IND vs ENG: ಇಂಗ್ಲೆಂಡ್ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ
IND vs ENG: ಪ್ರಧಾನ ವೇಗಿ ಜಸ್ಪ್ರೀತ್ ಬುಮ್ರಾ ಈ ಸರಣಿಯಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.
ಮುಂಬಯಿ: ಚಾಂಪಿಯನ್ಸ್ ಟ್ರೋಫಿ ಮಾತ್ರವಲ್ಲದೆ ಇಂಗ್ಲೆಂಡ್(IND vs ENG) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಭಾರತ ತಂಡ ಪ್ರಕಟ ಮಾಡಲಿದೆ. ಆರಂಭಕಾರ ಯಶಸ್ವಿ ಜೈಸ್ವಾಲ್(Yashasvi Jaiswal) ಚೊಚ್ಚಲ ಬಾರಿಗೆ ಏಕದಿನ ಪಂದ್ಯಕ್ಕೆ ಕರೆ ಪಡೆದಿದ್ದಾರೆ. ಫೆಬ್ರವರಿ 6ರಿಂದ ಸರಣಿ ಆರಂಭವಾಗಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅವಕಾಶ ಪಡೆದ ಬಹುತೇಕ ಆಟಗಾರರೇ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಅವಕಾಶ ಪಡೆದಿದ್ದಾರೆ. ಒಂದು ಬದಲಾವಾಣೆ ಮಾಡಲಾಗಿದೆ. ಪ್ರಧಾನ ವೇಗಿ ಜಸ್ಪ್ರೀತ್ ಬುಮ್ರಾ ಈ ಸರಣಿಯಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಸಿರಾಜ್ ಚಾಂಪಿಯನ್ಸ್ ಟ್ರೋಫಿ ಜತೆಗೆ ಇಂಗ್ಲೆಂಡ್ ಸರಣಿಯಲ್ಲೂ ಸ್ಥಾನ ಕಳೆದುಕೊಂಡಿದ್ದಾರೆ.
ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ಬೆನ್ನು ನೋವಿಗೆ ಸಿಲುಕಿದ್ದರು. ಹೀಗಾಗಿ ಅವರಿಗೆ ಇಂಗ್ಲೆಂಡ್ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಹೇಳಿದರು. ಏಕದಿನ ಸರಣಿಗೂ ಮುನ್ನ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಮೊದಲ ಟಿ20 ಪಂದ್ಯ ಜ.22 ರಿಂದ ಆರಂಭಗೊಳ್ಳಲಿದೆ.
ಇದನ್ನೂ ಓದಿ England Squad: ಐಸಿಸಿ ಚಾಂಪಿಯನ್ಸ್ ಟ್ರೋಫಿ, ಭಾರತದ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ!
ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್ ರವೀಂದ್ರ ಜಡೇಜಾ.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ: ಫೆ.6, ನಾಗ್ಪುರ
ದ್ವಿತೀಯ ಏಕದಿನ: ಫೆ. 9, ಕಟಕ್
ತೃತೀಯ ಏಕದಿನ: ಫೆ.12, ಅಹಮದಾಬಾದ್