IND vs ENG 2nd T20I: ಟಾಸ್ ಗೆದ್ದು ಚೇಸಿಂಗ್ ಆಯ್ದುಕೊಂಡ ಭಾರತ!
IND vs ENG 2nd T20I: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಎರಡನೇ ಟಿ20ಐ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಎದುರಾಳಿ ಇಂಗ್ಲೆಂಡ್ ತಂಡವನ್ನು ಮೊದಲ ಬ್ಯಾಟಿಂಗ್ ಆಹ್ವಾನಿಸಿದೆ.

IND vs ENG 2nd T20I Live

ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟಿ20ಐ ಪಂದ್ಯದ ಇದೀಗ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಆ ಮೂಲಕ ಕಳೆದ ಪಂದ್ಯದಂತೆ ಈ ಕಾದಾಟದಲ್ಲಿಯೂ ಆಂಗ್ಲರು ಮೊದಲು ಬ್ಯಾಟಿಂಗ್ ನಡೆಸುತ್ತಿದ್ದಾರೆ.
ಎರಡನೇ ಟಿ20ಐ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ಪ್ರತ್ಯೇಕ ಗಾಯಗಳಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಟಿ20ಐ ಸರಣಿಯ ಇನ್ನುಳಿದ ಭಾಗದಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡನೇ ಟಿ20ಐಗೆ ಭಾರತ ತಂಡದಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ.
ರಿಂಕು ಸಿಂಗ್ ಹಾಗೂ ನಿತೀಶ್ ರೆಡ್ಡಿ ಕಳೆದ ಪಂದ್ಯದ ಪ್ಲೇಯಿಂಗ್ XIನಲ್ಲಿ ಆಡಿದ್ದರು. ಇದೀಗ ಇವರ ಸ್ಥಾನಕ್ಕೆ ಧ್ರುವ್ ಜುರೆಲ್ ಮತ್ತು ವಾಷಿಂಗ್ಟನ್ ಸುಂದರ್ ಆಡುವ ಬಳಗಕ್ಕೆ ಬಂದಿದ್ದಾರೆ. ಇನ್ನು ಟಿ20ಐ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಶಿವಂ ದುಬೆ ಮತ್ತು ರಮಣ್‌ದೀಪ್ ಸಿಂಗ್ ಬಂದಿದ್ದಾರೆ.
IND vs ENG: ಟಿ20ಐ ಸರಣಿಯ ಇನ್ನುಳಿದ ಭಾಗದಿಂದ ರಿಂಕು ಸಿಂಗ್, ನಿತೀಶ್ ರೆಡ್ಡಿ ಔಟ್!
ಮೊದಲನೇ ಟಿ20ಐ ಪಂದ್ಯ ಗೆದ್ದಿದ್ದ ಭಾರತ
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಜನವರಿ 22 ರಂದು ನಡೆದಿದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆದಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಇಂಗ್ಲೆಂಡ್ : ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿ.ಕೀ), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮಿ ಸ್ಮಿತ್, ಜೇಮಿ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್
Our Playing XI for #INDvENG
— BCCI (@BCCI) January 25, 2025
2️⃣ Changes in the side 👍
Updates ▶️ https://t.co/6RwYIFWg7i#TeamIndia | @IDFCFIRSTBank pic.twitter.com/9Hnhhd2JIH
ಭಾರತ : ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
ಭಾರತ ತಂಡ: ಸಂಜು ಸ್ಯಾಮ್ಸನ್ ವಿ.ಕೀ), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಮಣ್‌ದೀಪ್ ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಧ್ರುವ ಜುರೆಲ್, ಹರ್ಷಿತ್ ರಾಣಾ
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿ.ಕೀ), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜೇಮಿ ಸ್ಮಿತ್, ರೆಹಾನ್ ಅಹ್ಮದ್