#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IND vs ENG: ಮೊಹಮ್ಮದ್‌ ಶಮಿ ಇಲ್ಲ, ಎರಡನೇ ಟಿ20ಐಗೆ ಭಾರತದ‌ ಸಂಭಾವ್ಯ ಪ್ಲೇಯಿಂಗ್ XI

India's Probable Playing XI: ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಎರಡನೇ ಟಿ20ಐ ಪಂದ್ಯ ಶನಿವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಅನ್ನು ಇಲ್ಲಿ ವಿವರಿಸಲಾಗಿದೆ. ಹಿರಿಯ ವೇಗಿ ಮೊಹಮ್ಮದ್‌ ಶಮಿಗೆ ಅವಕಾಶ ನೀಡುವ ಬಗ್ಗೆ ಯಾವುದೇ ಮುನ್ಸೂಚನೆ ಇಲ್ಲ.

ಎರಡನೇ ಟಿ20ಐಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ವಿವರ

India's Probable Playing XI

Profile Ramesh Kote Jan 24, 2025 10:11 PM

ಚೆನ್ನೈ: ಮೊದಲನೇ ಟಿ20ಐ ಪಂದ್ಯವನ್ನು ಗೆದ್ದು 5 ಪಂದ್ಯಗಳ ಟಿ20ಐ ಸರಣಿಯಲ್ಲಿ (IND vs ENG) 1-0 ಮುನ್ನಡೆ ಪಡೆದಿರುವ ಭಾರತ ತಂಡ, ಶನಿವಾರ (ಜನವರಿ 25) ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಎರಡನೇ ಪಂದ್ಯದ ನಿಮಿತ್ತ ಭಾರತ ತಂಡ ಮರೀನಾ ಕಡಲ ತೀರದಲ್ಲಿ ಕಠಿಣ ತಾಲೀಮು ನಡೆಸುತ್ತಿದೆ. ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದ ಹಿರಿಯ ವೇಗಿ ಮೊಹಮ್ಮದ್‌ ಶಮಿ ಎರಡನೇ ಪಂದ್ಯದಲ್ಲಿಯೂ ಕಣಕ್ಕೆ ಇಳಿಯುವುದು ಅನುಮಾನ.

ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಣಗಣದಲ್ಲಿ ನಡೆದಿದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಪ್ರವಾಸಿ ಇಂಗ್ಲೆಂಡ್‌ ತಂಡ, ವರುಣ್‌ ಚಕ್ರವರ್ತಿ ಸೇರಿದಂತೆ ಭಾರತದ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್‌ ದಾಳಿಗೆ ನಲುಗಿ 132 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಜೋಸ್‌ ಬಟ್ಲರ್‌ (68 ರನ್‌) ಆಂಗ್ಲರ ಪರ ವೈಯಕ್ತಿಕ ಗರಿಷ್ಠ ಸ್ಕೋರರ್‌ ಆಗಿದ್ದರು. ಭಾರತದ ಪರ ವರುಣ್‌ ಚಕ್ರವರ್ತಿ ಮೂರು ವಿಕೆಟ್‌ಗಳನ್ನು ಕಿತ್ತಿದ್ದರು.

IND vs ENG: ಎರಡನೇ ಟಿ20ಐಗೆ ಇಂಗ್ಲೆಂಡ್‌ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ!

ಬಳಿಕ 133 ರನ್‌ಗಳ ಗುರಿ ಹಿಂಬಾಲಿಸಿದ್ದ ಭಾರತ ತಂಡ, ಅಭಿಷೇಕ್‌ ಶರ್ಮಾ (79 ರನ್)‌ ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ 12.5 ಓವರ್‌ಗಳಿಗೆ ಗೆಲುವಿನ ಗಡಿ ದಾಟಿತು. ಇಂಗ್ಲೆಂಡ್‌ ಪರ ಜೋಫ್ರಾ ಆರ್ಚರ್‌ 2 ವಿಕೆಟ್‌ ಕಿತ್ತಿದ್ದರೆ, ಆದಿಲ್‌ ರಶೀದ್‌ ಒಂದು ವಿಕೆಟ್‌ ಪಡೆದಿದ್ದರು. ಅಭಿಷೇಕ್‌ ಶರ್ಮಾಗೂ ಮುನ್ನ ಮತ್ತೊರ್ವ ಆರಂಭಿಕ ಸಂಜು ಸ್ಯಾಮ್ಸನ್‌ ಕೂಡ 26 ರನ್‌ ಗಳಿಸಿದ್ದರು.

ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿತ್ತು. ಹಾರ್ದಿಕ್‌ ಪಾಂಡ್ಯ ಎರಡು ವಿಕೆಟ್‌ ಕಿತ್ತರೂ 4 ಓವರ್‌ಗಳಿಗೆ 42 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಇವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಬೌಲರ್‌ಗಳು ಕೂಡ ಅತ್ಯುತ್ತಮ ಎಕಾನಮಿ ರೇಟ್‌ ಅನ್ನು ಉಳಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಪಂದ್ಯವಾಡಿದ್ದ ಅದೇ ಬೌಲಿಂಗ್‌ ವಿಭಾಗವನ್ನು ಚೆನ್ನೈ ಪಂದ್ಯಕ್ಕೂ ಉಳಿಸಿಕೊಳಗಳುವ ಸಾಧ್ಯತೆ ಇದೆ.

Ind vs Eng 2nd T20I: ದ್ವಿತೀಯ ಪಂದ್ಯದ ಪಿಚ್‌ ರಿಪೋರ್ಟ್‌, ಸಂಭಾವ್ಯ ತಂಡ, ಹವಾಮಾನ ವರದಿ ಹೀಗಿದೆ

ಇನ್ನು ಬ್ಯಾಟಿಂಗ್‌ ವಿಭಾಗದಲ್ಲಿಯೂ ಕೂಡ ಯಾವುದೇ ಬದಲಾವಣೆಯನ್ನು ಮಾಡುವುದು ಅನುಮಾನ. ಕೋಲ್ಕತಾದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ವೈಫಲ್ಯ ಅನುಭವಿಸಿದ್ದರು. ಆದರೆ, ಇನ್ನುಳಿದಂತೆ ಸಂಜು ಸ್ಯಾಮ್ಸನ್‌, ಅಭಿಷೇಕ್‌ ಶರ್ಮಾ, ತಿಲಕ್‌ ವರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ ಸನ್ನಿವೇಶಕ್ಕೆ ತಕ್ಕಂತೆ ಬ್ಯಾಟ್‌ ಮಾಡಿದ್ದರು.

ಎರಡನೇ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ಸಂಜು ಸ್ಯಾಮ್ಸನ್‌ (ವಿ.ಕೀ), ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ (ನಾಯಕ), ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ, ರಿಂಕು ಸಿಂಗ್‌, ಅಕ್ಷರ್‌ ಪಟೇಲ್‌, ನಿತೀಶ್‌ ಕುಮಾರ್‌ ರೆಡ್ಡಿ, ರವಿ ಬಿಷ್ಣೋಯ್‌, ಅರ್ಷದೀಪ್‌ ಸಿಂಗ್‌, ವರುಣ್‌ ಚಕ್ರವರ್ತಿ

ಎರಡನೇ ಟಿ20ಐ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್‌ XI

ಫಿಲ್‌ ಸಾಲ್ಟ್‌ (ವಿ.ಕೀ), ಬೆನ್‌ ಡಕೆಟ್‌, ಜೋಸ್‌ ಬಟ್ಲರ್‌ (ನಾಯಕ), ಹ್ಯಾರಿ ಬ್ರೂಕ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಾಕೋಬ್‌ ಬೆಥೆಲ್‌, ಜೇಮಿ ಓವರ್ಟನ್‌, ಬ್ರೈಡನ್‌ ಕಾರ್ಸ್‌, ಜೋಫ್ರಾ ಆರ್ಚರ್‌, ಆದಿಲ್‌ ರಶೀದ್‌, ಮಾರ್ಕ್‌ ವುಡ್‌



ಪಂದ್ಯದ ವಿವರ

ಭಾರತ vs ಇಂಗ್ಲೆಂಡ್‌

ಎರಡನೇ ಟಿ20ಐ ಪಂದ್ಯ

ದಿನಾಂಕ: ಜನವರಿ 25, 2025

ಸಮಯ: ಸಂಜೆ 07: 00ಕ್ಕೆ

ಸ್ಥಳ: ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಲೈವ್‌ ಸ್ಟ್ರೀಮಿಂಗ್:‌ ಡಿಸ್ನಿ ಹಾಟ್‌ಸ್ಟಾರ್‌