ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ : ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್ ರಮೇಶ್ ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ ನವೀನ್ ಭಟ್ ರವರು ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಯುವಜನರ ಭವಿಷ್ಯಕ್ಕಾಗಿ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ನು ಜಿಲ್ಲೆಯ ಅರ್ಹ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

Ashok Nayak Ashok Nayak Jul 24, 2025 11:06 PM

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್ ರಮೇಶ್ ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ ನವೀನ್ ಭಟ್ ರವರು ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಯುವಜನರ ಭವಿಷ್ಯಕ್ಕಾಗಿ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ನು ಜಿಲ್ಲೆಯ ಅರ್ಹ ಉದ್ಯೋಗಾಕಾಂಕ್ಷಿ ಯುವಕ ಯುವತಿ ಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: China Open: ಪಿ.ವಿ.ಸಿಂಧು, ಸಾತ್ವಿಕ್‌–ಚಿರಾಗ್‌ ಜೋಡಿ ಗೆಲುವಿನ ಶುಭಾರಂಭ

ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಕೆ ಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ. ಬಸವರಾಜು,  ಜಿಲ್ಲಾ ಉದ್ಯೋಗಾಧಿಕಾರಿ ಎಂ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ರೆಡ್ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆಳಗಿನಮನಿ, ಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ರಾಮಕೃಷ್ಣಪ್ಪ, ಜಿ.ಸುಬ್ಬಾರೆಡ್ಡಿ, ಆದಿರೆಡ್ಡಿ, ಸದಸ್ಯರಾದ ಜಯರಾಮ್, ನಾರಾಯಣಸ್ವಾಮಿ, ನಿರ್ಮಲ ಗಂಗಾಧರ, ಎಂ.ಕೆ ವೇಣುಗೋಪಾಲ್, ಮುನಿನಾರಾಯಣಪ್ಪ, ಟಿ. ರಾಧಾಕೃಷ್ಣ , ತಾರಾನಾಥ್, ಮಧುಸೂದನ್ ರೆಡ್ಡಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.