ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ (IND vs ENG) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡುತ್ತಿದೆ.
ಟಾಸ್ ವೇಳೆ ಮಾತನಾಡಿದ ರೋಹಿತ್ ಶರ್ಮಾ ಭಾರತದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ ಎಂದು ತಿಳಿಸಿದ್ದಾರೆ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ವರುಣ್ ಚಕ್ರವರ್ತಿ ಸಂಪೂರ್ಣ ಫಿಟ್ ಇಲ್ಲದ ಕಾರಣ ಆಯ್ಕೆಗೆ ಲಭ್ಯರಾಗಿಲ್ಲ. ಈ ಮೂವರು ಸ್ಥಾನಗಳಿಗೆ ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಬಂದಿದ್ದಾರೆ.
IND vs ENG 2nd ODI: ರೋಹಿತ್ ಶತಕ ವೈಭವ; ಭಾರತಕ್ಕೆ ಸರಣಿ ಗೆಲುವಿನ ಸಂಭ್ರಮ
ಇನ್ನು ಪ್ರವಾಸಿ ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಜೇಮಿ ಓವರ್ಟನ್ ಅವರ ಸ್ಥಾನಕ್ಕೆ ಟಾಮ್ ಬ್ಯಾಂಟನ್ ಪ್ಲೇಯಿಂಗ್ XIಗೆ ಬಂದಿದ್ದಾರೆ. ಅಂದ ಹಾಗೆ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದಿದ್ದ ಭಾರತ ತಂಡ, ಈಗಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಎದುರು ನೋಡುತ್ತಿದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿ.ಕೀ), ಬೆನ್ ಡಕೆಟ್, ಟಾಮ್ ಬ್ಯಾಂಟನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್
ತಂಡಗಳ ವಿವರ
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್
ಇಂಗ್ಲೆಂಡ್ ತಂಡ: ಫಿಲಿಪ್ ಸಾಲ್ಟ್ (ವಿ.ಕೀ), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮಿ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಜೇಮಿ ಸ್ಮಿತ್, ಜಾಕೋಬ್ ಬೆಥೆಲ್