ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್; ಭಾರತ ಪರ ಚಕ್ರವರ್ತಿ ಪದಾರ್ಪಣೆ
IND vs ENG 2nd ODI: ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆಲ್ ರೌಂಡರ್ ರವೀಂದ್ರ ಜಡೇಜ ಕ್ಯಾಪ್ ನೀಡಿ ತಂಡಕ್ಕೆ ಸ್ವಾಗತಿಸಿದರು. ಟಿ20ಯಲ್ಲಿ 18 ಪಂದ್ಯ ಆಡಿರುವ ಚಕ್ರವರ್ತಿ 33 ವಿಕೆಟ್ ಕಿತ್ತಿದ್ದಾರೆ. ಕಳೆದ ಇಂಗ್ಲೆಂಡ್ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳಿಂದ 14 ವಿಕೆಟ್ ಉರುಳಿಸಿದ್ದರು.

Varun Chakravarthy

ಕಟಕ್: ಇಲ್ಲಿ ನಡೆಯುತ್ತಿರುವ ದ್ವಿತೀಯ ಏಕದಿನ(IND vs ENG 2nd ODI) ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ನಿರೀಕ್ಷೆಯಂತೆ ಭಾರತ ತಂಡ ಈ ಪಂದ್ಯಕ್ಕೆ ಎರಡು ಬದಲಾವಣೆ ಮಾಡಿಕೊಂಡಿದೆ. ಮಂಡಿ ನೋವಿನಿಂದಾಗಿ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಮತ್ತು ವರುಣ್ ಚಕ್ರವರ್ತಿ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿದರು. ಇವರಿಗಾಗಿ ಜಾಗ ಬಿಟ್ಟವರು ಯಶಸ್ವಿ ಜೈಸ್ವಾಲ್ ಮತ್ತು ಕುಲ್‌ದೀಪ್ ಯಾದವ್. ರೋಹಿತ್ ಶರ್ಮ ಜತೆ ಎಂದಿನಂತೆ ಶುಭಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಮೊದಲ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ದುಬಾರಿಯಾಗಿದ್ದರು. ಹೀಗಾಗಿ ಅವರನ್ನು ದ್ವಿತೀಯ ಪಂದ್ಯದಿಂದ ಕೈಬಿಡಲಾಯಿತು. ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆಲ್ ರೌಂಡರ್ ರವೀಂದ್ರ ಜಡೇಜ ಕ್ಯಾಪ್ ನೀಡಿ ತಂಡಕ್ಕೆ ಸ್ವಾಗತಿಸಿದರು. ಟಿ20ಯಲ್ಲಿ 18 ಪಂದ್ಯ ಆಡಿರುವ ಚಕ್ರವರ್ತಿ 33 ವಿಕೆಟ್ ಕಿತ್ತಿದ್ದಾರೆ. ಕಳೆದ ಇಂಗ್ಲೆಂಡ್ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳಿಂದ 14 ವಿಕೆಟ್ ಉರುಳಿಸಿದ್ದರು. ಇದೇ ಪ್ರದರ್ಶನ ಕಂಡು ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿತ್ತು. ಒಂದೊಮ್ಮೆ ಅವರು ಇಂದಿನ ಪಂದ್ಯದಲ್ಲಿಯೂ ಮಿಂಚಿದರೆ ಚಾಂಪಿಯನ್ಸ್ ಟ್ರೋಫಿ ತಂಡಕ್ಕೂ ಸೇರ್ಪಡೆಯಾಗುವ ಸಾಧ್ಯತೆ ಇದೆ. ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿಯೂ ಕೀಪರ್ ಆಗಿ ಮುಂದುವರಿದ ಕಾರಣ ರಿಷಭ್ ಪಂತ್ ಈ ಪಂದ್ಯದಲ್ಲಿಯೂ ಬೆಂಚ್ ಕಾಯಬೇಕಾಯಿತು.
Today's Playing XI 🙌
— BCCI (@BCCI) February 9, 2025
2️⃣ Changes for #TeamIndia
Updates ▶️ https://t.co/NReW1eEiE7#INDvENG | @IDFCFIRSTBank pic.twitter.com/5nTl3lsh4r
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ.), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಮಾಜಿ ವೇಗಿ
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿ.ಕೀ), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್‌ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.