#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ವಿರಾಟ್‌ ಕೊಹ್ಲಿ ಅಲ್ಲ, ಈ ಆಟಗಾರ ಮಿಂಚಿದ್ರೆ ಭಾರತ ಚಾಂಪಿಯನ್ಸ್‌ ಟ್ರೋಫಿ ಗೆಲ್ಲೋದು ಪಕ್ಕಾ: ಅಝರುದ್ದಿನ್‌!

Mohammed Azharuddin on Rohit Sharma: ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಇಂಗ್ಲೆಂಡ್‌ ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭರ್ಜರಿ ಕಮ್‌ಬ್ಯಾಕ್‌ ಮಾಡಿದರು. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ಅವರನ್ನು ಮಾಜಿ ನಾಯಕ ಮೊಹಮ್ಮದ್‌ ಅಝರುದ್ದೀನ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ರೋಹಿತ್‌ ಶರ್ಮಾಗೆ ಮಹತ್ವದ ಸಲಹೆ ನೀಡಿದ ಮೊಹಮ್ಮದ್‌ ಅಝರುದ್ದಿನ್‌!

Mohammed Azharuddin Praised Rohit Sharma

Profile Ramesh Kote Feb 10, 2025 5:40 PM

ಕಟಕ್‌: ಇಂಗ್ಲೆಂಡ್‌ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರನ್ನು ಮಾಜಿ ನಾಯಕ ಮೊಹಮ್ಮದ್‌ ಅಝರುದ್ದೀನ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ರೋಹಿತ್‌ ಶರ್ಮಾ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಭಾರತ ತಂಡ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಗೆಲ್ಲುವುದು ಪಕ್ಕಾ ಎಂದು ಅಝರುದ್ದೀನ್‌ ಭವಿಷ್ಯ ನುಡಿದಿದ್ದಾರೆ. ಶನಿವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾರ 32ನೇ ಶತಕದ ಬಲದಿಂದ ಭಾರತ ತಂಡ 4 ವಿಕೆಟ್‌ಗಳಿಂದ ಗೆಲುವು ಪಡೆಯಿತು. ಆ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಟೀಮ್‌ ಇಂಡಿಯಾ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿತು. ರೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ರೋಹಿತ್‌ ಶರ್ಮಾ ಅವರು 2024ರ ಐಸಿಸಿ ಟಿ20 ವಿಶ್ವಕಪ್‌ ಬಳಿಕ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. ಎಲ್ಲಾ ಸ್ವರೂಪದಲ್ಲಿಯೂ ಅವರು ಆಡಿದ್ದ 16 ಇನಿಂಗ್ಸ್‌ಗಳಿಂದ ಕೇವಲ 166 ರನ್‌ಗಳನ್ನು ಮಾತ್ರ ಕಲೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು ಹಾಗೂ ಅವರ ವೃತ್ತಿ ಜೀವನದ ಅಂತ್ಯದ ಬಗ್ಗೆ ಹಲವರು ಚರ್ಚೆಗಳನ್ನು ನಡೆಸುತ್ತಿದ್ದರು. ಆದರೆ, ಕಟಕ್‌ ಪಂದ್ಯದಲ್ಲಿ 90 ಎಸೆತಗಳಲ್ಲಿ 119 ರನ್‌ಗಳನ್ನು ಕಲೆ ಹಾಕುವ ಮೂಲಕ ತಮ್ಮ ಹಳೆಯ ಫಾರ್ಮ್‌ಗೆ ಮರಳಿದ್ದಾರೆ.

IND vs ENG: ಸೆಂಚುರಿ ಬಾರಿಸಿ ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರೋಹಿತ್‌ ಶರ್ಮಾ!

