ICC ODI Rankings: ಅಗ್ರ ಸ್ಥಾನದ ಸನಿಹದಲ್ಲಿ ಶುಭಮನ್ ಗಿಲ್, ಆರನೇ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ!
ICC ODI Ranking: ಇಂಗ್ಲೆಂಡ್ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಐಸಿಸಿ ಏಕದಿನ ಕ್ರಿಕೆಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮಹತ್ವದ ಏರಿಕೆ ಕಂಡಿದ್ದಾರೆ. ಆದರೆ, ಆರಂಭಿಕ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಕುಸಿದಿದ್ದಾರೆ.
![ಒಡಿಐ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೇರಿದ ಶುಭಮನ್ ಗಿಲ್!](https://cdn-vishwavani-prod.hindverse.com/media/original_images/Shubman_Gill-ICC_ODI_Rankig.jpg)
Shubman Gill
![Profile](https://vishwavani.news/static/img/user.png)
ನವದೆಹಲಿ: ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೇಷ್ಠ ಲಯದಲ್ಲಿರುವ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರು ಐಸಿಸಿ ಒಡಿಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಸನಿಹವಾಗಿದ್ದಾರೆ. ಅವರು 781 ಅಂಕಗಳನ್ನು ಕಲೆ ಹಾಕಿದ್ದು, ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇದರೊಂದಿಗೆ ಅಗ್ರ ಸ್ಥಾನದಲ್ಲಿರುವ ಬಾಬರ್ ಆಝಮ್ ( 786)ರನ್ನು ಅವರು ಇನ್ನು ಕೆಲವೇ ದಿನಗಳಲ್ಲಿ ಹಿಂದಿಕ್ಕುವ ಸಾಧ್ಯತೆ ಇದೆ. ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಪಿ ಟೂರ್ನಿಯಲ್ಲಿ ಅವರು ಇದೇ ಲಯವನ್ನು ಮುಂದುವರಿಸಿದರೆ ಅಗ್ರ ಸ್ಥಾನವನ್ನು ಅಲಂಕರಿಸುವ ಸಾಧ್ಯತೆ ಇದೆ.
ಆಂಗ್ಲರ ಎದುರು ಏಕದಿನ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಶುಭಮನ್ ಗಿಲ್‌ರ ಸಹ ಆಟಗಾರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಶ್ರೇಯಾಂಕದ ಅಗ್ರ 10ರೊಳಗೆ ಪ್ರವೇಶಿಸಿದ್ದಾರೆ. ಇದೀಗ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಅಗ್ರ 10 ಶ್ರೇಯಾಂಕದಲ್ಲಿ ಭಾರತ ತಂಡದಿಂದ ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಇದ್ದಾರೆ. ಮೊದಲನೇ ಏಕದಿನ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಶ್ರೇಯಸ್ ಅಯ್ಯರ್ ಶ್ರೇಯಾಂಕದಲ್ಲಿ 10ನೇ ಸ್ಥಾನವನ್ನು ಅಲಂಕರಿಸಿದ್ದಾರೆ.
IND vs ENG: ತಮ್ಮ 7ನೇ ಶತಕದ ಮೂಲಕ ವಿಶೇಷ ದಾಖಲೆ ಬರೆದ ಶುಭಮನ್ ಗಿಲ್!
ಮತ್ತೊಂದೆಡೆ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕುಸಿದಿದ್ದಾರೆ. ರೋಹಿತ್ ಶರ್ಮಾ ಒಂದು ಸ್ಥಾನವನ್ನು ಕುಸಿದು ಮೂರನೇ ಶ್ರೇಯಾಂಕಕ್ಕೆ ಇಳಿದರೆ, ವಿರಾಟ್ ಕೊಹ್ಲಿ ಎರಡು ಸ್ಥಾನಗಳಲ್ಲಿ ಇಳಿಕೆ ಕಂಡು ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ ಅವರು ಎರಡನೇ ಏಕದಿನ ಪಂದ್ಯ 76 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದರು. ಆದರೆ, ಇವರಿಗಿಂತ ಗಿಲ್ ಅತ್ಯಂತ ಸ್ಥಿರ ಬ್ಯಾಟಿಂಗ್ ಪ್ರದರ್ಶನವನ್ನು ತೋರುತ್ತಿದ್ದಾರೆ. 2024ರ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದ ವಿರಾಟ್ ಕೊಹ್ಲಿ, ಇದೀಗ ಇಂಗ್ಲೆಂಡ್ ಸರಣಿಯ ಮೂಲಕ ಏಕದಿನ ಕ್ರಿಕೆಟ್‌ಗೆ ಮರಳಿದರೂ ಶ್ರೇಷ್ಠ ಪ್ರದರ್ಶನವನ್ನು ತೋರಲು ಸಾಧ್ಯವಾಗಿಲ್ಲ. ಆ ಮೂಲಕ ಶ್ರೇಯಾಂಕದಲ್ಲಿ ಐರ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಟೆಕ್ಟರ್‌ಗಿಂತ ಕೆಳ ಕ್ರಮಾಂಕಕ್ಕೆ ಇಳಿದಿದ್ದಾರೆ.
ಐಸಿಸಿ ಒಡಿಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳು
![ODI Batting Rankigs](https://cdn-vishwavani-prod.hindverse.com/media/images/ODI_Batting_Rankigs.width-800.jpg)