Hyderabad Horror: ಪತ್ನಿಯನ್ನು ಕೊಂದು ಕುಕ್ಕರ್‌ನಲ್ಲಿ ಬೇಯಿಸಿದ ಪಾಪಿ!
ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಹಾಕಿ ಬೇಯಿಸಿರುವ ದಾರುಣ ಘಟನೆ ತೆಲಂಗಾಣದಲ್ಲಿ ನಡೆದಿದೆ. ತನಿಖಾಧಿಕಾರಿಗಳು ಆರೋಪಿ ಗುರು ಮೂರ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು, ತನ್ನ ಅಪರಾಧವನ್ನು ಅವನು ಒಪ್ಪಿಕೊಂಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿ, ಶವವನ್ನು ತುಂಡು ತುಂಡು ಮಾಡಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದದ್ದಾನೆ.
ಹೈದರಾಬಾದ್: ಪತ್ನಿಯನ್ನು ಬರ್ಬರವಾಗಿ ಕೊಂದು ದೇಹದ ಭಾಗಗಳನ್ನು ಕತ್ತರಿಸಿ ಫ್ರಿಡ್ಜ್‌ನೊಳಗೆ ಇರಿಸಿದ್ದ ಘಟನೆ ಇಡಿ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇತ್ತೀಚೆಗಂತೂ ಅಂತಹ ಹೇಯ ಕೃತ್ಯಗಳು ಬೆಳಕಿಗೆ ಬರುತ್ತಲೇ ಇರುತ್ತವೆ.ಇದೀಗ ಇಲ್ಲೊಬ್ಬ ನೀಚ ಪತಿ ತನ್ನ ಪತ್ನಿಯನ್ನು ಕೊಂದು(Hyderabad Horror) ಆಕೆಯ ಶವವನ್ನು ತುಂಡರಿಸಿ ಪ್ರೆಶರ್ ಕುಕ್ಕರ್‌ನೊಳಗೆ ಹಾಕಿ ಬೇಯಿಸಿದ್ದಾನೆ. ಹೈದರಾಬಾದ್‌ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಈ ದಾರುಣ ಘಟನೆ ನಡೆದಿದೆ.
ನಿವೃತ್ತ ಸೈನಿಕನೊಬ್ಬ(Ex Army) ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಹಾಕಿ ಬೇಯಿಸಿ ಕ್ರೂರತೆ ಮೆರೆದಿರುವ ಘಟನೆ ತೆಲಂಗಾಣದಲ್ಲಿ(Telangana) ನಡೆದಿದೆ. ಪೊಲೀಸರ ಪ್ರಕಾರ ಗುರುಮೂರ್ತಿ ಎಂಬ ವ್ಯಕ್ತಿ ಜನವರಿ 18ರಂದು ರಾಚಕೊಂಡ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಮೀರಪೇಟ್ ಪೊಲೀಸ್ ಠಾಣೆಗೆ ತಮ್ಮ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು.
ತನಿಖಾಧಿಕಾರಿಗಳು ಗುರು ಮೂರ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಆತ ತಾನು ಎಸಗಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪತ್ನಿಯನ್ನು ಕೊಲೆ ಮಾಡಿ, ಶವವನ್ನು ತುಂಡು ಮಾಡಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ್ದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ನಂತರ ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದ್ದಾನೆ ಎನ್ನಲಾಗಿದೆ.
ಪೊಲೀಸರು ಆತನ ಹೇಳಿಕೆಯನ್ನು ದಾಖಲಿಸಿಕೊಂಡು ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದ್ದಾರೆ. ಕೆರೆಯಲ್ಲಿ ಸಂತ್ರಸ್ತೆಯ ದೇಹದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಗುರುಮೂರ್ತಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತರಾದ ನಂತರ ಕಾಂಚನ್ ಬಾಗ್‌ನಲ್ಲಿರುವ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದನು.
ಈ ಸುದ್ದಿಯನ್ನೂ ಓದಿ:Sharon Raj Murder Case: ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ; ಪ್ರೇಯಸಿ ಗ್ರೀಷ್ಮಾಗೆ ಗಲ್ಲುಶಿಕ್ಷೆ!
ಗುರುಮೂರ್ತಿ ಸುಮಾರು 13 ವರ್ಷಗಳ ಹಿಂದೆ ಮಾಧವಿ ಅವರನ್ನು ವಿವಾಹವಾಗಿದ್ದನು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ತನ್ನ ಹೆಂಡತಿಯನ್ನು ಕೊಂದ ನಂತರ, ಆರೋಪಿಯು ತನ್ನ ಹೆತ್ತವರೊಂದಿಗೆ ಮೀರ್‌ಪೇಟ್ ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ನೀಡಿದ್ದಾನೆ. ಯಾರಿಗೂ ತನ್ನ ಮೇಲೆ ಅನುಮಾನ ಬಾರದಂತೆ ನಡೆದುಕೊಂಡಿದ್ದಾನೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಶೀಘ್ರದಲ್ಲೇ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.