IND vs Eng: ಟಿ20ಐ ಸರಣಿಯಲ್ಲಿ ಭಾರತಕ್ಕೆ ಕೀ ಆಟಗಾರನನ್ನು ಆರಿಸಿದ ಆಕಾಶ್ ಚೋಪ್ರಾ!
IND vs Eng: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ ತಂಡಕ್ಕೆ ಯುವ ವೇಗಿ ಅರ್ಷದೀಪ್ ಸಿಂಗ್ ಕೀ ಆಟಗಾರ ಎಂದು ಮಾಜಿ ಕ್ರಿಕೆಟಿಗ ಆಕಾಶ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ20ಐ (IND vs Eng) ಸರಣಿಯಲ್ಲಿ ಭಾರತ ತಂಡದ ಪರ ಯುವ ವೇಗಿ ಅರ್ಷದೀಪ್ ಸಿಂಗ್ ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆಂದು ಟೀಮ್ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಆಕಾಶ ಚೋಪ್ರಾ ಭವಿಷ್ಯ ನುಡಿದಿದ್ದಾರೆ. ಉಭಯ ತಂಡಗಳ ನಡುವೆ ಮೊದಲನೇ ಟಿ20ಐ ಪಂದ್ಯ ಬುಧವಾರ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
2022ರಲ್ಲಿ ಭಾರತ ತಂಡದ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು ಹಾಗೂ ಅಂದಿನಿಂದ ಇಲ್ಲಿಯವರೆಗೂ ಅವರು ರಾಷ್ಟ್ರೀಯ ತಂಡಕ್ಕೆ ಕೀ ಬೌಲರ್ ಆಗಿ ಆಡುತ್ತಿದ್ದಾರೆ. ಎಡಗೈ ವೇಗಿ ಇಲ್ಲಿಯವರೆಗೂ ಆಡಿದ 60 ಟಿ20ಐ ಪಂದ್ಯಗಳಿಂದ 8.32ರ ಎಕಾನಮಿ ರೇಟ್‌ನಲ್ಲಿ 95 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
IND vs ENG: ಇಂದು ಭಾರತ-ಇಂಗ್ಲೆಂಡ್ ಮೊದಲ ಟಿ20 ಕದನ; ಹವಾಮಾನ ವರದಿ ಹೇಗಿದೆ?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20ಐ ಸರಣಿ ನಿಮಿತ್ತ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಆಕಾಶ್ ಚೋಪ್ರಾ, ಇಂಗ್ಲೆಂಡ್ ತಂಡದಲ್ಲಿ ಅದ್ಭುತ ಬ್ಯಾಟ್ಸ್‌ಮನ್‌ಗಳಿದ್ದಾರೆ ಹಾಗಾಗಿ ತ್ವರಿತವಾಗಿ ವಿಕೆಟ್‌ಗಳನ್ನು ಕಬಳಿಸಬೇಕಾದ ಅಗತ್ಯವಿದೆ. ಅರ್ಷದೀಪ್ ಸಿಂಗ್ ಅವರು ಸೀಮಿತ ಓವರ್‌ಗಳ ಸ್ವರೂಪದಲ್ಲಿ ತ್ವರಿತವಾಗಿ ವಿಕೆಟ್‌ಗಳನ್ನು ಕಬಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಮಾಜಿ ಕ್ರಿಕೆಟಿಗ ತಿಳಿಸಿದ್ದಾರೆ.
"ಆರಂಭದಲ್ಲಿ ವಿಕೆಟ್ ಕಬಳಿಸುವುದು ತುಂಬಾ ಮುಖ್ಯ. ಇಂಗ್ಲೆಂಡ್ ತಂಡದ ಆರಂಭಿಕ ಸ್ಥಾನದಲ್ಲಿ ಬೆನ್ ಡಕೆಟ್ ಹಾಗೂ ಫಿಲ್ ಇದ್ದಾರೆ ಹಾಗೂ ಮೂರನೇ ಕ್ರಮಾಂಕದಲ್ಲಿ ಜಸ್ ಬಟ್ಲರ್ ಆಡಲಿದ್ದಾರೆ. ಈ ಮೂರು ವಿಕೆಟ್‌ಗಳನ್ನು ನಾವು ಆರಂಭದಲ್ಲಿ ಕಬಳಿಸಿಲ್ಲವಾದರೆ ಏನಾಗಬಹುದೆಂದು ನೀವೇ ಊಹಿಸಿ. ಹಾಗಾಗಿ ಆರಂಭದಲ್ಲಿ ವಿಕೆಟ್‌ಗಳನ್ನು ಪಡೆಯುವುದು ತುಂಬಾ ಮುಖ್ಯವಾಗುತ್ತದೆ. ಅದ್ದರಿಂದ ಅರ್ಷದೀಪ್ ಸಿಂಗ್ ಇದಕ್ಕೆ ಸೂಕ್ತರಾಗಿದ್ದಾರೆ ಹಾಗೂ ಅವರ ಬೌಲಿಂಗ್‌ನಲ್ಲಿ ವಿಭಿನ್ನತೆ ಇದೆ," ಎಂದು ಹೇಳಿದ್ದಾರೆ.
IND vs ENG: ಚಹಲ್ ದಾಖಲೆ ಮುರಿಯಲು ಸಜ್ಜಾದ ಅರ್ಶ್‌ದೀಪ್ ಸಿಂಗ್
ಐದು ಪಂದ್ಯಗಳ ಟಿ20ಐ ಸರಣಿಯ ಮೊದಲನೇ ಪಂದ್ಯ ಜನವರಿ 22 ರಂದು ನಡೆದರೆ, ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿ ಜನವರಿ 25 ಮತ್ತು 28 ರಂದು ಚೆನ್ನೈ ಮತ್ತು ರಾಜ್‌ಕೋಟ್‌ನಲ್ಲಿ ನಡೆಯಲಿವೆ. ನಾಲ್ಕನೇ ಪಂದ್ಯ ಜನವರಿ 31 ರಂದು ಪುಣೆಯಲ್ಲಿ ನಡೆದರೆ, ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯ ಫೆಬ್ರವರಿ ಎರಡರಂದು ಮುಂಬೈನಲ್ಲಿ ನಡೆಯಲಿದೆ.
ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪ ನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್(WK).