IND vs ENG: ಯುಜ್ವೇಂದ್ರ ಚಹಲ್‌ಗೆ ಕ್ಷಮೆ ಕೇಳಿದ ಅರ್ಷದೀಪ್ ಸಿಂಗ್! ಕಾರಣವೇನು?
Arshdeep Singh apologises to Chahal: ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲನೇ ಟಿ20ಐ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ ಅವರ ದಾಖಲೆಯನ್ನು ವೇಗಿ ಅರ್ಷದೀಪ್ ಸಿಂಗ್ ಮುರಿದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಭಾರತದ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಹಿರಿಯ ಸ್ಪಿನ್ನರ್ ಚಹಲ್‌ಗೆ ಕ್ಷಮೆ ಕೇಳಿದ್ದಾರೆ.
ಕೋಲ್ಕತಾ: ಇಂಗ್ಲೆಂಡ್ ವಿರುದ್ಧದ ಮೊದಲನೇ ಟಿ20ಐ ಪಂದ್ಯದಲ್ಲಿ (IND vs ENG Match Highlights) ಭಾರತ ತಂಡದ ಯುವ ವೇಗಿ ಅರ್ಷದೀಪ್ ಸಿಂಗ್ ಅವರು ಹಿರಿಯ ಸ್ಪಿನ್ನರ್ ಯುಜ್ವೇಂದ್ರ ಚಹಲ್ ದಾಖಲೆಯನ್ನು ಮುರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಚಹಲ್‌ಗೆ ಅರ್ಷದೀಪ್ ಸಿಂಗ್ ಕ್ಷಮೆ ಕೇಳಿದ್ದಾರೆ. ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ ಮೊದಲನೇ ಪಂದ್ಯದಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದ ಅರ್ಷದೀಪ್ ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದರು.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಇಂಗ್ಲೆಂಡ್ ತಂಡದ ಓಪನರ್ಸ್ ಬೆನ್ ಡಕೆಟ್ ಹಾಗೂ ಫಿಲ್ ಸಾಲ್ಟ್ ಅವರನ್ನು ಅರ್ಷದೀಪ್ ಸಿಂಗ್ ಔಟ್ ಮಾಡಿದ್ದರು. ಆ ಮೂಲಕ 97 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ 96 ವಿಕೆಟ್‌ಗಳನ್ನು ಕಬಳಿಸಿದ್ದ ಯುಜ್ವೇಂದ್ರ ಚಹಲ್ ಅವರನ್ನು ಹಿಂದಿಕ್ಕಿದರು. 2022ರ ಜುಲೈನಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 97 ವಿಕೆಟ್‌ಗಳನ್ನು ಪಡೆಯಲು ಅರ್ಷದೀಪ್ ಸಿಂಗ್ 61 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ.
ವರುಣ್ ಸ್ಪಿನ್ ಮೋಡಿಗೆ ಇಂಗ್ಲೆಂಡ್ ತತ್ತರ, ಅಭಿಷೇಕ್ ಅಬ್ಬರದಿಂದ ಭಾರತಕ್ಕೆ ಮೊದಲ ಜಯ!
ಬಿಸಿಸಿಐ ಅಪ್‌ಲೋಡ್ ಮಾಡಿರುವ ವಿಡಿಯೊದಲ್ಲಿ ಮಾತನಾಡಿದ ಅರ್ಷದೀಪ್ ಸಿಂಗ್, "ಇದು ಅದ್ಭುತ ಭಾವನೆಯಾಗಿದೆ, ನನ್ನ ಕಠಿಣ ಪರಿಶ್ರಮಕ್ಕೆ ಸಿಕ್ಕಿರುವ ಪ್ರತಿಫಲದಿಂದ ನಾನು ಕೃತಜ್ಞನಾಗಿದ್ದೇನೆ. ರಾಷ್ಟ್ರೀಯ ತಂಡದ ಪರ ವಿಕೆಟ್‌ಗಳನ್ನು ಪಡೆಯುವುದನ್ನು ಮುಂದುವರಿಸುತ್ತೇನೆ," ಎಂಬ ಭರವಸೆಯನ್ನು ನೀಡಿದ್ದಾರೆ.
