ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IND vs ENG: ಮೊದಲನೇ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್‌ XI ಪ್ರಕಟ!

Joe Root returned to the England ODI: ಭಾರತ ವಿರುದ್ಧ ನಾಗ್ಪುರದಲ್ಲಿ ನಾಳೆ (ಫೆಬ್ರವರಿ 6) ನಡೆಯಲಿರುವ ಮೊದಲನೇ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಪ್ಲೇಯಿಂಗ್ XI ಅನ್ನು ಪ್ರಕಟಿಸಲಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಈ ಸ್ವರೂಪದಲ್ಲಿ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಸ್ಥಾನ ಪಡೆದುಕೊಂಡಿದ್ದಾರೆ.

IND vs ENG: ಜೋ ರೂಟ್‌ ಕಮ್‌ಬ್ಯಾಕ್‌, ಮೊದಲನೇ ಒಡಿಐಗೆ ಇಂಗ್ಲೆಂಡ್‌ ಪ್ಲೇಯಿಂಗ್‌ XI

Jos Buttler-Joe Root

Profile Ramesh Kote Feb 5, 2025 7:22 PM

ನಾಗ್ಪುರ: ಕಳೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಇದೇ ಮೊದಲ ಬಾರಿ ಇಂಗ್ಲೆಂಡ್‌ ಮಾಜಿ ನಾಯಕ ಜೋ ರೂಟ್ ಏಕದಿನ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ವಿರುದ್ದ ಗುರುವಾರ ನಾಗ್ಪುರ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುವ ಮೊದಲನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಜೋ ರೂಟ್‌ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಜೋ ರೂಟ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ.

ಟಿ20ಐ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ಇಂಗ್ಲೆಂಡ್, ಏಕದಿನ ಸರಣಿಯಲ್ಲಿ ಕಮ್‌ಬ್ಯಾಕ್‌ ಮಾಡಲು ಎದುರು ನೋಡುತ್ತುದೆ. ಸ್ಪಿನ್ನರ್ ಆದಿಲ್ ರಶೀದ್ ಸೇರಿದಂತೆ ನಾಲ್ವರು ಬೌಲರ್‌ಗಳಿಗೆ ಸ್ಥಾನ ಕಲ್ಪಿಸಿ, ಒಬ್ಬ ಹೆಚ್ಚುವರಿ ಬ್ಯಾಟರ್ ಅನ್ನು ತಂಡಕ್ಕೆ ಸೇರಿಕೊಳ್ಳಲಿದ್ದಾರೆ.

IND vs ENG: ರಾಹುಲ್‌ ಇನ್‌, ಪಂತ ಔಟ್‌! ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ಏಕದಿನ ಕ್ರಿಕೆಟ್‌ಗೆ ಜೋ ರೂಟ್ ಕಮ್‌ಬ್ಯಾಕ್‌

ಭಾರತದ ಆತಿಥ್ಯದಲ್ಲಿ ನಡೆದಿದ್ದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಏಕದಿನ ಕ್ರಿಕೆಟ್‌ನಿಂದ ಜೋರೂಟ್ ದೂರ ಉಳಿದಿದ್ದರು. ಆದರೆ, ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರವಹಿಸಲಿದ್ದಾರೆ. ಸ್ಪಿನ್ನರ್‌ಗಳಿಗೆ ಅದ್ಭುತ ಬ್ಯಾಟಿಂಗ್‌ ಕೌಶಲ ಮೈಗೂಡಿಸಿಕೊಂಡಿರುವ ಜೋ ರೂಟ್‌ಗೆ ಸ್ಥಾನ ಕಲ್ಪಿಸಲಾಗಿದೆ. ಇದಕ್ಕೂ ಮುನ್ನ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಜೋ ರೂಟ್ ಆಡಲಿದ್ದಾರೆ. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ಎಂದಿನಂತೆ ಫಿಲ್ ಸಾಲ್ಟ್ ಹಾಗೂ ಬೆನ್ ಡೆಕಟ್ ಅವರು ಇನಿಂಗ್ಸ್ ಆರಂಭಿಸಲಿದ್ದಾರೆ.



ಪಾರ್ಟ್ ಟೈಮ್ ಬೌಲರ್‌ಗಳ ಮೇಲೆ ಅವಲಂಬನೆ

ಮೊದಲನೇ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡದಲ್ಲಿ ಅರೆಕಾಲಿಕ ಸ್ಪಿನ್ ಆಲ್‌ರೌಂಡರ್‌ಗಳಾದ ಜೋ ರೂಟ್, ಲಿಯಾಮ್ ಲಿವಿಂಗ್‌ಸ್ಟೋನ್‌, ಜಾಕೋಬ್ ಬೆಥಲ್ ಕಾಣಿಸಿಕೊಂಡರೆ, ವೇಗದ ಬೌಲಿಂಗ್‌ ವಿಭಾಗದಲ್ಲಿ ಜೋಫ್ರಾ ಅರ್ಚರ್ ಹಾಗೂ ಸಾಕಿಬ್ ಮಹಮೂದ್ ಇದ್ದಾರೆ.

IND vs ENG: ಕೊಹ್ಲಿಯಲ್ಲ, ಭಾರತದ ಆಕ್ರಮಣಕಾರಿ ಆಟಕ್ಕೆ ಈ ಆಟಗಾರನೇ ಕಾರಣ ಎಂದ ಜೋಸ್‌ ಬಟ್ಲರ್‌!

ಮೊದಲನೇ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ XI

ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡೆಕಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್ ಸ್ಟನ್, ಜಾಕಬ್ ಬೇಥಲ್, ಬ್ರೆನ್ಡನ್ ಕ್ರೇಸ್, ಜೋಫ್ರಾ ಅರ್ಚರ್, ಆದಿಲ್ ರಶೀದ್ ಮತ್ತು ಸಾಕಿಬ್ ಮಹಮೂದ್

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್