#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IND vs ENG: ಸೆಂಚುರಿ ಬಾರಿಸಿ ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರೋಹಿತ್‌ ಶರ್ಮಾ!

Rohit Sharma Breaks Sachin Tendulkar's Record: ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತದ ಎರಡನೇ ಓಪನರ್‌ ಎನಿಸಿಕೊಂಡಿದ್ದಾರೆ.

ಶತಕ ಸಿಡಿಸಿ ಕ್ರಿಕೆಟ್‌ ದೇವರ ದಾಖಲೆ ಮುರಿದ ರೋಹಿತ್‌ ಶರ್ಮಾ!

Rohit Sharma Breaks Sachin Tendulkar's Record

Profile Ramesh Kote Feb 10, 2025 12:04 PM

ಕಟಕ್‌: ಫಾರ್ಮ್‌ ಕಂಡುಕೊಳ್ಳಲು ಪರದಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಇಂಗ್ಲೆಂಡ್‌ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ದೀರ್ಘಾವಧಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕವನ್ನು ಸಿಡಿಸಿದ್ದಾರೆ. ತಮ್ಮ ಇನಿಂಗ್ಸ್‌ ಮೂಲಕ ರೋಹಿತ್‌ ಶರ್ಮಾ ಅವರು, ಕ್ರಿಕೆಟ್‌ ದೇವರು ಹಾಗೂ ಮಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಈ ದಾಖಲೆಯ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ಭಾನುವಾರ ಇಲ್ಲಿನ ಬಾರಬತಿ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿದ್ದ 305 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡದ ಪರ ಇನಿಂಗ್ಸ್‌ ಆರಂಭಿಸದ ರೋಹಿತ್‌ ಶರ್ಮಾ, ಭರ್ಜರಿಯಾಗಿ ಬ್ಯಾಟ್‌ ಬೀಸಿದರು. ಆಡಿದ 90 ಎಸೆತಗಳಲ್ಲಿ 7 ಸಿಕ್ಸರ್‌ ಹಾಗೂ 12 ಬೌಂಡರಿಗಳೊಂದಿಗೆ 119 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಭಾರತ ತಂಡದ 4 ವಿಕೆಟ್‌ಗಳ ಗೆಲುವಿಗೆ ನೆರವು ನೀಡಿದರು. ಈ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಗೆಲುವು ಪಡೆಯಿತು.

IND vs ENG: ಬ್ಯಾಟಿಂಗ್‌ ಫಾರ್ಮ್‌ ಕಂಡುಕೊಂಡ ರಹಸ್ಯ ಬಹಿರಂಗಪಡಿಸಿದ ರೋಹಿತ್‌ ಶರ್ಮಾ!

ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರೋಹಿತ್‌ ಶರ್ಮಾ

ಕಟನ್‌ನಲ್ಲಿ ತಮ್ಮ ಫಾರ್ಮ್‌ ಕಂಡುಕೊಂಡ ಇನಿಂಗ್ಸ್‌ನಲ್ಲಿ ರೋಹಿತ್‌ ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತೀಯ ಆರಂಭಿಕ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರೋಹಿತ್‌ ಶರ್ಮಾ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಆ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರನ್ನು ಹಿಂದಿಕ್ಕಿದ್ದಾರೆ. ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ರೋಹಿತ್‌ ಶರ್ಮಾ 15285 ರನ್‌ಗಳ ಮೂಲಕ ಮೂರನೇ ಸ್ಥಾನದಲ್ಲಿದ್ದರು ಹಾಗೂ ಸಚಿನ್‌ ತೆಂಡೂಲ್ಕರ್‌ ಅವರನ್ನು ಹಿಂದಿಕ್ಕಲು ಅವರಿಗೆ ಕೇವಲ 51 ರನ್‌ಗಳ ಅಗತ್ಯವಿತ್ತು.



ಅದರಂತೆ ಅರ್ಧಶತಕವನ್ನು ಸಿಡಿಸಿದ ಬಳಿಕ ಭಾರತೀಯ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ರೋಹಿತ್‌ ಶರ್ಮಾ, ಸಚಿನ್‌ ತೆಂಡೂಲ್ಕರ್‌ ಅವರನ್ನು ಹಿಂದಿಕ್ಕಿದರು. ಕ್ರಿಕೆಟ್‌ ದೇವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 5 ವರ್ಷಗಳ ಬಳಿಕ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ಬಡ್ತಿ ಪಡೆದಿದ್ದರು ಹಾಗೂ ಓಪನರ್‌ ಆಗಿ ಅವರು 15335 ರನ್‌ಗಳನ್ನು ಕಲೆ ಹಾಕಿದ್ದಾರೆ. ಅಂದ ಹಾಗೆ ಸಚಿನ್‌ ತೆಂಡೂಲ್ಕರ್‌ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಆಡಿದ 664 ಪಂದ್ಯಗಳಿಂದ 34357 ರನ್‌ಗಳನ್ನು ಗಳಿಸಿದ್ದಾರೆ.

ಅಗ್ರ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್‌

ಭಾರತೀಯ ಬ್ಯಾಟ್ಸ್‌ಮನ್‌ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದವರ ಪಟ್ಟಿಯಲ್ಲಿ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಅಗ್ರ ಸ್ಥಾನದಲ್ಲಿದ್ದಾರೆ. ಮಾಜಿ ಸ್ಪೋಟಕ ಆರಂಭಿಕ ಹೊಸ ಚೆಂಡನ್ನು ಎದುರಿಸುವ ಮೂಲಕ ಒಟ್ಟು 15758 ರನ್‌ಗಳನ್ನು ಗಳಿಸಿದ್ದಾರೆ. ಅಂದಹಾಗೆ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 17253 ರನ್‌ಗಳನ್ನು ಕಲೆ ಹಾಕಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರೋಹಿತ್‌ ಶರ್ಮಾ ಎರಡನೇ ಸ್ಥಾನದಲ್ಲಿದ್ದರೆ, ಸಚಿನ್‌ ತೆಂಡೂಲ್ಕರ್‌ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.

IND vs ENG 2nd ODI: ರೋಹಿತ್‌ ಶತಕ ವೈಭವ; ಭಾರತಕ್ಕೆ ಸರಣಿ ಗೆಲುವಿನ ಸಂಭ್ರಮ

2013ರಲ್ಲಿ ಓಪನರ್‌ ಆಗಿದ್ದ ಹಿಟ್‌ಮ್ಯಾನ್‌

2007ರಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ರೋಹಿತ್‌ ಶರ್ಮಾ ಪದಾರ್ಪಣೆ ಮಾಡಿದ್ದರೂ ಭಾರತ ತಂಡದಲ್ಲಿ ನಿಯಮಿತವಾಗಿ ಆಡಲು ಸಾಧ್ಯವಾಗಿರಲಿಲ್ಲ. ಆದರೆ, 2013ರಲ್ಲಿ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ಬಡ್ತಿ ಪಡೆದ ಬಳಿಕ ಹಿಟ್‌ಮ್ಯಾನ್‌, ಟೀಮ್‌ ಇಂಡಿಯಾಗೆ ಕೀ ಬ್ಯಾಟ್ಸ್‌ಮನ್‌ ಆಗಿ ಹೊರಹೊಮ್ಮಿದ್ದರು. ಎಂಎಸ್‌ ಧೋನಿ ನಾಯಕತ್ವದ ಅಡಿಯಲ್ಲಿ ರೋಹಿತ್‌ ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು.