IND vs ENG: ಯುಜ್ವೇಂದ್ರ ಚಹಲ್‌ರ ಟಿ20ಐ ದಾಖಲೆ ಮುರಿದ ಅರ್ಷದೀಪ್ ಸಿಂಗ್!
IND vs ENG 1st T20I: ಇಂಗ್ಲೆಂಡ್ ವಿರುದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ವೇಗಿ ಅರ್ಷದೀಪ್ ಸಿಂಗ್ ತಮ್ಮ ಸಹ ಆಟಗಾರ ಮತ್ತು ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರ ದಾಖಲೆಯನ್ನು ಮುರಿದಿದ್ದಾರೆ. ಅರ್ಷದೀಪ್ ಸಿಂಗ್ ಟಿ20ಐ ಕ್ರಿಕೆಟ್‌ನಲ್ಲಿ 97 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಚಹಲ್ ಟಿ20ಐನಲ್ಲಿ 96 ವಿಕೆಟ್‌ಗಳನ್ನು ಪಡೆದಿದ್ದಾರೆ.
ಕೋಲ್ಕತಾ: ಇಂಗ್ಲೆಂಡ್ ವಿರುದ್ಧ ಮೊದಲನೇ ಟಿ20ಐ ಪಂದ್ಯದ ಪವರ್‌ಪ್ಲೇನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಯುವ ವೇಗಿ ಅರ್ಷದೀಪ್ ಸಿಂಗ್, ತಮ್ಮ ಸಹ ಆಟಗಾರ ಯುಜ್ವೇಂದ್ರ ಚಹಲ್ ಅವರ ಟ20ಐ ವಿಕೆಟ್‌ಗಳ ದಾಖಲೆಯನ್ನು ಮುರಿದಿದ್ದಾರೆ. ಪಂದ್ಯದ ತಮ್ಮ ಮೊದಲನೇ ಸ್ಪೆಲ್‌ನಲ್ಲಿ ಅವರು, ಫಿಲಿಪ್ ಸಾಲ್ಟ್ ಮತ್ತು ಬೆನ್ ಡಕೆಟ್ ಅವರನ್ನು ಔಟ್ ಮಾಡಿದ್ದಾರೆ.
ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡದ ಪರ ಪವರ್‌ಪ್ಲೇನಲ್ಲಿ ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿ ನಡೆಸಿದರು. ಪಂದ್ಯದ ಮೊಟ್ಟ ಮೊದಲ ಎಸೆತದಲ್ಲಿಯೇ ಅಪಾಯಕಾರಿ ಫಿಲ್ ಸಾಲ್ಟ್ ಅವರನ್ನು ಅರ್ಷದೀಪ್ ಔಟ್ ಮಾಡಿದರು. ನಂತರ ಮೂರನೇ ಓವರ್‌ನ ಕೊನೆಯ ಎಸೆತದಲ್ಲಿ ಮತ್ತೊರ್ವ ಆರಂಭಿಕ ಬೆನ್ ಡಕೆಟ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಆ ಮೂಲಕ ಇಂಗ್ಲೆಂಡ್ ತಂಡ 17 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.
IND vs ENG 1st T20I: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ!
ಯುಜ್ವೇಂದ್ರ ಚಹಲ್ ದಾಖಲೆ ಮುರಿದ ಅರ್ಷದೀಪ್ ಸಿಂಗ್
ತಮ್ಮ ಮೊದಲನೇ ಸ್ಪೆಲ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅರ್ಷದೀಪ್ ಸಿಂಗ್ ಭಾರತದ ಪರ ಅತಿ ಹೆಚ್ಚು ಟಿ20ಐ ವಿಕೆಟ್‌ಗಳನ್ನು ಕಬಳಿಸಿದ ಬೌಲರ್ ಎಂಬ ದಾಖಲೆಯನ್ನು ಬರೆದರು. ಆ ಮೂಲಕ ತಮ್ಮ ಸಹ ಆಟಗಾರ ಯುಜ್ವೇಂದ್ರ ಚಹಲ್‌ರ ದಾಖಲೆಯನ್ನು ಮುರಿದಿದ್ದಾರೆ. ಅರ್ಷದೀಪ್ ಸಿಂಗ್ ಸದ್ಯ 97* ಟಿ20ಐ ವಿಕೆಟ್‌ಗಳನ್ನು ಹೊಂದಿದ್ದರೆ, ಯುಜ್ವೇಂದ್ರ ಚಹಲ್ 96 ಟಿ20ಐ ವಿಕೆಟ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ. ಅರ್ಷದೀಪ್ ಸಿಂಗ್ ಅವರು 61 ಟಿ20ಐ ಪಂದ್ಯಗಳಿಂದ ಇಷ್ಟು ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದಾರೆ.
