ಶಾಪ್‌ನವನ ಜತೆ ಮಹಿಳೆ ಪರಾರಿ

ಬೆಂಗಳೂರು: ಕಸ ಹಾಕಿ ಬರುವುದಾಗಿ ಮನೆಯಿಂದ ಹೊರಗೆ ಹೋಗಿದ್ದ ಮಹಿಳೆ ಪ್ರಿಯಕರನ ಜತೆ ಪರಾರಿಯಾಗಿರುವ ಘಟನೆ ನಗರದ (Bengaluru) ಬಾಗಲಗುಂಟೆಯಲ್ಲಿ ನಡೆದಿದೆ. ಗಂಡ, ಇಬ್ಬರ ಮಕ್ಕಳನ್ನು ಬಿಟ್ಟು ಪತ್ನಿ ಪರ ಪುರುಷನ ಜತೆ ಓಡಿ ಹೋಗಿದ್ದಾಳೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶರತ್ ಕುಮಾರ್‌ ಎಂಬುವವರ ಪತ್ನಿ ಪ್ರಿಯಾಂಕಾ ಪರಾರಿಯಾದ ಮಹಿಳೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು. ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಪರಪುರುಷನೊಂದಿಗೆ ಪರಾರಿಯಾಗಿದ್ದಾಳೆ. ನಾನು ಮನೆಯಲ್ಲಿರುವಾಗಲೇ ಪ್ರಿಯಾಂಕಾ ತನ್ನ ಪ್ರಿಯಕರ ಪ್ರಭು ಜತೆ ಹೋಗಿದ್ದಾಳೆ. ಅಷ್ಟೇ ಅಲ್ಲದೆ, ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಪರಾರಿಯಾಗಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ.

ನಾನು ಕೆಲಸಕ್ಕೆ ಹೋದ ಸಮಯದಲ್ಲಿ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನನ್ನು ಭೇಟಿಯಾಗುತ್ತಿದ್ದಳು. ಜತೆಗೆ ಪ್ರಭು ಪ್ರಿಯಾಂಕಾಗೆ ಮೊಬೈಲ್ ಕರೆನ್ಸಿ ಹಾಕಿಸುತ್ತಿದ್ದ. ಇದೇ ವಿಚಾರಕ್ಕಾಗಿ ನಮ್ಮ ನಡುವೆ ಆಗಾಗ ಜಗಳ ಆಗುತ್ತಿತ್ತು ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಪತಿ ಶರತ್ ಪ್ರಿಯಾಂಕಾಗೆ ಹೀಗೆಲ್ಲ ಮಾಡಬೇಡ ಎಂದು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿದ್ದರು. ಆದರೆ ಏ.11ರ ರಾತ್ರಿ ಪ್ರಿಯಾಂಕಾ ಮನೆ ಬಿಟ್ಟು ಹೋಗಿದ್ದಾಳೆ. ಮಧ್ಯರಾತ್ರಿ ಕಸ ಎಸೆದು ಬರುವುದಾಗಿ ಮನೆಯಿಂದ ಕಸದ ಬಕೆಟ್ ಹಿಡಿದು ಹೊರಟಿದ್ದಾಳೆ. ಮೊದಲೇ ರೆಡಿ ಮಾಡಿ ಇಟ್ಟಿದ್ದ ಬಟ್ಟೆ ಬ್ಯಾಗ್‌ನ್ನು ಮನೆಯಲ್ಲಿನ ಪತಿ, ಮಕ್ಕಳಿಗೆ ಕಾಣದಂತೆ ಕಸದ ಜತೆ ಬ್ಯಾಗ್ ಸಮೇತ ಹೊರಗೆ ಬಂದಿದ್ದಾಳೆ.

Victoria Hospital: ಮರ್ಮಾಂಗದ ಸರ್ಜರಿ ಬಳಿಕ ಹೊಲಿಗೆ ಹಾಕೋದನ್ನೇ ಮರೆತ್ರು; ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು!

ಒಂದು ಕೈಯಲ್ಲಿ ಕಸದ ಬಕೆಟ್ ಮತ್ತು ಮತ್ತೊಂದು ಕೈಯಲ್ಲಿ ಬ್ಯಾಗ್ ಹಿಡಿದು ಹೊರಟಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.