IND vs NZ: ರೋಹಿತ್ ಶರ್ಮಾ ಔಟ್? ಕಿವೀಸ್ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ ನಿರೀಕ್ಷೆ!
India's Playing XI for New Zealand Clash: ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಸೆಮಿಫೈನಲ್‌ಗೆ ಬಹುತೇಕ ಅರ್ಹತೆ ಪಡೆದಿದೆ. ಇದೀಗ ಮಾರ್ಚ್2 ರಂದು ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೆಣಸಲಿದೆ.

IND vs NZ

ದುಬೈ: ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಸೆಮಿಪೈನಲ್‌ಗೆ ಬಹುತೇಕ ಅರ್ಹತೆ ಪಡೆದಿದೆ. ಭಾನುವಾರ ಇಲ್ಲಿನ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಪಾಕಿಸ್ತಾನ ನೀಡಿದ್ದ 242 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಭಾರತ ತಂಡದ ಪರ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧವೂ ಭಾರತ ತಂಡ 6 ವಿಕೆಟ್‌ಗಳಿಂದ ಗೆದ್ದಿತ್ತು.
ಪಾಕಿಸ್ತಾನ ತಂಡ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋಲುವ ಮೂಲಕ ನಾಕ್‌ಔಟ್ ಹಂತದಿಂದ ಬಹುತೇಕ ಹೊರಬಿದ್ದಿದೆ. ಆದರೆ, ಇನ್ನುಳಿದ ಒಂದು ಸ್ಥಾನಕ್ಕೆ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪೈಪೋಟಿ ನಡೆಯಲಿದೆ. ಭಾರತ ತಂಡ ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ತನ್ನ ಲೀಗ್ ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಕೆಲ ಬದಲಾವಣೆಯನ್ನು ನಾವು ನಿರೀಕ್ಷೆ ಮಾಡಬಹುದಾಗಿದೆ. ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಅವರು ನ್ಯೂಜಿಲೆಂಡ್ ಪಂದ್ಯದ ಒಳಗೆ ಸಂಪೂರ್ಣ ಫಿಟ್‌ನೆಸ್‌ಗೆ ಮರಳುವ ಬಗ್ಗೆ ಇನ್ನು ಯಾವುದೇ ಖಚಿತತೆ ಇಲ್ಲ.
IND vs PAK: ಕೊಹ್ಲಿ ಶತಕ ವೈಭವ; ಪಾಕ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ
ಒಂದು ವೇಳೆ ರೋಹಿತ್ ಶರ್ಮಾ ಮುಂದಿನ ಪಂದ್ಯಕ್ಕೆ ಅಲಭ್ಯರಾದರೆ, ಭಾರತ ತಂಡದ ಪ್ಲೇಯಿಂಗ್ XIನಲ್ಲಿ ರಿಷಭ್ ಪಂತ್‌ಗೆ ಅವಕಾಶ ನೀಡಬಹುದು. ಕಳೆದ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದ ಕೆಎಲ್ ರಾಹುಲ್, ಉಪ ನಾಯಕ ಶುಭಮನ್ ಗಿಲ್ ಜೊತೆ ಇನಿಂಗ್ಸ್ ಆರಂಭಿಸಬಹುದು. ತದ ನಂತರ ಭಾರತ ತಂಡದ ಸೆಮಿಫೈನಲ್‌ಗೆ ರೋಹಿತ್ ಶರ್ಮಾ ನೇರವಾಗಿ ಬರಬಹುದು. ಆ ಮೂಲಕ ಅಲ್ಲಿಯ ತನಕ ಅವರಿಗೆ ಹೆಚ್ಚಿನ ವಿಶ್ರಾಂತಿ ಸಿಗಲಿದೆ.
ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ ಸ್ವಲ್ಪ ಅಸ್ವಸ್ಥತೆಯಿಂದ ಕಂಡಿದ್ದರು. ಅವರು ದೀರ್ಘಾವಧಿ ಬಳಿಕ ಗಾಯದಿಂದ ಕಮ್‌ಬ್ಯಾಕ್ ಮಾಡಿ ಭಾರತ ತಂಡಕ್ಕೆ ಮರಳಿದ್ದಾರೆ. ನಾಕ್‌ಔಟ್ ಪಂದ್ಯಗಳಿಗೆ ಉಳಿಸಿಕೊಳ್ಳಲು ಟೀಮ್ ಮ್ಯಾನೇಜ್‌ಮೆಂಟ್ ಕಿವೀಸ್ ಎದುರಿನ ಪಂದ್ಯಕ್ಕೆ ಶಮಿಗೆ ವಿಶ್ರಾಂತಿ ನೀಡಬಹುದು. ಏಕೆಂದರೆ ಭಾರತ ತಂಡಕ್ಕೆ ಜಸ್‌ಪ್ರೀತ್ ಬುಮ್ರಾ ಸೇವೆ ಲಭ್ಯವಿಲ್ಲ. ಒಂದು ವೇಳೆ ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIಗೆ ಲಭ್ಯವಾಗಿಲ್ಲವಾದರೆ, ಅವರ ಸ್ಥಾನಕ್ಕೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಭಾರತ ತಂಡಕ್ಕೆ ಮರಳಲಿದ್ದಾರೆ.
IND vs PAK: ಗರಿಷ್ಠ ಕ್ಯಾಚ್ ದಾಖಲೆ ಬರೆದ ಕಿಂಗ್ ಕೊಹ್ಲಿ
ಒಂದು ವೇಳೆ ರೋಹಿತ್ ಶರ್ಮಾ ಸಂಪೂರ್ಣ ಫಿಟ್‌ನೆಸ್‌ಗೆ ಮರಳಲಿಲ್ಲವಾದರೆ, ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಮತ್ತು ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಪ್ಲೇಯಿಂಗ್ XIನಲ್ಲಿ ಆಡಲಿದ್ದಾರೆ. ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ವೇಗದ ಬೌಲರ್‌ಗಳಾಗಿ ಆಡಲಿದ್ದಾರೆ.
ನ್ಯುಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI
ಶುಭಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