#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IND vs ENG: ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ 4 ಬದಲಾವಣೆ ಸಾಧ್ಯತೆ!

India vs England 3rd ODI: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಬುಧವಾರ ನಡೆಯುವ ಮೂರನೇ ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಆಡುವ ಬಳಗದಲ್ಲಿ ನಾಲ್ಕು ಬದಲಾವಣೆ ಮಾಡುವ ಸಾಧ್ಯತೆ ಇದೆ.

IND vs ENG: 3ನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

India vs England 3rd ODI

Profile Ramesh Kote Feb 11, 2025 9:20 PM

ಅಹಮದಾಬಾದ್‌: ಆರಂಭಿಕ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ ಏಕದಿನ ಸರಣಿಯನ್ನು ಈಗಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಇದೀಗ ಬುಧವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯವನ್ನು ಇಂಗ್ಲೆಂಡ್‌ ಎದುರು ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಆ ಮೂಲಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮುನ್ನ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಲೆಕ್ಕಾಚಾರವನ್ನು ರೋಹಿತ್‌ ಶರ್ಮಾ ಪಡೆ ಹಾಕಿಕೊಂಡಿದೆ.

ಏಕದಿನ ಸರಣಿಯ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿದ್ದ 249 ರನ್‌ಗಳ ಗುರಿಯನ್ನು ಟೀಮ್‌ ಇಂಡಿಯಾ 38.4 ಓವರ್‌ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ ತಲುಪಿತ್ತು. ಇನ್ನು ಭಾನುವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದಲ್ಲಿಯೂ ಟೀಮ್‌ ಇಂಡಿಯಾಗೆ ಚೇಸಿಂಗ್‌ನಲ್ಲಿ ಸವಾಲು ಎದುರಾಗಿತ್ತು. ಆಂಗ್ಲರು ನೀಡಿದ್ದ 305 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಭಾರತ ತಂಡ, ರೋಹಿತ್‌ ಶರ್ಮಾ ಶತಕದ ನೆರವಿನಿಂದ 44.3 ಓವರ್‌ಗಳಿಗೆ ಗೆಲುವು ಪಡೆದಿತ್ತು.

IND vs ENG 3rd ODI: ಸರಣಿ ಕ್ಲೀನ್‌ಸ್ವೀಪ್‌ ಯೋಜನೆಯಲ್ಲಿ ಭಾರತ

ಮೂರನೇ ಪಂದ್ಯಕ್ಕೆ 4 ಬದಲಾವಣೆ ಸಾಧ್ಯತೆ

ಕಳೆದ ಎರಡು ಪಂದ್ಯಗಳಲ್ಲಿ ಬೆಂಚ್‌ ಕಾದಿದ್ದ ಆಟಗಾರರಿಗೆ ಮೂರನೇ ಏಕದಿನ ಪಂದ್ಯದಲ್ಲಿ ಆಡಲು ಅವಕಾಶ ಸಿಗಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ನಾಲ್ಕು ಬದಲಾವಣೆಯನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಅಹಮದಾಬಾದ್‌ನಲ್ಲಿ ರಿಷಭ್‌ ಪಂತ್‌, ಅರ್ಷದೀಪ್‌ ಸಿಂಗ್‌, ಕುಲ್ದೀಪ್‌ ಯಾದವ್‌ ಹಾಗೂ ವಾಷಿಂಗ್ಟನ್‌ ಸುಂದರ್‌ ಆಡುವ ಸಾಧ್ಯತೆ ಇದೆ. ಕುಲ್ದೀಪ್‌ ಯಾದವ್‌ ಮೊದಲನೇ ಪಂದ್ಯದಲ್ಲಿ ಆಡಿ 53 ರನ್‌ ನೀಡಿ ಕೇವಲ ಒಂದು ವಿಕೆಟ್‌ ಪಡೆದಿದ್ದರು. ಆದರೆ, ಎರಡನೇ ಪಂದ್ಯದಲ್ಲಿ ಅವರು ವಿರಾಮ ಪಡೆದಿದ್ದರು.

