IND vs ENG 4th T20I: ಟಾಸ್ ಸೋತ ಭಾರತ ಮೊದಲ ಬ್ಯಾಟಿಂಗ್!
IND vs ENG 4th T20I: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿಇದೀಗ ನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇದೀಗ ಆರಂಭವಾದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.
ನಾಲ್ಕನೇ ಟಿ20ಐ ಪಂದ್ಯದ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯವಾಡಿದ್ದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ಅರ್ಷದೀಪ್ ಸಿಂಗ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಶಿವಂ ದುಬೆ ಬಂದಿದ್ದರೆ, ಧ್ರುವ್ ಜುರೆಲ್ ಸ್ಥಾನಕ್ಕೆ ರಿಂಕು ಸಿಂಗ್ ಪ್ಲೇಯಿಂಗ್ XIಗೆ ಮರಳಿದ್ದಾರೆ.
IND vs ENG: ಶತಕ ಬಾರಿಸುವಂತೆ ಸೂರ್ಯಕುಮಾರ್‌ಗೆ ಮನವಿ ಮಾಡಿದ ಪುಟ್ಟ ಬಾಲಕ
ಇಂಗ್ಲೆಂಡ್ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆ
ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಮಾರ್ಕ್ ವುಡ್ ಸ್ಥಾನಕ್ಕೆ ಸಕೀಬ್ ಮಹ್ಮೂದ್ ಹಾಗೂ ಜೇಮಿ ಸ್ಮಿತ್ ಸ್ಥಾನಕ್ಕೆ ಜಾಕೋಬ್ ಬೆಥೆಲ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.
ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಭಾರತ ತಂಡ, ಟಿ20ಐ ಸರಣಿಯಲ್ಲಿ ಶುಭಾರಂಭ ಕಂಡಿತ್ತು. ಆದರೆ, ಮೂರನೇ ಟಿ20ಐ ಪಂದ್ಯದಲ್ಲಿ ಸೋಲುವ ಮೂಲಕ ಭಾರತ ತಂಡ ಸರಣಿ ವಶಪಡಿಸಿಕೊಳ್ಳುವ ಅವಕಾಶವನ್ನು ಹೊಂದಿತ್ತು. ಆದರೆ, ಇಂಗ್ಲೆಂಡ್ ಇದಕ್ಕೆ ಅವಕಾಶ ನೀಡಲಿಲ್ಲ. ಇದೀಗ ನಾಲ್ಕನೇ ಟಿ20ಐ ಪಂದ್ಯವನ್ನು ಗೆಲ್ಲುವ ಮೂಲಕ ಟಿ20ಐ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
🚨 Team News
— BCCI (@BCCI) January 31, 2025
3⃣ changes for #TeamIndia as Rinku Singh, Shivam Dube & Arshdeep Singh are named in the Playing XI.
Here's our line-up for the fourth T20I 🔽
Follow The Match ▶️ https://t.co/pUkyQwxOA3#INDvENG | @IDFCFIRSTBank pic.twitter.com/SiIomnPrCR
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿ.ಕೀ), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್‌ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್
🚨 Toss News 🚨
— BCCI (@BCCI) January 31, 2025
England elected to bowl against #TeamIndia in the 4⃣th #INDvENG T20I.
Follow The Match ▶️ https://t.co/pUkyQwxOA3 @IDFCFIRSTBank pic.twitter.com/zNb7tgi1cL
ತಂಡಗಳು
ಭಾರತ: ಸಂಜು ಸ್ಯಾಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಧ್ರುವ್ ಜುರೆಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ಶಿವಂ ದುಬೆ, ರಮಣದೀಪ್ ಸಿಂಗ್ , ಹರ್ಷಿತ್ ರಾಣಾ
ಇಂಗ್ಲೆಡ್: ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್ (ಡಬ್ಲ್ಯೂ), ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ರೆಹಾನ್ ಅಹ್ಮದ್