ರೋಹಿತ್‌ ಶರ್ಮಾ ಮಿಂಚಿದರೆ ಭಾರತ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲಿದೆ

ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಆರಂಭವಾಗಲಿದೆ. ಇದೀಗ ರೋಹಿತ್‌ ಶರ್ಮಾ ಅವರು ಬ್ಯಾಟಿಂಗ್‌ ಫಾರ್ಮ್‌ಗೆ ಮರಳಿರುವುದು ಟೀಮ್‌ ಇಂಡಿಯಾ ಪಾಲಿಗೆ ಪ್ಲಸ್‌ ಪಾಯಿಂಟ್‌ ಆಗಿದೆ. ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಭಾರತದ ಮಾಜಿ ನಾಯಕ ಮೊಹಮ್ಮದ್‌ ಅಝರುದ್ದಿನ್‌, ರೋಹಿತ್‌ ಶರ್ಮಾ ಉತ್ತಮ ಪ್ರದರ್ಶನ ತೋರಿದರೆ, ಟೀಮ್‌ ಇಂಡಿಯಾ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

"ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ನಿಮಿತ್ತ ರೋಹಿತ್‌ ಶರ್ಮಾಗೆ ಶುಭ ಹಾರೈಸಲು ಬಯಸುತ್ತೇನೆ. ರೋಹಿತ್‌ ಶರ್ಮಾ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ. ಭಾರತ ತಂಡ ಪ್ರಶಸ್ತಿ ಗೆಲ್ಲುವುದಲ್ಲಿ ಯಾವುದೇ ಅನುಮಾನವಿಲ್ಲ. ಅವರ ಫಾರ್ಮ್‌ ಸರಿಯಾದ ಸಮಯದಲ್ಲಿ ಬಂದಿದೆ," ಎಂದು ಮೊಹಮ್ಮದ್‌ ಅಝರುದ್ದಿನ್‌ ತಿಳಿಸಿದ್ದಾರೆ.

IND vs ENG 2nd ODI: ರೋಹಿತ್‌ ಶತಕ ವೈಭವ; ಭಾರತಕ್ಕೆ ಸರಣಿ ಗೆಲುವಿನ ಸಂಭ್ರಮ

ರೋಹಿತ್‌ ಶರ್ಮಾಗೆ ಅಭಿನಂದನೆ

ಶತಕದ ಮೂಲಕ ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತದ ಎರಡನೇ ಓಪನರ್‌ ಎಂಬ ದಾಖಲೆಯನ್ನು ರೋಹಿತ್‌ ಶರ್ಮಾ ಬರೆದಿದ್ದರು. ಆ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರನ್ನು ಹಿಂದಿಕ್ಕಿದ್ದಾರೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾಗೆ ಅಭಿನಂದನೆ ಸಲ್ಲಿಸಿದ ಮೊಹಮ್ಮದ್‌ ಅಝರುದ್ದಿನ್‌, ಟೀಮ್‌ ಇಂಡಿಯಾ ನಾಯಕ ಇದೇ ಲಯವನ್ನು ಮುಂದುವರಿಸಬೇಕೆಂದು ಆಶಿಸಿದ್ದಾರೆ.

"ರೋಹಿತ್‌ ಶರ್ಮಾ ಕ್ಲಾಸ್‌ ಬ್ಯಾಟ್ಸ್‌ಮನ್‌ ಹಾಗೂ ಅವರು ರನ್‌ ಹೊಳೆ ಹರಿಸುತ್ತಾರೆ, ಭಾನುವಾರದಂತೆ ಮುಂದಿನ ಪಂದ್ಯಗಳಲ್ಲಿಯೂ ಅವರು ಫಾರ್ಮ್‌ನಲ್ಲಿ ಮುಂದುವರಿಯಲಿ. ಭಾನುವಾರ ಅವರು ತುಂಬಾ ಚೆನ್ನಾಗಿ ಬ್ಯಾಟ್‌ ಮಾಡಿದ್ದಾರೆ ಹಾಗೂ ಕೆಲ ದಾಖಲೆಗಳನ್ನು ಮುರಿದಿದ್ದಾರೆಂದು ಕೇಳಿದ್ದೇನೆ. ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ಅವರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿಯೂ ಉತ್ತಮ ಪ್ರದರ್ಶನ ತೋರಬೇಕೆಂದು ನಾನು ಬಯಸುತ್ತೇನೆ," ಎಂದು ಮಾಜಿ ಬ್ಯಾಟ್ಸ್‌ಮನ್‌ ಹೇಳಿದ್ದಾರೆ.