100 ವಿಕೆಟ್‌ಗಳ ಸನಿಹದಲ್ಲಿ ಅರ್ಷದೀಪ್
ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ನಲ್ಲಿ ವೇಗವಾಗಿ 100 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಅರ್ಷದೀಪ್ ಸಿಂಗ್ ಅತ್ಯುತ್ತಮ ಅವಕಾಶವಿದೆ. ಅವರು 100 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಇನ್ನು ಕೇವಲ ಮೂರು ವಿಕೆಟ್‌ಗಳ ಅಗತ್ಯವಿದೆ. ಪ್ರಸ್ತುತ ಅಫ್ಘಾನಿಸ್ತಾನ ತಂಡದ ಸ್ಪಿನ್ನರ್ ರಶೀದ್ ಖಾನ್ ಅವರು 53 ಪಂದ್ಯಗಳಿಂದ 100 ಟಿ20ಐ ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದರು ಹಾಗೂ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದರು.
𝙈𝙞𝙡𝙚𝙨𝙩𝙤𝙣𝙚 𝙐𝙣𝙡𝙤𝙘𝙠𝙚𝙙 🔓
— BCCI (@BCCI) January 22, 2025
Say hello 👋 to #TeamIndia's leading wicket-taker in Men's T20Is 🔝
Well done, Arshdeep Singh 🙌 🙌
Follow The Match ▶️ https://t.co/4jwTIC5zzs#INDvENG | @IDFCFIRSTBank pic.twitter.com/K6lQF3la01
100 ವಿಕೆಟ್‌ಗಳ ಸನಿಹದಲ್ಲಿ ಅರ್ಷದೀಪ್
ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ನಲ್ಲಿ ವೇಗವಾಗಿ 100 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಅರ್ಷದೀಪ್ ಸಿಂಗ್ ಅತ್ಯುತ್ತಮ ಅವಕಾಶವಿದೆ. ಅವರು 100 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಇನ್ನು ಕೇವಲ ಮೂರು ವಿಕೆಟ್‌ಗಳ ಅಗತ್ಯವಿದೆ. ಪ್ರಸ್ತುತ ಅಫ್ಘಾನಿಸ್ತಾನ ತಂಡದ ಸ್ಪಿನ್ನರ್ ರಶೀದ್ ಖಾನ್ ಅವರು 53 ಪಂದ್ಯಗಳಿಂದ 100 ಟಿ20ಐ ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದರು ಹಾಗೂ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದರು.
ಭಾರತದ ಪರ ಟಿ20ಐ ವಿಕೆಟ್‌ಗಳನ್ನು ಕಬಳಿಸಿದ ಬೌಲರ್‌ಗಳು
ಅರ್ಷದೀಪ್ ಸಿಂಗ್: 61 ಟಿ20ಐ ಪಂದ್ಯಗಳಿಂದ 97 ವಿಕೆಟ್‌ಗಳು
ಯುಜ್ವೇಂದ್ರ ಚಹಲ್: 80 ಟಿ20ಐ ಪಂದ್ಯಗಳಿಂದ 96 ವಿಕೆಟ್‌ಗಳು
ಭುವನೇಶ್ವರ್ ಕುಮಾರ್: 87 ಟಿ20ಐ ಪಂದ್ಯಗಳಿಂದ 90 ವಿಕೆಟ್‌ಗಳು
ಜಸ್‌ಪ್ರೀತ್ ಬುಮ್ರಾ: 71 ಟಿ20ಐ ಪಂದ್ಯಗಳಿಂದ 89 ವಿಕೆಟ್‌ಗಳು