IND vs AUS ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದರೆ ಏನು? ಫೈನಲ್‌ಗೆ ಯಾವ ತಂಡ?
IND vs AUS: 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮಳೆ ಬರುವ ಸಾಧ್ಯತೆ ಕಡಿಮೆ, ಆದರೆ ಐಸಿಸಿ ಸೆಮಿಫೈನಲ್ ಮತ್ತು ಫೈನಲ್ ಎರಡಕ್ಕೂ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ.

ವರುಣ್ ಚಕ್ರವರ್ತಿ-ಸ್ಟೀವನ್ ಸ್ಮಿತ್

ದುಬೈ: ಪ್ರಸ್ತುತ ನಡೆಯುತ್ತಿರುವ 2025ರ ಚಾಂಪಿಯನ್ಸ್ ಟ್ರೋಫಿ (Champions Trophy 2025) ಟೂರ್ನಿಯು ನಿರ್ಣಾಯಕ ಹಂತವನ್ನು ತಲುಪಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 4 ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಸೆಮಿಫೈನಲ್ ಪಂದ್ಯವು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯ ಹಲವು ಪಂದ್ಯಗಳ ಮೇಲೆ ಮಳೆ ಪ್ರಭಾವ ಬೀರಿದೆ. ಮಳೆಯ ಕಾರಣ ಮೂರು ಪಂದ್ಯಗಳ ಫಲಿತಾಂಶವಿಲ್ಲದೆ ರದ್ದಾಗಿವೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಮಳೆಯಿಂದಾಗಿ ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆ. ಆದಾಗ್ಯೂ, ಸೆಮಿಫೈನಲ್ ಪಂದ್ಯದ ಸಮಯದಲ್ಲಿ ಅನಿರೀಕ್ಷಿತವಾಗಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಪೂರ್ಣಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತದೆ. ಇದು ಸಾಧ್ಯವಾಗದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ನಿಲ್ಲಿಸಿದ ಅವಧಿಯಿಂದ ಮುಂದುವರಿಸಲಾಗುತ್ತದೆ. ಐಸಿಸಿ ಸೆಮಿಫೈನಲ್ ಹಾಗೂ ಫೈನಲ್ ಎರಡಕ್ಕೂ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ.
IND vs AUS: ʻದುಬೈ ನಮ್ಮ ತವರು ಅಂಗಣವಲ್ಲʼ-ಟೀಕಾಕಾರರಿಗೆ ರೋಹಿತ್ ಶರ್ಮಾ ತಿರುಗೇಟು!
ಮೀಸಲು ದಿನದಂದು ಫಲಿತಾಂಶ ಮೂಡಿಬಂದಿಲ್ಲವಾದರೆ ಏನು?
ಮೀಸಲು ದಿನದಂದು ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರ್ಧಾರವಾಗದಿದ್ದರೆ ಯಾವ ತಂಡ ಸೆಮಿಫೈನಲ್ ತಲುಪುತ್ತದೆ? ಐಸಿಸಿ ನಿಯಮಗಳ ಪ್ರಕಾರ, ಇದು ನಡೆದರೆ ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯುವ ತಂಡ ಫೈನಲ್ ಸುತ್ತಿಗೆ ಅರ್ಹತೆ ಪಡೆಯಲಿದೆ. ಭಾರತ ತಂಡವು ತನ್ನ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಒಂದು ವೇಳೆ ಪಂದ್ಯ ನಡೆಯದಿದ್ದರೆ, ಭಾರತ ಫೈನಲ್‌ಗೆ ಲಗ್ಗೆ ಇಡಲಿದೆ. ಆದರೆ ಆಸ್ಟ್ರೇಲಿಯಾ ತಂಡದ ಅಭಿಯಾನ ಕೊನೆಗೊಳ್ಳುತ್ತದೆ.
IND vs AUS: ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮೇಲುಗೈ
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ ನಾಲ್ಕು ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ಎರಡು ಪಂದ್ಯಗಳನ್ನು ಗೆದ್ದರೆ, ಆಸ್ಟ್ರೇಲಿಯಾ ಒಂದು ಪಂದ್ಯವನ್ನು ಗೆದ್ದಿದೆ. ಒಂದು ಪಂದ್ಯ ಮಳೆಯಿಂದಾಗಿ ಫಲಿತಾಂಶ ಮೂಡಿಬಂದಿರಲಿಲ್ಲ. ನಾಕೌಟ್ ಪಂದ್ಯಗಳಲ್ಲಿ ಭಾರತ, ಆಸ್ಟ್ರೇಲಿಯಾ ವಿರುದ್ಧ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದೆ. 1998 ಮತ್ತು 2000ರ ಸಾಲಿನ ಚಾಂಪಿಯನ್ಸ್ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಭಾರತ, ಆಸ್ಟ್ರೇಲಿಯಾ ತಂಡವನ್ನು ಮಣಿಸಿತ್ತು. ಇದೀಗ ಸುಮಾರು 25 ವರ್ಷಗಳ ನಂತರ ಎರಡೂ ತಂಡಗಳು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯ ನಾಕೌಟ್‌ನಲ್ಲಿ ಮುಖಾಮುಖಿಯಾಗಲಿವೆ.
ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿ.ಕೀ) ಹಾರ್ದಿಕ್ ಪಾಂಡ್ಯ ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ
IND vs AUS ನಡುವೆ ಸೆಮಿಫೈನಲ್ ಗೆಲ್ಲುವ ನೆಚ್ಚಿನ ತಂಡವನ್ನು ಆರಿಸಿದ ಸುನೀಲ್ ಗವಾಸ್ಕರ್!
ಪಂದ್ಯದ ವಿವರ
ಭಾರತ vs ಆಸ್ಟ್ರೇಲಿಯಾ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025
ದಿನಾಂಕ: ಮಾರ್ಚ್ 4, 2024
ಸಮಯ: ಮಧ್ಯಾಹ್ನ 02:30ಕ್ಕೆ
ಸ್ಥಳ: ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣ, ದುಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟೀಮಿಂಗ್: ಡಿಸ್ನಿ ಹಾಟ್‌ಸ್ಟಾರ್