ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ind vs Eng 4th T20I: ನಾಲ್ಕನೇ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ ಹೀಗಿದೆ

ಅಕ್ಯು ವೆದರ್ ವರದಿಯ ಪ್ರಕಾರ, ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿಯಾಗುವುದಿಲ್ಲ ಎಂದಿದೆ. ತಾಪಮಾನವು 32 ಡಿಗ್ರಿ ಇರಲಿದ್ದು, ಗಂಟೆಗೆ 13 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಆರ್ದ್ರತೆಯು ಶೇಕಡಾ 37 ರಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪಂದ್ಯ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯಲಿದೆ.

Ind vs Eng 4th T20I: ನಾಲ್ಕನೇ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ ಹೀಗಿದೆ

India vs England

Profile Abhilash BC Jan 31, 2025 8:40 AM

ಪುಣೆ: ಭಾರತ ಮತ್ತು ಇಂಗ್ಲೆಂಡ್‌ ನಡುವಣ ನಾಲ್ಕನೇ ಟಿ20 ಪಂದ್ಯ(Ind vs Eng 4th T20I) ಇಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್‌ ಪಡೆ ಗೆದ್ದರೆ ಸರಣಿ ಭಾರತದ ಕೈವಶವಾಗಲಿದೆ. ಇಂಗ್ಲೆಂಡ್‌ ಗೆದ್ದರೆ 2-2 ಸಮಬಲಗೊಂಡು ಮುಂಬೈಯಲ್ಲಿ ನಡೆಯುವ ಅಂತಿಮ ಪಂದ್ಯ ಇತ್ತಂಡಗಳಿಗೂ ಸರಣಿ ನಿರ್ಣಾಯಕ ಪಂದ್ಯವಾಗಲಿದೆ.

ಪಿಚ್‌ ರಿಪೋರ್ಟ್‌

ಪುಣೆಯ ಪಿಚ್ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡಕ್ಕೂ ನೆರವು ನೀಡಲಿದೆ. ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಹುದು. ಇಲ್ಲಿಯವರೆಗೆ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಲಾಗಿದ್ದು, ತಲಾ 2 ಪಂದ್ಯಗಳಂತೆ ಮೊದಲು ಮತ್ತು ಚೇಸಿಂಗ್‌ ನಡೆಸಿದ ತಂಡಗಳು ಗೆದ್ದಿವೆ. ಭಾರತ ಕೊನೆಯ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಿತ್ತು. ಆದರೆ 16 ರನ್‌ಗಳಿಂದ ಸೋಲನ್ನು ಕಂಡಿತ್ತು. ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅಕ್ಷರ್ ಪಟೇಲ್ ಅದ್ಭುತ ಬ್ಯಾಟಿಂಗ್ ಮಾಡಿ ಅರ್ಧಶತಕ ಸಿಡಿಸಿದ್ದರು. ಆದರೆ ಈಗ ಉಭಯ ಆಟಗಾರರು ಕೂಡ ಮಂಕಾಗಿದ್ದಾರೆ. ಇಂಗ್ಲೆಂಡ್ ತಂಡ ಇಲ್ಲಿ ಕೇವಲ ಒಂದು ಟಿ20 ಪಂದ್ಯವನ್ನು ಆಡಿದ್ದು, ಆ ಪಂದ್ಯದಲ್ಲಿ ಭಾರತ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.

ಹವಾಮಾನ ಹೇಗಿರುತ್ತದೆ?

ಅಕ್ಯು ವೆದರ್ ವರದಿಯ ಪ್ರಕಾರ, ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿಯಾಗುವುದಿಲ್ಲ ಎಂದಿದೆ. ತಾಪಮಾನವು 32 ಡಿಗ್ರಿ ಇರಲಿದ್ದು, ಗಂಟೆಗೆ 13 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಆರ್ದ್ರತೆಯು ಶೇಕಡಾ 37 ರಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪಂದ್ಯ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯಲಿದೆ.

ಸಂಭಾವ್ಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಧ್ರುವ್ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ) ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಸಲೀತ್ ಮತ್ತು ಫಿಲ್ ಸಾಲ್ಟ್ ಮತ್ತು ಮಾರ್ಕ್ ವುಡ್.