IND vs ENG: ಟಿ20ಐ ಸರಣಿಗೂ ಮುನ್ನ ಭಾರತ ತಂಡಕ್ಕೆ 3 ದಿನಗಳ ಕ್ಯಾಂಪ್!
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20ಐ ಸರಣಿಗೂ ಮುನ್ನ ಭಾರತ ತಂಡ ಕೋಲ್ಕತಾದಲ್ಲಿ ಮೂರು ದಿನಗಳ ಅಭ್ಯಾಸ ಶಿಬಿರದಲ್ಲಿ ಭಾಗವಹಿಸಲಿದೆ. ಜನವರಿ 22 ರಂದು ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮೊದಲನೇ ಪಂದ್ಯದ ಮೂಲಕ ಟಿ20ಐ ಸರಣಿ ಆರಂಭವಾಗಲಿದೆ.
ನವದೆಹಲಿ: ಇಂಗ್ಲೆಂಡ್ ವಿರುದ್ದ ಐದು ಪಂದ್ಯಗಳ ಟಿ20ಐ ಸರಣಿಗೂ ಮುನ್ನ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡಕ್ಕೆ ಮೂರು ದಿನಗಳ ಅಭ್ಯಾಸ ಶಿಬಿರವನ್ನು ಏರ್ಪಡಿಸಲಾಗಿದೆ. ಜನವರಿ 18 ರಿಂದ ಮೂರು ದಿನಗಳ ಕಾಲ ಕೋಲ್ಕತಾದಲ್ಲಿ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸ ಶಿಬಿರ ನಡೆಯಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಭಾರತ ಟಿ20ಐ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರು ಯಶಸ್ವಿಯಾಗಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಈಗಾಗಲೇ ಭಾರತ ತಂಡ, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಟಿ20ಐ ಸರಣಿಗಳನ್ನು ಗೆದ್ದಿದೆ. ಇದರಲ್ಲಿ ಕೆಲ ಪಂದ್ಯಗಳಲ್ಲಿ ಹಲವು ದಾಖಲೆಗಳನ್ನು ಬರೆಯಲಾಗಿದೆ.
ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಓಪನರ್ ಆಗಿ ಬಡ್ತಿ ನೀಡಲಾಗಿದೆ. ಅದರಂತೆ ಸಿಕ್ಕ ಅವಕಾಶವನ್ನು ಅವರು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದ್ದಾರೆ. ಅವರು ಆಡಿದ್ದ ಕೊನೆಯ ಐದು ಟಿ20ಐ ಪಂದ್ಯಗಳಲ್ಲಿ ಮೂರು ಶತಕಗಳನ್ನು ಸಿಡಿಸಿ ಗಮನ ಸೆಳೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ದ ಸರಣಿಯಲ್ಲಿಯೂ ಕೇರಳ ಮೂಲದ ಬ್ಯಾಟ್ಸ್‌ಮನ್ ಮುಂದುವರಿಯಲಿದ್ದಾರೆ. ಇವರ ಜತೆ ಪಂಜಾಬ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಓಪನರ್ ಆಗಿ ಮುಂದುವರಿಯಲಿದ್ದಾರೆ.
ಭಾರತದ ಆಟಗಾರರಿಗೆ 10 ಅಂಶಗಳ ಶಿಸ್ತಿನ ಮಾರ್ಗಸೂಚಿಗಳನ್ನು ಹೊರಡಿಸಿದ ಬಿಸಿಸಿಐ!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಆಡಿದ್ದ ಜಸ್‌ಪ್ರೀತ್ ಬುಮ್ರಾ ಸೇರಿದಂತೆ ಬಹುತೇಕ ಆಟಗಾರರಿಗೆ ಟಿ20ಐ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಬುಮ್ರಾ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಆದರೂ ಒಂದು ವರ್ಷಕ್ಕೂ ಅಧಿಕ ಅವಧಿ ಭಾರತ ತಂಡದಿಂದ ಹೊರಗುಳಿದಿದ್ದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಈ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರೆ. ರಿಷಭ್ ಪಂತ್‌ಗೂ ವಿಶ್ರಾಂತಿ ನೀಡಲಾಗಿದ್ದು, ಸಂಜು ಸ್ಯಾಮ್ಸನ್‌ಗೆ ಎರಡನೇ ವಿಕೆಟ್ ಕೀಪರ್ ಆಯ್ಕೆಯಾಗಿ ಧ್ರುವ್ ಜುರೆಲ್‌ಗೆ ಸ್ಥಾನವನ್ನು ನೀಡಲಾಗಿದೆ.
ಟಿ20ಐ ಸರಣಿ ಆರಂಭ ಯಾವಾಗ?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20ಐ ಸರಣಿ ಜನವರಿ ಜನವರಿ 22 ರಂದು ಆರಂಭವಾಗಲಿದೆ. ಟಿ20ಐ ಸರಣಿ ಮುಗಿದ ಬಳಿಕ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. 50 ಓವರ್‌ಗಳ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರು ಆಡಲಿದ್ದಾರೆ. ಆ ಮೂಲಕ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಿದ್ದತೆಯನ್ನು ನಡೆಸಲಿದ್ದಾರೆ.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರನ್ನು ಭೇಟಿಯಾದ ಕ್ರಿಕೆಟರ್ ನಿತೀಶ್ ರೆಡ್ಡಿ!
ಜೂಲನ್ ಗೋಸ್ವಾಮಿಗೆ ವಿಶೇಷ ಗೌರವ
ಮೊದಲನೇ ಟಿ20ಐ ಪಂದ್ಯದ ವೇಳೆ ಮಹಿಳಾ ಕ್ರಿಕೆಟ್ ದಂತಕತೆ ಜೂಲನ್ ಗೋಸ್ವಾಮಿಗೆ ಗೌರವ ಸಲ್ಲಿಸಲು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಸ್ಟ್ಯಾಂಡ್‌ವೊಂದಕ್ಕೆ ಜೂಲನ್ ಗೋಸ್ವಾಮಿ ಅವರ ಹೆಸರನ್ನು ಇಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪ ನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿ.ಕೀ)