Self Harming: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ, ಅಕ್ರಮ ಸಂಬಂಧ ಹೊಂದಿದ್ದ ಪತಿಯತ್ತ ಸಂಶಯ
ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಈಕೆ ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪತಿ- ಪತ್ನಿ ನಡುವೆ ಜಗಳವಾಗುತ್ತಲೂ ಇತ್ತು. ಇದೀಗ ಆಕೆ ನೇಣಿಗೆ ಶರಣಾಗಿದ್ದಾಳೆ.

ಮೃತ ಬಾಹರ್ ಆಸ್ಮಾ

ಬೆಂಗಳೂರು: ಪತಿಗೆ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ (illicit relationship) ಇದೆ ಎಂಬ ಕಾರಣದಿಂದ ಮನನೊಂದಿದ್ದ ಪತ್ನಿಯೊಬ್ಬಳು (wife) ಶವವಾಗಿ ಪತ್ತೆಯಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ (self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆದರೆ ಇದು ಗಂಡನೇ (husband) ಮಾಡಿರುವ ಕೊಲೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಸಾವಿಗೀಡಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಈಕೆ ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪತಿ- ಪತ್ನಿ ನಡುವೆ ಜಗಳವಾಗುತ್ತಲೂ ಇತ್ತು. ಇದೀಗ ಆಕೆ ನೇಣಿಗೆ ಶರಣಾಗಿದ್ದಾಳೆ. ಆದರೆ ಆಕೆಯ ಪೋಷಕರು, ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಾಲೆಯಲ್ಲಿ ಈಜಲು ಹೋದ ಒಂದೇ ಕುಟುಂಬದಮೂವರು ಮಕ್ಕಳು ನೀರುಪಾಲು
ಮಂಡ್ಯ: ವಿಶ್ವೇಶ್ವರಯ್ಯ ನಾಲೆಗೆ (VC Canal) ಈಜಲು ಹೋಗಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಾರ್ತ್ ಬ್ಯಾಂಕ್ ಬಳಿ ಘಟನೆ ನಡೆದಿದೆ. ಸೋನು (17), ಸಿಮ್ರಾನ್ (16), ಸಿದ್ದೀಶ್ (9) ಮೃತರು. ಮೈಸೂರಿನ ಗೌಸಿಯಾನಗರದ ಈ ಮೂವರು ಚಿಕ್ಕಾಯರಹಳ್ಳಿ ಮಾರಮ್ಮ ಜಾತ್ರೆಗೆ ಬಂದಿದ್ದರು. ಈ ವೇಳೆ ಈಜಲು ಹೋಗಿ ವಿಸಿ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಸೋನು, ಸಿದ್ದೀಶ್‌ನ ಮೃತದೇಹ ಪತ್ತೆಯಾಗಿದ್ದು, ಸಿಮ್ರಾನ್ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರ ದಾರುಣ ಸಾವು