IND vs ENG 1st T20I: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ!
IND vs ENG 1st T20I: ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೊದಲನೇ ಟಿ20ಐ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಟಿ20ಐ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಇಂಗ್ಲೆಂಡ್ ವಿರುದ್ದ ಮುಂದುವರಿಸಲು ಎದುರು ನೋಡುತ್ತಿದೆ. ಅಂದ ಹಾಗೆ 2024ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದವು.
IND vs Eng: ಟಿ20ಐ ಸರಣಿಯಲ್ಲಿ ಭಾರತಕ್ಕೆ ಕೀ ಆಟಗಾರನನ್ನು ಆರಿಸಿದ ಆಕಾಶ್ ಚೋಪ್ರಾ!
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಪೂರ್ಣ ಪ್ರಮಾಣದ ವೇಗದ ಬೌಲರ್ ಆಗಿ ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ಕುಮಾರ್ ರೆಡ್ಡಿ ಸೀಮ್ ಬೌಲಿಂಗ್ ಆಲ್‌ರೌಂಡರ್‌ಗಳಾಗಿ ಆಡುತ್ತಿದ್ದಾರೆ. ಇನ್ನು ಅಕ್ಷರ್ ಪಟೇಲ್ ಸ್ಪಿನ್ ಆಲ್‌ರೌಂಡರ್ ಆಗಿ ಆಡುತ್ತಿದ್ದರೆ, ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯ್ ಅವರು ಪೂರ್ಣ ಪ್ರಮಾಣದ ಸ್ಪಿನ್ನರ್‌ಗಳಾಗಿ ಆಡುತ್ತಿದ್ದಾರೆ. ಇನ್ನುಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಇಲ್ಲ.
A look at our Playing XI 🔽
— BCCI (@BCCI) January 22, 2025
Follow The Match ▶️ https://t.co/4jwTIC5zzs#TeamIndia | #INDvENG | @IDFCFIRSTBank pic.twitter.com/NHhYbQmNgf
ಭಾರತ ತಂಡದ ಪ್ಲೇಯಿಂಗ್ XI
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿ .ಕೀ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿ.ಕೀ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಧ್ರುವ ಜುರೆಲ್, ಹರ್ಷಿತ್ ರಾಣಾ
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿ.ಕೀ), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಬ್ರೈಡನ್ ಕಾರ್ಸ್, ಜೇಮಿ ಸ್ಮಿತ್, ರೆಹಾನ್ ಅಹ್ಮದ್
A reminder of our XI to kick the series v India off... 🗒️https://t.co/Swuuwb6XCG
— England Cricket (@englandcricket) January 22, 2025
ಇಂಗ್ಲೆಂಡ್ ತಂಡದ ಪ್ಲೇಯಿಂಗ್ XI
ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿ.ಕೀ), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್