ಭಾರತ-ಇಂಗ್ಲೆಂಡ್ ಏಕದಿನ ಪಂದ್ಯದ ದಾಖಲೆ ಹೇಗಿದೆ?
ಉಭಯ ತಂಡಗಳ ಪೈಕಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 48 ಪಂದ್ಯ ಆಡಿ 1546 ರನ್ ಬಾರಿಸಿದ್ದಾರೆ. ಅತ್ಯಧಿಕ ವಿಕೆಟ್ ಕಿತ್ತ ದಾಖಲೆ ಮಾಜಿ ವೇಗಿ ಜೇಮ್ಸ್ ಆ್ಯಂಡರ್ಸನ್(40) ಹೆಸರಿನಲ್ಲಿದೆ.
ನಾಗ್ಪುರ: ಭಾರತ ಮತ್ತು ಇಂಗ್ಲೆಂಡ್(IND vs ENG) ನಡುವಣ ಮೊದಲ ಏಕದಿನ ಪಂದ್ಯ ಗುರುವಾರ(ಫೆ.5) ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇತ್ತಂಡಗಳ ನಡುವಣ ಏಕದಿನ ಮುಖಾಮುಖಿ ದಾಖಲೆಯ ಮಾಹಿತಿ ಹೀಗಿದೆ.
ಮುಖಾಮುಖಿ
ಇಂಗ್ಲೆಂಡ್ ಮತ್ತು ಭಾರತ ತಂಡಗಳು ಇದುವರೆಗೆ ಒಟ್ಟು 107 ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 58 ಪಂದ್ಯ ಗೆದ್ದರೆ, ಇಂಗ್ಲೆಂಡ್ 44 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯ ಟೈ ಮತ್ತು ಮೂರು ಪಂದ್ಯ ಫಲಿತಾಂಶ ಕಂಡಿಲ್ಲ. ಉಭಯ ತಂಡಗಳು ಕೊನೆಯ ಬಾರಿಗೆ ಪಂದ್ಯವನ್ನಾಡಿದ್ದು 2023ರಲ್ಲಿ. ಲಕ್ನೋದಲ್ಲಿ ನಡೆದಿದ್ದ ಈ ಪಂದ್ಯವನ್ನು ಭಾರತ 100 ರನ್ ಅಂತರದಿಂದ ಗೆಲುವು ಸಾಧಿಸಿತ್ತು. ಇದು ಏಕದಿನ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯವಾಗಿತ್ತು. ಇಂಗ್ಲೆಂಡ್ ತಂಡ ಭಾರತ ನೆಲದಲ್ಲಿ 52 ಏಕದಿನ ಆಡಿ 17 ಗೆಲುವು ಕಂಡಿದೆ.
ಬೌಲಿಂಗ್-ಬ್ಯಾಟಿಂಗ್ ದಾಖಲೆ
ಉಭಯ ತಂಡಗಳ ಪೈಕಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 48 ಪಂದ್ಯ ಆಡಿ 1546 ರನ್ ಬಾರಿಸಿದ್ದಾರೆ. ಅತ್ಯಧಿಕ ವಿಕೆಟ್ ಕಿತ್ತ ದಾಖಲೆ ಮಾಜಿ ವೇಗಿ ಜೇಮ್ಸ್ ಆ್ಯಂಡರ್ಸನ್(40) ಹೆಸರಿನಲ್ಲಿದೆ. ಈ ದಾಖಲೆಯನ್ನು ಮುರಿಯುವ ಅವಕಾಶ ರವೀಂದ್ರ ಜಡೇಜಾ ಅವರಿಗಿದೆ. ಜಡೇಜಾ 39 ವಿಕೆಟ್ ಕಿತ್ತು ಸದ್ಯ ದ್ವಿತೀಯ ಸ್ಥಾನಿಯಾಗಿದ್ದಾರೆ.
ಇದನ್ನೂ ಓದಿ IND vs ENG: ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು!
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.