IND vs ENG: ರಾಹುಲ್ ಇನ್, ಪಂತ ಔಟ್! ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
India's Probable Playing XI: ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಕ್ಕೆ ಇನ್ನು ಕೇವಲ ಎರಡು ದಿನಗಳು ಬಾಕಿ ಇವೆ. ಫೆಬ್ರವರಿ 6 ರಂದು ನಾಗ್ಪುರದಲ್ಲಿ ನಡಯುವ ಮೊದಲನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಅನ್ನು ಇಲ್ಲಿ ವಿವರಿಸಲಾಗಿದೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧ 4-1 ಅಂತರದಲ್ಲಿ ಟಿ20ಐ ಸರಣಿಯನ್ನು ಮುಡಿಗೇರಿಸಿಕೊಂಡ ಬಳಿಕ ಭಾರತ ತಂಡ, ಇದೀಗ ಇದೇ ತಂಡದ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಡಲು ಎದುರು ನೋಡುತ್ತಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ರಿಷಭ್ ಪಂತ್, ಕೆಎಲ್ ರಾಹುಲ್ ಭಾರತ ಏಕದಿನ ತಂಡಕ್ಕೆ ಮರಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರು, ಏಕದಿನ ಸರಣಿಯನ್ನು ಗೆಲ್ಲುವ ವಿಶ್ವಾಸವನ್ನು ಹೊಂದಿದ್ದಾರೆ.
ಮೊದಲನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ವಿಕೆಟ್ ಕೀಪರ್ ಆಗಿ ಯಾರನ್ನು ಆಡಿಸಬೇಕೆಂಬ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್‌ಗೆ ಇನ್ನೂ ಗೊಂದಲವಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತ ತಂಡಕ್ಕೆ ವಿಕೆಟ್ ಕೀಪರ್‌ಗಳಾಗಿ ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
IND vs ENG: ಸಚಿನ್ ತೆಂಡೂಲ್ಕರ್‌ರ 19 ವರ್ಷಗಳ ದಾಖಲೆ ಮೇಲೆ ವಿರಾಟ್ ಕೊಹ್ಲಿ ಕಣ್ಣು!
ರಿಷಭ್ ಪಂತ್ ಬದಲು ಕೆಎಲ್ ರಾಹುಲ್?
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಅವರು ಯೋಗ್ಯ ಪ್ರದರ್ಶನವನ್ನು ತೋರಿದ್ದರು. ಆದರೆ, ರಿಷಭ್ ಪಂತ್ ವಿಕೆಟ್ ಕೀಪಿಂಗ್‌ನಲ್ಲಿ ಗಮನ ಸೆಳೆದಿದ್ದರೂ ಬ್ಯಾಟಿಂಗ್‌ನಲ್ಲಿ ಹಲವು ಬಾರಿ ಬೇಜವಾಬ್ದಾರಿಯುತ ಹೊಡೆತಗಳಲ್ಲಿ ಕೈ ಹಾಕಿ ವಿಕೆಟ್ ಅನ್ನು ಕೈ ಚೆಲ್ಲಿದ್ದರು. ಫಿಟ್‌ನೆಸ್ ಹಾಗೂ ಕಳೆದ ಟೆಸ್ಟ್ ಸರಣಿಯಲ್ಲಿನ ಪ್ರದರ್ಶನದ ಆಧಾರದ ಮೇಲೆ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ಕೆಎಲ್ ರಾಹುಲ್ ಪ್ಲೇಯಿಂಗ್ xIನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.
ಯಶಸ್ವಿ ಜೈಸ್ವಾಲ್‌ಗೆ ಚಾನ್ಸ್ ಸಿಗುತ್ತಾ?
ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ಟೀಮ್ ಮ್ಯಾನೇಜ್‌ಮೆಂಟ್‌ಗೆ ಮತ್ತೊಂದು ತಲೆ ನೋವು ಶುರುವಾಗಿದೆ. ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಸಿಗಲಿದೆಯಾ?ಅಥವಾ ಇಲ್ಲವಾ? ಎಂಬ ಬಗ್ಗೆ ಕೂಡ ಗೊಂದಲಿದೆ. ನಾಯಕ ರೋಹಿತ್ ಶರ್ಮಾ ಅವರು ಶುಭಮನ್ ಗಿಲ್ ಅವರೊಂದಿಗೆ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ. ಅದರಂತೆ ಈ ಜೋಡಿ 50 ಓವರ್‌ಗಳ ಸ್ವರೂಪದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಆದರೆ, ಎಡಗೈ-ಬಲಗೈ ಸಂಯೋಜನೆ ಆಡಿಸುವ ಯೋಜನೆ ಬಂದರೆ, ಆಗ ಜೈಸ್ವಾಲ್ ಅವರನ್ನು ಆರಂಭಿಕನನ್ನಾಗಿ ಆಡಿಸಿ, ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದರೂ ಅಚ್ಚರಿ ಇಲ್ಲ.
IND vs ENG: ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸೂರ್ಯಕುಮಾರ್ ಯಾದವ್ ವಿರುದ್ಧ ಅಶ್ವಿನ್ ಕಿಡಿ!
ಶ್ರೇಯಸ್ ಅಯ್ಯರ್ ಮರಳುವ ಸಾಧ್ಯತೆ
ಮುಂಬೈ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಏಕದಿನ ತಂಡಕ್ಕೆ ಮರಳುವ ಸಾಧ್ಯತೆ ಇದ್ದು, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು. ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಲ್‌ರೌಂಡರ್‌ಗಳಾಗಿ ಆಡಲಿದ್ದಾರೆ. ಅರ್ಷದೀಪ್ ಸಿಂಗ್ ಜೊತೆ ಹಿರಿಯ ವೇಗಿ ಮೊಹಮ್ಮದ್ ಶಮಿ ಹೊಸ ಚೆಂಡನ್ನು ಹಂಚಿಕೊಳ್ಳಬಹುದು. ಮೂವರು ವೇಗಿಗಳು ಆಡಬೇಕೆಂದು ಬಯಸಿದರೆ ಹರ್ಷಿತ್ ರಾಣಾಗೆ ಅವಕಾಶ ನೀಡಬಹುದು.
IND vs ENG: ಮೊಹಮ್ಮದ್ ಶಮಿಯ ವಿಶ್ವಾಸ ಹೆಚ್ಚಾಗಿದೆ ಎಂದ ಪಾರ್ಥೀವ್ ಪಟೇಲ್!
ಇಂಗ್ಲೆಂಡ್ ವಿರುದ್ದದ ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