ವರುಣ್ ಚಕ್ರವರ್ತಿಗೆ ಅರ್ಷದೀಪ್ ಸಿಂಗ್ ಶ್ಲಾಘನೆ
ಕೋಲ್ಕತಾದಲ್ಲಿ ಮಧ್ಯಮ ಓವರ್‌ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ವರುಣ್ ಚಕ್ರವರ್ತಿ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ಇಂಗ್ಲೆಂಡ್ ತಂಡವನ್ನು 132 ರನ್‌ಗಳಿಗೆ ಆಲ್‌ಔಟ್ ಮಾಡಲು ಭಾರತಕ್ಕೆ ನೆರವು ನೀಡಿದ್ದರು. ಅಂತಿಮವಾಗಿ ಇವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
𝗔 𝗱𝗼𝗺𝗶𝗻𝗮𝘁𝗶𝗻𝗴 𝘀𝗵𝗼𝘄 𝗮𝘁 𝘁𝗵𝗲 𝗘𝗱𝗲𝗻 𝗚𝗮𝗿𝗱𝗲𝗻𝘀! 💪 💪#TeamIndia off to a flying start in the T20I series, sealing a 7⃣-wicket win! 👏 👏
— BCCI (@BCCI) January 22, 2025
Follow The Match ▶️ https://t.co/4jwTIC5zzs#INDvENG | @IDFCFIRSTBank pic.twitter.com/hoUcLWCEIP
"ಇತ್ತೀಚಿನ ದಿನಗಳಲ್ಲಿ ವರುಣ್ ಚಕ್ರವರ್ತಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿದ್ದಾರೆ. ಅವರು ಟಿ20ಐ ಪಂದ್ಯಗಳಲ್ಲಿ ಮಧ್ಯಮ ಹಾಗೂ ಡೆತ್ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಪಡೆಯುತ್ತಿದ್ದಾರೆ. ಬ್ಯಾಟ್ಸ್‌ಮನ್‌ಗಳನ್ನು ಆರಂಭದಲ್ಲಿಯೇ ಔಟ್ ಮಾಡಿಲ್ಲವಾದರೆ, ಡೆತ್ ಓವರ್‌ಗಳಲ್ಲಿ ಅವರಿಗೆ ಬೌಲ್ ಮಾಡುವುದು ಕಠಿಣವಾಗುತ್ತದೆ. ಇಂಥಾ ಸನ್ನಿವೇಶದಲ್ಲಿ ಮಧ್ಯಮ ಓವರ್‌ಗಳಲ್ಲಿ ವರುಣ್ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಡೆತ್ ಓವರ್‌ಗಳಲ್ಲಿ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಗೆ ಬೌಲ್ ಮಾಡಲು ಉತ್ತಮ ವೇದಿಕೆಯನ್ನು ನಿರ್ಮಿಸಿದ್ದರು. ಇದೇ ರೀತಿ ಅವರು ವಿಕೆಟ್‌ಗಳನ್ನು ಪಡೆಯುವುದನ್ನು ಮುಂದುವರಿಸಲಿದ್ದಾರೆಂಬ ನಿರೀಕ್ಷೆ ಇದೆ," ಎಂದು ಅರ್ಷದೀಪ್ ಸಿಂಗ್ ತಿಳಿಸಿದ್ದಾರೆ.
IND vs ENG: ಯುಜ್ವೇಂದ್ರ ಚಹಲ್‌ರ ಟಿ20ಐ ದಾಖಲೆ ಮುರಿದ ಅರ್ಷದೀಪ್ ಸಿಂಗ್!
3 ವಿಕೆಟ್ ಕಬಳಿಸಿದ್ದ ವರುಣ್
2024ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಮರಳಿದ್ದ ವರುಣ್ ಚಕ್ರವರ್ತಿ ಅಂದಿನಿಂದ ಉತ್ತಮ ಬೌಲಿಂಗ್ ಪ್ರದರ್ಶನವನ್ನು ತೋರುತ್ತಿದ್ದಾರೆ. ಅದರಂತೆ ಮೊದಲನೇ ಟಿ20ಐ ಪಂದ್ಯದಲ್ಲಿ ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಹ್ಯಾರಿ ಬ್ರೂಕ್ ಅವರ ವಿಕೆಟ್‌ಗಳನ್ನು ಕಬಳಿಸಿದ್ದರು. ಒಟ್ಟು ಬೌಲ್ ಮಾಡಿದ್ದ 4 ಓವರ್‌ಗಳಿಗೆ 23 ರನ್ ನೀಡಿ 3 ವಿಕೆಟ್‌ಗಳನ್ನು ಕಬಳಿಸಿದರು.