IND vs ENG: ಇಂಗ್ಲೆಂಡ್ ಏಕದಿನ ಸರಣಿಯ ಭಾರತ ತಂಡದಲ್ಲಿ ವರುಣ್ ಚಕ್ರವರ್ತಿಗೆ ಸ್ಥಾನ!
Varun Chakaravarthy added to India’s ODI squad: ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡಕ್ಕೆ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ (IND vs ENG) ಭಾರತ ತಂಡಕ್ಕೆ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಆಂಗ್ಲರ ವಿರುದ್ಧ ಇತ್ತೀಚೆಗೆ ಮುಗಿದಿದ್ದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ವರುಣ್ ಚಕ್ರವರ್ತಿ ( Varun Chakravarthy) ಸ್ಪಿನ್ ಮೋಡಿ 14 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಏಕದಿನ ತಂಡದಲ್ಲಿಯೂ ಸ್ಥಾನ ಕಲ್ಪಿಸಲಾಗಿದೆ.
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಸಾರಥ್ಯದ ತಂಡದ ಜೊತೆ ಇಂದು (ಮಂಗಳವಾರ) ಬೆಳಗ್ಗೆ ನೆಟ್ ಅಭ್ಯಾಸದಲ್ಲಿ ಮಿಸ್ಟ್ರಿ ಸ್ಪಿನ್ನರ್ ಕಾಣಿಸಿಕೊಂಡ ಬೆನ್ನಲ್ಲೇ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. "ಪುರುಷರ ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಿದೆ," ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
IND vs ENG: ರಾಹುಲ್ ಇನ್, ಪಂತ ಔಟ್! ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಐವರು ಸ್ಪಿನ್ನರ್‌ಗಳಿಗೆ ಸ್ಥಾನ
ಬಿಸಿಸಿಐ ಆಯ್ಕೆ ಮಂಡಳಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ರಕಟಿಸಿರುವ 16 ಸದಸ್ಯರ ತಂಡದಲ್ಲಿ ಐವರು ಸ್ಪಿನ್ನರ್‌ಗಳು ಸ್ಥಾನ ಪಡೆದಿದ್ದಾರೆ. ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಈಗಾಗಲೇ ತಂಡದಲ್ಲಿದ್ದಾರೆ. ಮಂಗಳವಾರ (ಫೆಬ್ರವರಿ 4) ವರುಣ್ ಚಕ್ರವರ್ತಿ ಸೇರ್ಪಡೆಯಿಂದ ಭಾರತ ತಂಡದಲ್ಲಿ ಒಟ್ಟು ಐವರು ಸ್ಪಿನ್ನರ್‌ಗಳು ಸೇರ್ಪಡೆಯಾದಂತಾಗಿದೆ.
🚨 𝗡𝗘𝗪𝗦 🚨
— BCCI (@BCCI) February 4, 2025
Varun Chakaravarthy added to India’s squad for ODI series against England.
Details 🔽 #TeamIndia | #INDvENG | @IDFCFIRSTBank
ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ
2021ರಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಟಿ20ಐ ಸರಣಿ ಮೂಲಕ ವರುಣ್ ಚಕ್ರವರ್ತಿ ವೈಟ್ ಬಾಲ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆದರೆ ಅವರು ಇದುವರೆಗೂ ಏಕದಿನ ಪಂದ್ಯ ಆಡುವ ಅವಕಾಶ ಪಡೆದಿರಲಿಲ್ಲ. ಇದೀಗ ನಾಗ್ಪುರದ ಎಂಸಿಎ ಕ್ರೀಡಾಂಗಣದಲ್ಲಿ ಗುರುವಾರ (ಫೆ.6) ನಡೆಯುವ ಮೊದಲನೇ ಏಕದಿನ ಪಂದ್ಯವನ್ನು ಆಡಲು ಎದುರು ನೋಡುತ್ತಿದ್ದಾರೆ.
5ನೇ ಕ್ರಮಾಂಕಕ್ಕೆ ವರುಣ್ ಲಗ್ಗೆ
ಇಂಗ್ಲೆಂಡ್ ವಿರುದ್ಧದ ರಾಜ್‌ಕೋಟ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಐದು ವಿಕೆಟ್ ಪಡೆದ ವರುಣ್ ಚಕ್ರವರ್ತಿ , ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟಿಸಿದ್ದ ನೂತನ ಟಿ20-ಐ ಶ್ರೇಯಾಂಕ ಪಟ್ಟಿಯಲ್ಲಿ 25ನೇ ಸ್ಥಾನಗಳನ್ನು ಏರಿಕೆ ಕಂಡು ಐದನೇ ಶ್ರೇಯಾಂಕಕ್ಕೆ ಲಗ್ಗೆ ಇಟ್ಟಿದ್ದಾರೆ. ಅಲ್ಲದೆ ಟಿ20-ಐ ನಲ್ಲಿ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ನಂತರ ಚುಟುಕು ಸರಣಿಯಲ್ಲಿ ಎರಡು ಬಾರಿ ಐದು ವಿಕೆಟ್ ಸಾಧನೆ ಮಾಡಿದ ಬೌಲರ್ ಎಂಬ ದಾಖಲೆಗೆ ವರುಣ್ ಚಕ್ರವರ್ತಿ ಭಾಜನರಾಗಿದ್ದರು.
IND vs ENG: ಸಚಿನ್ ತೆಂಡೂಲ್ಕರ್‌ರ 19 ವರ್ಷಗಳ ದಾಖಲೆ ಮೇಲೆ ವಿರಾಟ್ ಕೊಹ್ಲಿ ಕಣ್ಣು!
ಅಶ್ವಿನ್ ಸಲಹೆ ಬೆನ್ನಲ್ಲೆ ಏಕದಿನ ತಂಡಕ್ಕೆ ವರುಣ್ ಆಯ್ಕೆ
ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಸ್ಥಾನ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ಪಡೆಯುವರೇ ಎಂಬುದನ್ನು ಕಾದು ನೋಡಬೇಕು.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತದ ಪರಿಷ್ಕೃರಿಸಿದ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