ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India-Pakistan Tension: ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ ಗುರುವಾರ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್‌ ಪಂದ್ಯ ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು. ಭಾರತೀಯ ಸೇನೆಯ ಸೂಚನೆ ಮೇರೆಗೆ ಪಂದ್ಯ ರದ್ದುಗೊಳಿಸಲಾಯಿತು. ಸೇನೆಯ ಸೂಚನೆ ಹಿನ್ನೆಲೆಯಲ್ಲಿ ಪಂದ್ಯ ಸ್ಥಗಿತಗೊಂಡ ಕೆಲ ನಿಮಿಷಗಳಲ್ಲೇ ಕ್ರೀಡಾಂಗಣವನ್ನು ಖಾಲಿ ಮಾಡಲಾಯಿತು.

ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

Profile Abhilash BC May 9, 2025 6:33 AM

ಜೈಪುರ: ‘ಆಪರೇಶನ್ ಸಿಂದೂರ'(Operation Sindoor) ಯಶಸ್ಸು ವಿರೋಧಿಸಿ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂಗೂ(Jaipur stadium) ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೇ 16 ರಂದು ಈ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್‌ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್(IPL 2025) ಪಂದ್ಯ ನಿಗದಿಯಾಗಿದೆ. ಅದಕ್ಕೂ ಮುನ್ನ ಬೆದರಿಕೆ ಬಂದಿದೆ.

ಬೆದರಿಕೆ ಬೆನ್ನಲ್ಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯದ ದಳ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇಮೇಲ್ ವಿಳಾಸ ಪತ್ತೆಗಾಗಿ ತನಿಖೆ ಮುಂದುವರೆದಿದೆ.

ಬಂದಿರುವ ಬೆದರಿಕೆ ಇಮೇಲ್‌ ಸಂದೇಶದಲ್ಲಿ, 'ಆಪರೇಷನ್ ಸಿಂದೂರದ ಯಶಸ್ಸಿನ ಕಾರಣಕ್ಕಾಗಿ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟಿಸುತ್ತೇವೆ. ನಿಮ್ಮಿಂದ ಸಾಧ್ಯವಾದರೆ ಎಲ್ಲರನ್ನು ಉಳಿಸಿಕೊಳ್ಳಿ’ ಎಂದು ಬರೆದಿತ್ತು.

ಐಪಿಎಲ್‌ ಪಂದ್ಯ ಅರ್ಧಕ್ಕೇ ರದ್ದು

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ ಗುರುವಾರ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್‌ ಪಂದ್ಯ ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು. ಭಾರತೀಯ ಸೇನೆಯ ಸೂಚನೆ ಮೇರೆಗೆ ಪಂದ್ಯ ರದ್ದುಗೊಳಿಸಲಾಯಿತು.

ಇದನ್ನೂ ಓದಿ IPL 2025: ರಾಜಸ್ಥಾನ್‌ ರಾಯಲ್ಸ್‌ ವೈಫಲ್ಯಕ್ಕೆ ನೈಜ ಕಾರಣ ತಿಳಿಸಿದ ಆಡಂ ಗಿಲ್‌ಕ್ರಿಸ್ಟ್‌!

ಸೇನೆಯ ಸೂಚನೆ ಹಿನ್ನೆಲೆಯಲ್ಲಿ ಪಂದ್ಯ ಸ್ಥಗಿತಗೊಂಡ ಕೆಲ ನಿಮಿಷಗಳಲ್ಲೇ ಕ್ರೀಡಾಂಗಣವನ್ನು ಖಾಲಿ ಮಾಡಲಾಯಿತು. ಭದ್ರತಾ ಸಿಬ್ಬಂದಿ ಸ್ಟ್ಯಾಂಡ್‌ಗೆ ಆಗಮಿಸಿ ಪ್ರೇಕ್ಷಕರನ್ನು ಹೊರ ಹೋಗಲು ಸೂಚಿಸಿದರು. ಆಟಗಾರರು, ಕೋಚ್‌, ಸಹಾಯಕ ಸಿಬ್ಬಂದಿ, ಫ್ರಾಂಚೈಸಿಗಳ ಮಾಲಿಕರು, ಪ್ರಾಯೋಜಕರು, ಮೈದಾನ ಸಿಬ್ಬಂದಿಗಳನ್ನು ಸ್ಥಳಾಂತರಿಸಲು ಬಿಸಿಸಿಐ ವಿಶೇಷ ರೈಲು ಸಜ್ಜುಗೊಳಿಸಿದೆ. ಶುಕ್ರವಾರ ಅವರನ್ನು ಸ್ಥಳಾಂತರಿಸಲಾಗುತ್ತದೆ.