IND vs ENG 3rd T20I: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ!

India vs England 3rd T20I Toss: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಮೂರನೇ ಟಿ20ಐ ಪಂದ್ಯ ರಾಜ್‌ಕೋಟ್‌ನ ನಿರಂಜನ್‌ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಬೌಲಿಂಗ್‌ ಆಯ್ದುಕೊಂಡಿದೆ. ಟೀಮ್‌ ಇಂಡಿಯಾ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ.

IND vs ENG 3rd T20I: ಶಮಿ ಕಮ್‌ಬ್ಯಾಕ್‌, ಭಾರತದ ಪ್ಲೇಯಿಂಗ್‌  XIನಲ್ಲಿ ಒಂದು ಬದಲಾವಣೆ!

IND vs ENG 3rd T20i Toss

Profile Ramesh Kote Jan 28, 2025 6:55 PM

ರಾಜ್‌ಕೋಟ್‌: ಇಲ್ಲಿನ ನಿರಂಜನ್‌ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲೂ ಟಾಸ್‌ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌, ಚೇಸಿಂಗ್‌ ಆಯ್ದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್‌ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ 5 ಪಂದ್ಯಗಳ ಟಿ20ಐ ಸರಣಿಯಲ್ಲಿ 2-0 ಮುನ್ನಡೆಯನ್ನು ಪಡೆದಿದೆ. ಇದೀಗ ರಾಜ್‌ಕೋಟ್‌ನಲ್ಲಿ ಗೆದ್ದರೆ, ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಆತಿಥೇಯರು ಟಿ20ಐ ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ. ಇನ್ನು ಪ್ರವಾಸಿ ಇಂಗ್ಲೆಂಡ್‌ ತಂಡ ಟಿ20ಐ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ, ಈ ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಬೇಕಾಗಿದೆ.

IND vs ENG: ರಾಜ್‌ಕೋಟ್‌ನಲ್ಲಿ ಭಾರತ ತಂಡದ ಟಿ20ಐ ಸಾಧನೆ ಹೇಗಿದೆ? ಇಲ್ಲಿದೆ ಮಾಹಿತಿ!

ಮೊಹಮ್ಮದ್‌ ಶಮಿ ಕಮ್‌ಬ್ಯಾಕ್‌

ಮೂರನೇ ಟಿ20ಐ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಎರಡು ಪಂದ್ಯಗಳನ್ನು ಆಡಿದ್ದ ಅರ್ಚದೀಪ್‌ ಸಿಂಗ್‌ಗೆ ವಿಶ್ರಾಂತಿ ನೀಡಿ, ಹಿರಿಯ ವೇಗಿ ಮೊಹಮ್ಮದ್‌ ಶಮಿಗೆ ಪ್ಲೇಯಿಂಗ್‌ XIನಲ್ಲಿ ಅವಕಾಶ ನೀಡಲಾಗಿದೆ. ಆ ಮೂಲಕ 2023ರ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಇದೇ ಮೊದಲ ಬಾರಿ ಶಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ.



ಇಂಗ್ಲೆಂಡ್‌ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ

ಚೆನ್ನೈನಲ್ಲಿ ಆಡಿದ್ದ ಅದೇ ಪ್ಲೇಯಿಂಗ್‌ XI ಅನ್ನು ಇಂಗ್ಲೆಂಡ್ ತಂಡ ಮೂರನೇ ಪಂದ್ಯಕ್ಕೆ ಉಳಿಸಿಕೊಂಡಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಮಾಡು ಇಲ್ಲವೆ ಮಡಿ ಪರಿಸ್ಥಿತಿ ಉಂಟಾಗಿದೆ. ಜೋಸ್‌ ಬಟ್ಲರ್‌ ಬಿಟ್ಟರೆ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಅನುಭವಿಸಿದ್ದಾರೆ. ಈ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಲು ಆಂಗ್ಲರು ಎದುರು ನೋಡುತ್ತಿದ್ದಾರೆ.



ಇತ್ತಂಡಗಳ ಪ್ಲೇಯಿಂಗ್‌ XI

ಭಾರತ: ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ

ಇಂಗ್ಲೆಂಡ್‌: ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮಿ ಸ್ಮಿತ್ (ವಿ.ಕೀ), ಜೇಮಿ ಓವರ್‌ಟನ್, ಬ್ರೈಡನ್ ಕಾಸ್‌, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್

IND vs ENG 3rd T20: ಮೂರನೇ ಟಿ20 ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ, ಸಂಭಾವ್ಯ ತಂಡ ಹೀಗಿದೆ

ತಂಡಗಳು

ಭಾರತ: ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ರಿಂಕು ಸಿಂಗ್, ಶಿವಂ ದುಬೆ , ರಮಣದೀಪ್ ಸಿಂಗ್, ಹರ್ಷಿತ್ ರಾಣಾ

ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿ.ಕೀ), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್‌, ಜೇಮಿ ಸ್ಮಿತ್, ಜೇಮಿ ಓವರ್ಟನ್, ಬ್ರೈಡನ್ ಕಾರ್ಸ್‌, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್ , ರೆಹಾನ್ ಅಹ್ಮದ್