ಅರ್ಷದೀಪ್‌ ಸಿಂಗ್‌ ಹಾಗೂ ವಾಷಿಂಗ್ಟನ್‌ ಸುಂದರ್‌ ಅವರು ಇನ್ನೂ ಒಂದೂ ಪಂದ್ಯದಲ್ಲಿ ಆಡಿಲ್ಲ. ಆದರೆ, ಕೆಎಲ್‌ ರಾಹುಲ್‌ ಆರಂಭಿಕ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ರಿಷಭ್‌ ಪಂತ್‌ ಮೂರನೇ ಪಂದ್ಯದಲ್ಲಿ ವಿಕೆಟ್‌ ಕೀಪಿಂಗ್‌ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಇನ್ನು ಮೊಹಮ್ಮದ್‌ ಶಮಿ ಸ್ಥಾನಕ್ಕೆ ಅರ್ಷದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ಸ್ಥಾನಕ್ಕೆ ಕುಲ್ದೀಪ್‌ ಯಾದವ್‌ ಮತ್ತು ರವೀಂದ್ರ ಜಡೇಜಾ ಸ್ಥಾನಕ್ಕೆ ವಾಷಿಂಗ್ಟನ್‌ ಸುಂದರ್‌ ಬರಬಹುದು.

IND vs ENG: ಸತತ ವೈಫಲ್ಯದಿಂದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಕನ್ನಡಿಗ ಕೆಎಲ್‌ ರಾಹುಲ್‌!

ಯಶಸ್ವಿ ಜೈಸ್ವಾಲ್‌ಗೆ ಸ್ಥಾನವಿಲ್ಲ

ನಾಗ್ಪುರ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್‌ ಅವರು ವೈಫಲ್ಯ ಅನುಭವಿಸಿದ್ದರು. ಎರಡನೇ ಪಂದ್ಯದಲ್ಲಿ ಅವರು ವಿರಾಟ್‌ ಕೊಹ್ಲಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಮೂರನೇ ಪಂದ್ಯದಲ್ಲಿಯೂ ಜೈಸ್ವಾಲ್‌ ಬೆಂಚ್‌ ಕಾಯಬಹುದು. ಏಕೆಂದರೆ ಭಾರತ ತಂಡದ ಬ್ಯಾಟಿಂಗ್‌ ವಿಭಾಗ ಸಂಪೂರ್ಣ ಪೂರ್ಣಗೊಂಡಿದೆ. ಹಾಗಾಗಿ ಯಶಸ್ವಿ ಜೈಸ್ವಾಲ್‌ಗೆ ಸ್ಥಾನವಿಲ್ಲ. ಒಂದು ವೇಳೆ ರೋಹಿತ್‌ ಶರ್ಮಾ ಅಥವಾ ಶುಭಮನ್‌ ಗಿಲ್‌ ಪೈಕಿ ಯಾರಾದರೂ ಒಬ್ಬರು ಗಾಯಕ್ಕೆ ತುತ್ತಾದರೆ, ಅವರ ಸ್ಥಾನದಲ್ಲಿ ಆಡಿಸಲು ಎಡಗೈ ಬ್ಯಾಟ್ಸ್‌ಮನ್‌ ಅನ್ನು ಉಳಿಸಿಕೊಳ್ಳಲಾಗಿದೆ.

IND vs ENG: ಬ್ಯಾಟಿಂಗ್‌ ಫಾರ್ಮ್‌ ಕಂಡುಕೊಂಡ ರಹಸ್ಯ ಬಹಿರಂಗಪಡಿಸಿದ ರೋಹಿತ್‌ ಶರ್ಮಾ!

ಮೂರನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ರೋಹಿತ್‌ ಶರ್ಮಾ ( ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌ (ವಿ.ಕೀ), ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಹರ್ಷಿತ್‌ ರಾಣಾ, ಕುಲ್ದೀಪ್‌ ಯಾದವ್‌, ಅರ್ಷದೀಪ್‌ ಸಿಂಗ್‌, ವರುಣ್‌ ಚಕ್ರವರ್ತಿ