IND vs ENG: ಟಿ20ಐ ವಿಶ್ವ ದಾಖಲೆಯ ಸನಿಹದಲ್ಲಿ ತಿಲಕ್ ವರ್ಮಾ!
ಇಂಗ್ಲೆಂಡ್ ವಿರುದ್ದ ಬುಧವಾರ ನಡೆಯುವ ಮೊದಲನೇ ಟಿ20ಐ ಪಂದ್ಯದಲ್ಲಿ ಶತಕ ಸಿಡಿಸಿದರೆ ಭಾರತ ತಂಡದ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ. ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ನ ಸತತ ಮೂರು ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.
ಕೋಲ್ಕತಾ: ಭಾರತ ತಂಡದ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20ಐ ಸರಣಿಯ ಮೊದಲನೇ ಪಂದ್ಯ ಬುಧವಾರ ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ತಿಲಕ್ ವರ್ಮಾ ಶತಕ ಸಿಡಿಸಿದ ವಿಶ್ವ ದಾಖಲೆಯನ್ನು ಬರೆಯಲಿದ್ದಾರೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟಿ20ಐ ಸರಣಿಯ ಮೂರು ಮತ್ತು ನಾಲ್ಕನೇ ಪಂದ್ಯಗಳಲ್ಲಿ ತಿಲಕ್ ವರ್ಮಾ ಸತತ ಎರಡು ಶತಕಗಳನ್ನು ಸಿಡಿಸಿದ್ದರು. ಆ ಮೂಲಕ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಟಿ20ಐ ಸರಣಿಯನ್ನು 3-1 ಅಂತರದಲ್ಲಿ ಮುಡಿಗೇರಿಸಿಕೊಂಡಿತ್ತು.
ಈ ಸರಣಿಯ ಆರಂಭಿಕ ಎರಡು ಪಂದ್ಯಗಳ ಬಳಿಕ ನಾಯಕ ಸೂರ್ಯಕುಮಾರ್ ಯಾದವ್ ಬಳಿ ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಆಡುತ್ತೇನೆಂದು ಮನವಿ ಮಾಡಿದ್ದರು. ಅದರಂತೆ ಇದಕ್ಕೆ ಸೂರ್ಯ ಒಪ್ಪಿಗೆ ನೀಡಿದ್ದರು. ಅದರಂತೆ ತಿಲಕ್ ವರ್ಮಾ ಅವರು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕ್ರಮವಾಗಿ 107 ರನ್‌ಗಳು ಹಾಗೂ 120 ರನ್‌ಗಳನ್ನು ಸಿಡಿಸಿದ್ದರು.
IND vs ENG: ಮೊದಲನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
ವಿಶ್ವ ದಾಖಲೆಯ ಸನಿಹದಲ್ಲಿ ತಿಲಕ್ ವರ್ಮಾ
ಇಂಗ್ಲೆಂಡ್ ವಿರುದ್ಧ ಜನವರಿ 22 ರಂದು ನಡೆಯುವ ಮೊದಲನೇ ಟಿ20ಐ ಪಂದ್ಯದಲ್ಲಿಯೂ ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಬಹುತೇಕ ಖಚಿತವಾಗಿದೆ. ಬ್ಯಾಟಿಂಗ್ ಸ್ನೇಹಿ ವಿಕೆಟ್ ಹೊಂದಿರುವ ಈಡನ್ ಗಾರ್ಡನ್ಸ್‌ನಲ್ಲಿ ತಿಲಕ್ ವರ್ಮಾ ಶತಕ ಸಿಡಿಸಿದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ.
ಕೋಲ್ಕತಾದಲ್ಲಿ ಶತಕ ಸಿಡಿಸಿದರೆ, ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ನ ಸತತ ಮೂರು ಇನಿಂಗ್ಸ್‌ಗಳಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ತಿಲಕ್ ವರ್ಮಾ ಬರೆಯಲಿದ್ದಾರೆ.
ಟಿ20ಐ ಕ್ರಿಕೆಟ್‌ನಲ್ಲಿ ಸತತ ಶತಕಗಳನ್ನು ಸಿಡಿಸಿದವರ ವಿವರ
ಗಸ್ಟಿನ್ ಮೆಕ್‌ಕೀನ್ (ಫ್ರಾನ್ಸ್): ಎರಡು ಶತಕಗಳು (2022)
ರೈಲಿ ರೊಸೊವ್ (ದಕ್ಷಿಣ ಆಫ್ರಿಕಾ): ಎರಡು ಶತಕ (2022)
ಫಿಲ್ ಸಾಲ್ಟ್ (ಇಂಗ್ಲೆಂಡ್): ಎರಡು ಶತಕ (2023)
ಸಂಜು ಸ್ಯಾಮ್ಸನ್ (ಭಾರತ): ಎರಡು ಶತಕ (2024)
ತಿಲಕ್ ವರ್ಮಾ (ಭಾರತ): ಎರಡೆಉ ಶತಕ (2024)
IND vs ENG: ಉಸಿರಿರುವ ತನಕ ಭಾರತಕ್ಕೆ ಆಡುತ್ತೇನೆಂದ ಮೊಹಮ್ಮದ್ ಶಮಿ!
ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಸತತ ಟಿ20ಐ ಶತಕಗಳನ್ನು ಸಿಡಿಸಿದ ಬಳಿಕ ತಿಲಕ್ ವರ್ಮಾ, ಮೇಘಾಲಯ ವಿರುದ್ಧ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿಯೂ ಹೈದರಾಬಾದ್ ಪರ ಶತಕವನ್ನು ಸಿಡಿಸಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಸತತ ಮೂರು ಶತಕಗಳನ್ನು ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಇದೀಗ ಅದೇ ದಾಖಲೆಯನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬರೆಯಲು ಅವರು ಎದುರು ನೋಡುತ್ತಿದ್ದಾರೆ.