IND vs ENG 3rd T20: ಮೂರನೇ ಟಿ20 ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ತಂಡ ಹೀಗಿದೆ
ಅಕ್ಯುವೆದರ್ ಪ್ರಕಾರ, ಜನವರಿ 28 ರಂದು ರಾಜ್‌ಕೋಟ್‌ನಲ್ಲಿ ಹವಾಮಾನವು ಸ್ಪಷ್ಟವಾಗಿರುತ್ತದೆ, ಮಳೆಯಾಗುವ ಸಾಧ್ಯತೆಯಿಲ್ಲ. ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
![IND vs ENG 3rd T20: ಮೂರನೇ ಟಿ20 ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ತಂಡ ಹೀಗಿದೆ](https://cdn-vishwavani-prod.hindverse.com/media/original_images/niranjan_shah_stadium.jpg)
niranjan shah stadium
![Profile](https://vishwavani.news/static/img/user.png)
ರಾಜ್ ಕೋಟ್: ಮೊದಲೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತೀಯ ತಂಡವು ಮಂಗಳವಾರ ನಡೆಯುವ ಮೂರನೇ ಟಿ20 ಪಂದ್ಯದಲ್ಲಿ(IND vs ENG 3rd T20) ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದು ಹ್ಯಾಟ್ರಿಕ್ ಹಾಗೂ ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ರಿಂಕು ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಗಾಯದಿಂದ ಹೊರಬಿದ್ದಿರುವ ಕಾರಣ ಭಾರತ ಈ ಪಂದ್ಯಕ್ಕೆ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಅನಿವಾರ್ಯ.
ಬಲಾಬಲ
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ಪೈಕಿ ಭಾರತ ಗರಿಷ್ಠ 15 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳನ್ನು ಗೆದ್ದಿದೆ. ಈ ಸರಣಿಯಲ್ಲಿ 2 ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್‌ಗೆ ಸರಣಿ ಜೀವಂತವಿರಿಸಬೇಕಿದ್ದರೆ ನಾಳೆ(ಮಂಗಳವಾರ) ನಡೆಯುವ ಪಂದ್ಯದಲ್ಲಿ ಗೆಲುವು ಅತ್ಯಗತ್ಯ.
ಪಿಚ್ ರಿಪೂರ್ಟ್
ರಾಜ್‌ಕೋಟ್‌ನ ನಿರಂಜನ್ ಷಾ ಸ್ಟೇಡಿಯಂ(Niranjan Shah Stadium) ಬ್ಯಾಟ್ಸ್ಮನ್ಗಳಿಗೆ ಹೇಳಿ ಮಾಡಿಸಿದಂತಿದೆ. ಇಲ್ಲಿನ ಬೌಂಡರಿ ಗೆರೆಗಳು ಚಿಕ್ಕದಾಗಿದ್ದು, ಉಭಯ ತಂಡಗಳಿಂದಲೂ ರನ್ ಮಳೆ ನಿರೀಕ್ಷೆ ಮಾಡಲಾಗಿದೆ. ಆದರೆ, ಬ್ಯಾಟ್ಸ್ಮನ್ಗಳನ್ನು ನಿಯಂತ್ರಿಸಲು ಬೌಲರ್ಗಳು ಹರಸಾಹಸ ಪಡಬೇಕಾಗುವುದು ಖಚಿತ. ವೇಗದ ಬೌಲರ್ಗಳು ಕೊಂಚ ಹಳಿ ತಪ್ಪಿದರೂ, ಸ್ಪಿನ್ನರ್ಗಳು ಮೇಲುಗೈ ಸಾಧ್ಯತೆಯೂ ಇದೆ. ಹಾಗಾಗಿ ಉಭಯ ತಂಡಗಳು ಸ್ಪಿನ್ನರ್ಗಳಿಗೆ ಮಣೆ ಹಾಕುವ ನಿರೀಕ್ಷೆ ಹೆಚ್ಚಿದೆ.
ಇದನ್ನೂ ಓದಿ IND vs ENG: ಅರ್ಧಶತಕ ಸಿಡಿಸಿ ಸೋಲಂಚಿನಲ್ಲಿದ್ದ ಭಾರತವನ್ನು ಗೆಲ್ಲಿಸಿದ ತಿಲಕ್ ವರ್ಮಾ!
ಹವಾಮಾನ ವರದಿ
ಅಕ್ಯುವೆದರ್ ಪ್ರಕಾರ, ಜನವರಿ 28 ರಂದು ರಾಜ್‌ಕೋಟ್‌ನಲ್ಲಿ ಹವಾಮಾನವು ಸ್ಪಷ್ಟವಾಗಿರುತ್ತದೆ, ಮಳೆಯಾಗುವ ಸಾಧ್ಯತೆಯಿಲ್ಲ. ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ, ಆದರೆ ಕನಿಷ್ಠ ತಾಪಮಾನವು 15 ಡಿಗ್ರಿಗಳಿಗೆ ಇಳಿಯುತ್ತದೆ. ಪಂದ್ಯದ ಮೇಲೆ ಯಾವುದೇ ಇಬ್ಬನಿ ಅಂಶವು ಪರಿಣಾಮ ಬೀರುವುದಿಲ್ಲ ಹೀಗಾಗಿ ಆಟ ಸಂಪೂರ್ಣವಾಗಿ ಪೈಪೋಟಿಯಿಂದ ಸಾಗುವ ನಿರೀಕ್ಷೆ ಇದೆ.
ಸಂಭಾವ್ಯ ತಂಡಗಳು
ಭಾರತ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಮಣದೀಪ್ ಸಿಂಗ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್.
ಇಂಗ್ಲೆಂಡ್: ಬೆನ್ ಡಕೆಟ್, ಫಿಲ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.