IPL 2025: ʻಇನ್ನುಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಿಸಿʼ-ಬಿಸಿಸಿಐಗೆ ಮೈಕಲ್ ವಾನ್ ಸಲಹೆ!
ಭಾರತ-ಪಾಕಿಸ್ತಾನ ಗಡಿ ಭಾಗಗಳಲ್ಲಿ ಉದ್ವಿಗ್ನತೆಯ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಒಂದು ವಾರದ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಇದರ ನಡುವೆ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾನ್, ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಿಸಿ ಎಂದು ಸಲಹೆ ನೀಡಿದ್ದಾರೆ.

ಬಿಸಿಸಿಐಗೆ ಮಹತ್ವದ ಸಲಹೆ ನೀಡಿದ ಮೈಕಲ್ ವಾನ್.

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಇನ್ನುಳಿದ ಭಾಗವನ್ನು ಸದ್ಯಕ್ಕೆ ಸ್ಥಗಿತಗೊಳಿಸಿದೆ. ಭಾರತ ಹಾಗೂ ಪಾಕಿಸ್ತಾನ ಗಡಿ ಭಾಗಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ಪರಿಗಣಿಸಿ ಬಿಸಿಸಿಐ ಈ ತೀರ್ಮಾನವನ್ನು ತೆಗೆದುಕೊಂಡಿದೆ. ಬಿಸಿಸಿಐ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಆನ್‌ಲೈನ್ ಮೀಟಿಂಗ್‌ನಲ್ಲಿ ಚರ್ಚಿಸಿ ಅಂತಿಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆಟಗಾರರ ಸುರಕ್ಷತೆಯನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಇದೀಗ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್, ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸಿ ಎಂದು ಆಗ್ರಹಿಸಿದ್ದಾರೆ.
ಇದಕ್ಕೂ ಮುನ್ನ ಮೇ 8 ರಂದು ಗುರುವಾರ ರಾತ್ರಿ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ನಂತರ ಶುಕ್ರವಾರ ಬಿಸಿಸಿಐ, ಐಪಿಎಲ್ ಟೂರ್ನಿಯ ಇನ್ನುಳಿದ ಭಾಗವನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದೀಗ ಇಂಗ್ಲೆಂಡ್ ಮಾಜಿ ಆಟಗಾರ ಮೈಕೆಲ್ ವಾನ್, ಬಿಸಿಸಿಐಗೆ ದೊಡ್ಡ ಆಫರ್ ನೀಡಿದ್ದಾರೆ.
"ಯುಕೆಯಲ್ಲಿಯೇ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವೇ ಎಂದು ನಾನು ಆಶ್ಚರ್ಯ ಪಡುತ್ತೇನೆ. ನಮ್ಮಲ್ಲಿ ಎಲ್ಲಾ ಸ್ಥಳಗಳಿವೆ ಮತ್ತು ಭಾರತೀಯ ಆಟಗಾರರು ಟೆಸ್ಟ್ ಸರಣಿಗಾಗಿ ಇಲ್ಲಿಯೇ ಉಳಿಯಬಹುದು. ಇದು ಕೇವಲ ಒಂದು ಆಲೋಚನೆ?," ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ.
IPL 2025: ಫಾರ್ಮ್ ಕಂಡುಕೊಳ್ಳಲು ರಿಷಭ್ ಪಂತ್‌ಗೆ ಮಹತ್ವದ ಸಲಹೆ ನೀಡಿದ ನವಜೋತ್ ಸಿಧು!
ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸಲು ಹಲವು ಕಾರಣಗಳಿವೆ. ಇತ್ತೀಚೆಗೆ, ಬಿಸಿಸಿಐ, ಆನ್‌ಲೈನ್ ಸಭೆಯನ್ನು ನಡೆಸಿತು. ಫ್ರಾಂಚೈಸಿಗಳ ಆಡಳಿತ ಮಂಡಳಿ ಮತ್ತು ಇತರರು ಇದರಲ್ಲಿ ಭಾಗವಹಿಸಿದ್ದರು. ಈ ಮೀಟಿಂಗ್‌ನಲ್ಲಿ ಆಟಗಾರರ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಯಿತು. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
I wonder if it’s possible to finish the IPL in the UK .. We have all the venues and the Indian players can then stay on for the Test series .. Just a thought ?
— Michael Vaughan (@MichaelVaughan) May 9, 2025
10.1 ಓವರ್‌ಗಳನ್ನು ಆಡಿದ್ದ ಪಂಜಾಬ್
ಇದಕ್ಕೂ ಮೊದಲು, ಮೇ 8 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. 10.1 ಓವರ್‌ಗಳ ನಂತರ ಪಂದ್ಯ ಸ್ಥಗಿತಗೊಂಡಿತ್ತು. ಇದಕ್ಕೆ ಕಾರಣ ಹಿಮಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ಡ್ರೋನ್ ದಾಳಿಗಳು ನಡೆಯುತ್ತಿದ್ದವು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿತ್ತು. ಪಂದ್ಯದ ಸಮಯದಲ್ಲಿ ಫ್ಲಡ್‌ಲೈಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸಲಿಲ್ಲ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಕ್ರೀಡಾಂಗಣದ ದೀಪಗಳನ್ನು ಆಫ್ ಮಾಡಲಾಗಿತ್ತು.
IPL 2025: ʻಒಂದು ವಾರದ ಬಳಿಕ ಐಪಿಎಲ್ ಪಂದ್ಯಗಳು ಪುನಾರಂಭʼ-ಬಿಸಿಸಿಐ ಸ್ಪಷ್ಟನೆ!
ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಕ್ರೀಸ್‌ಗೆ ಪ್ರವೇಶಿಸಿದ್ದಾಗಲೇ ಲೈಟ್ಸ್ ಆಫ್ ಆಯಿತು ಹಾಗೂ ಅವರು ಹಿಂತಿರುಗಬೇಕಾಯಿತು. ನಂತರ ಆಟಗಾರರು, ಪ್ರೇಕ್ಷಕರು ಸೇರಿದಂತೆ ಎಲರೂ ಕ್ರೀಡಾಂಗಣವನ್ನು ತೊರೆದಿದ್ದರು. ವರದಿಗಳ ಪ್ರಕಾರ, ವಿದೇಶಿ ಆಟಗಾರರು ಸಹ ಪರಿಸ್ಥಿತಿಯ ಬಗ್ಗೆ ಭೀತಿಗೊಂಡಿದ್ದಾರೆ. ಆದ್ದರಿಂದ, ಬಿಸಿಸಿಐ ಎಲ್ಲಾ ಆಯ್ಕೆಗಳನ್ನು ನೋಡುತ್ತಿದೆ. ಇದರಲ್ಲಿ ಟೂರ್ನಿಯನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ. ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಡರಾತ್ರಿ ಹೇಳಿಕೆ ನೀಡಿದ್ದಾರೆ. ಆಟಗಾರರನ್ನು ವಿಶೇಷ ರೈಲಿನ ಮೂಲಕ ದಿಲ್ಲಿಗೆ ಕರೆದೊಯ್ಯಲಾಗುವುದು ಎಂದು ಅವರು ಹೇಳಿದ್ದರು.