IND vs ENG: ಸತತ ವೈಫಲ್ಯದಿಂದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್!
KL Rahul: ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಆದರೆ, ಆರಂಭಿಕ ಎರಡು ಪಂದ್ಯಗಳನ್ನು ಗೆದ್ದ ಹೊರತಾಗಿಯೂ ಭಾರತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಡಿದ ಕೆಎಲ್ ರಾಹುಲ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧ ಆರಂಭಿಕ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತ ತಂಡದ ವಿಕೆಟ್ ಕೀಪರ್ ಕೆಎಲ್ ರಾಹುಲ್ (KL Rahul) ಟೀಕೆಗಳಿಗೆ ಗುರಿಯಾಗಿದ್ದಾರೆ. ರಿಷಭ್ ಪಂತ್ ಅವರ ಬದಲು ವಿಕೆಟ್ ಕೀಪರ್ ಆಡಿದ್ದ ಕೆಎಲ್ ರಾಹುಲ್, ಮೊದಲನೇ ಏಕದಿನ ಪಂದ್ಯದಲ್ಲಿ ಎರಡು ರನ್‌ಗೆ ವಿಕೆಟ್ ಒಪ್ಪಿಸಿದ್ದ ಕೆಎಲ್ ರಾಹುಲ್ ನಂತರ, ಎರಡನೇ ಏಕದಿನ ಪಂದ್ಯದಲ್ಲಿ 10 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಕೆಎಲ್ ವೈಫಲ್ಯ ಅನುಭವಿಸಿದರೂ ಭಾರತ ತಂಡ ಈ ಎರಡೂ ಪಂದ್ಯಗಳನ್ನು ಗೆಲುವು ಪಡೆಯುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದರೂ ಕೆಎಲ್ ರಾಹುಲ್ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ನಾಯಕ ರೋಹಿತ್ ಶರ್ಮಾ ಹಾಗೂ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಅಸಮಾಧಾನವಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ನಿಮಿತ್ತ ಕನ್ನಡಿಗ ಕೆಎಲ್ ರಾಹುಲ್ ಅವರು ಫಾರ್ಮ್‌ಗೆ ಮರಳಬೇಕೆಂದು ಟೀಮ್ ಮ್ಯಾನೇಜ್‌ಮೆಂಟ್ ನಿರೀಕ್ಷೆ ಮಾಡಿತ್ತು. ಆದರೆ, ಅವರು ಆರಂಭಿಕ ಎರಡು ಪಂದ್ಯಗಳಲ್ಲಿ ತಮ್ಮ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಆದರೆ, ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರನ್ನು ಕೂರಿಸಿ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಭ್ ಪಂತ್‌ಗೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ. ಏಕೆಂದರೆ ಚಾಂಪಿಯನ್ಸ್ಟ್ ಟ್ರೋಫಿಗೂ ಭಾರತ ತಂಡಕ್ಕೆ ಇನ್ನುಳಿದಿರವುದು ಒಂದೇ ಒಂದು ಏಕದಿನ ಪಂದ್ಯ ಮಾತ್ರ.
IND vs ENG: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದಲೂ ಜಾಕೋಬ್ ಬೆಥೆಲ್ ಔಟ್: ಜೋಸ್ ಬಟ್ಲರ್!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೂರ್ನಿಯಲ್ಲಿ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಕೆಎಲ್ ರಾಹುಲ್, 50 ಓವರ್‌ಗಳ ಕ್ರಿಕೆಟ್‌ನಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಈ ಸರಣಿಯ ಎರಡೂ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅವರನ್ನು 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಅವಕಾಶ ನೀಡಲಾಗಿತ್ತು. ಸಾಮಾನ್ಯವಾಗಿ 5ನೇ ಕ್ರಮಾಂಕದಲ್ಲಿ ಆಡುವ ಕೆಎಲ್ ರಾಹುಲ್ ಬದಲಿಗೆ ಟೀಮ್ ಮ್ಯಾನೇಜ್‌ಮೆಂಟ್ ಅಕ್ಷರ್ ಪಟೇಲ್ ಅವರನ್ನು 5ನೇ ಕ್ರಮಾಂಕದಲ್ಲಿ ಆಡಿಸುತ್ತಿದೆ. ತಮ್ಮ ಬ್ಯಾಟಿಂಗ್ ಕ್ರಮಾಂಕದ ಬದಲಾವಣೆಯಿಂದಾಗಿ ಕೆಎಲ್ ರಾಹುಲ್ ಎರಡೂ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿರಬಹದು.
ನಾಗ್ಪುರದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ 9 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲೂ ರಾಹುಲ್ ವೈಫಲ್ಯ ಅನುಭವಿಸಿದರು. ಇಲ್ಲಿಅವರು 14 ಎಸೆತಗಳನ್ನು ಎದುರಿಸಿ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಿನ್ನೆಲೆಯಲ್ಲಿ ಅವರ ಪ್ಲೇಯಿಂಗ್ XIನಲ್ಲಿನ ಸ್ಥಾನ ಅಪಾಯದಲ್ಲಿದೆ. ರಿಷಭ್ ಪಂತ್ ಅವರನ್ನು ಆಡುವ 11ರ ಬಳಗದಲ್ಲಿವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಸೇರಿಸಿಕೊಳ್ಳಬಹುದು. ಪಂತ್ ಪಂದ್ಯ ಗೆಲ್ಲಿಸುವ ಬ್ಯಾಟ್ಸ್‌ಮನ್ ಮತ್ತು ಇದರ ಜೊತೆಗೆ ಅವರು ತಂಡಕ್ಕೆ ಎಡಗೈ ಆಯ್ಕೆಯನ್ನು ಸಹ ನೀಡುತ್ತಾರೆ. ಕಳೆದ ಎರಡು ಪಂದ್ಯಗಳಿಂದ ಡಗೌಟ್‌ನಲ್ಲಿ ಕುಳಿತಿರುವ ಪಂತ್ ಪಂದ್ಯದಲ್ಲಿ ಆಡಲು ಎದುರು ನೋಡುತ್ತಿದ್ದಾರೆ.
IND vs ENG 2nd ODI: ರೋಹಿತ್ ಶತಕ ವೈಭವ; ಭಾರತಕ್ಕೆ ಸರಣಿ ಗೆಲುವಿನ ಸಂಭ್ರಮ
ಚಾಂಪಿಯನ್ಸ್ ಟ್ರೋಫಿಯಿಂದಲೂ ರಾಹುಲ್ ಔಟ್?
ಇದೀಗ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ ಹೊರತಾಗಿಯೂ ಕೆಎಲ್ ರಾಹುಲ್‌ಗೆ ಮೂರನೇ ಏಕದಿನ ಪಂದ್ಯದಲ್ಲಿಯೂ ಅವಕಾಶ ನೀಡಬಹುದು. ಒಂದು ವೇಳೆ ಮೂರನೇ ಏಕದಿನ ಪಂದ್ಯದಲ್ಲಿಯೂ ಕೆಎಲ್ ರಾಹುಲ್ ವೈಫಲ್ಯ ಅನುಭವಿಸಿದರೆ, ಖಚಿತವಾಗಿಯೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕೆಎಲ್ ರಾಹುಲ್ ಬದಲು ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಆಡಬಹುದು. ರಿಷಭ್ ಪಂತ್ ಉತ್ತಮ ಪ್ರದರ್ಶನ ತೋರಿದರೆ, ಕೆಎಲ್ ರಾಹುಲ್ ಟೂರ್ನಿಯುದ್ದಕ್ಕೂ ಬೆಂಚ್ ಕಾಯಬೇಕಾಗಬಹುದು.