IND vs NZ: ಅರ್ಧಶತಕ ಬಾರಿಸಿ ಅಪಾಯದಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದ ಶ್ರೇಯಸ್ ಅಯ್ಯರ್!
Shreyas Iyer Scored fifty against NZ: ನ್ಯೂಜಿಲೆಂಡ್ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಅಪಾಯಕ್ಕೆ ಸಿಲುಕಿದ್ದ ಭಾರತ ತಂಡವನ್ನು ಮೇಲೆತ್ತಿದರು ಹಾಗೂ ಟೀಮ್ ಇಂಡಿಯಾ 240ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಲು ಭಾರತ ತಂಡಕ್ಕೆ ನೆರವು ನೀಡಿದ್ದಾರೆ.

ಶ್ರೇಯಸ್ ಅಯ್ಯರ್ ಅರ್ಧಶತಕ.

ದುಬೈ: ಪ್ರಸ್ತುತ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ತಮ್ಮ ಬ್ಯಾಟಿಂಗ್ ಲಯವನ್ನು ಮುಂದುವರಿಸಿದ್ದಾರೆ. ಅವರು ಭಾನುವಾರ ಇಲ್ಲಿನ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ದದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕವನ್ನು ಸಿಡಿಸುವ ಮೂಲಕ ಅಪಾಯಕ್ಕೆ ಸಿಲುಕಿದ್ದ ಟೀಮ್ ಇಂಡಿಯಾವನ್ನು ಮೇಲೆತ್ತಿದ್ದರು.
ಕ್ರಿಕೆಟ್ ಇತಿಹಾಸದಲ್ಲಿಯೇ ಭಾರತಕ್ಕೆ ನ್ಯೂಜಿಲೆಂಡ್ ಅತ್ಯಂತ ಅಪಾಯಕಾರಿ ತಂಡ. ಕಿವೀಸ್ ಇಲ್ಲಿಯವರೆಗೆ ಎರಡು ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಎರಡೂ ಬಾರಿಯೂ ಅದು ಫೈನಲ್‌ನಲ್ಲಿ ಭಾರತವನ್ನು ಸೋಲಿಸಿತ್ತು. 2013 ರಿಂದ ಭಾರತ ತಂಡ, ತನ್ನ ತವರು ಟೆಸ್ಟ್ ಸರಣಿಯಲ್ಲಿ ಸೋಲು ಅನುಭವಿಸಿರಲಿಲ್ಲ. ಆದರೆ, 2024 ರಲ್ಲಿ ನ್ಯೂಜಿಲೆಂಡ್ ತಂಡ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಘಟಾನುಘಟಿ ಬ್ಯಾಟ್ಸ್‌ಮನ್‌ಗಳ ತಿಣುಕಾಡುತ್ತಾರೆ. ಆದರೆ, ಕಿವೀಸ್ ಬೌಲಿಂಗ್ ದಾಳಿಯನ್ನು ಶ್ರೇಯಸ್ ಅಯ್ಯರ್ ಸಮರ್ಥವಾಗಿ ಮೆಟ್ಟಿ ನಿಲ್ಲುತ್ತಾರೆ.
IND vs NZ: ಕೊನೆಯ ಲೀಗ್ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲ ಬ್ಯಾಟಿಂಗ್!
ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕಿವೀಸ್ ಮತ್ತೊಮ್ಮೆ ಭಾರತ ತಂಡವನ್ನು ಅಪಾಯಕ್ಕೆ ಸಿಲುಕಿಸಿತ್ತು. ಭಾರತ ತಂಡ ಕೇವಲ 30 ರನ್‌ಗಳನ್ನು ಗಳಿಸಿರುವಾಗಲೇ ಶುಭಮನ್ ಗಿಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಶ್ರೇಯಸ್ ಅಯ್ಯರ್, ಕಿವೀಸ್ ಮಾರಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದರು.
ಒತ್ತಡದ ಸಮಯದಲ್ಲಿ 79 ರನ್ ಸಿಡಿಸಿದ ಅಯ್ಯರ್
ಒತ್ತಡದ ಸಮಯವನ್ನು ಸಮರ್ಥವಾಗಿ ನಿರ್ವಹಿಸಿದ ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕವನ್ನು ಪೂರ್ಣಗೊಳಿಸಿದರು. ಅವರು ಆಡಿದ 98ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 79 ರನ್‌ಗಳನ್ನು ಕಲೆ ಹಾಕಿದರು ಹಾಗೂ ಅಕ್ಷರ್ ಪಟೇಲ್‌ಗೆ ಜೊತೆ 98 ರನ್‌ಗಳ ನಿರ್ಣಾಯಕ ಜೊತೆಯಾಟವನ್ನು ಆಡುವ ಮೂಲಕ ಅಪಾಯದಲ್ಲಿದ್ದ ಭಾರತ ತಂಡವನ್ನು ಮೇಲೆತ್ತಿದ್ದರು. ಅಲ್ಲದೆ ಟೀಮ್ ಇಂಡಿಯಾ 172 ರನ್‌ಗಳ ಗಡಿಯನ್ನು ತಲುಪಲು ಶ್ರೇಯಸ್ ಅಯ್ಯರ್ ನೆರವು ನೀಡಿದ್ದರು.
IND vs NZ: ವಿರಾಟ್ ಕೊಹ್ಲಿಯನ್ನು ದಂತಕತೆ ಎನ್ನಲು ಕಾರಣ ತಿಳಿಸಿದ ವಿವಿಯನ್ ರಿಚರ್ಡ್ಸ್!
ಕಿವೀಸ್ ಎದುರು 70ರ ಸರಾಸರಿ
ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ಸರಾಸರಿ 70 ಕ್ಕಿಂತ ಹೆಚ್ಚಾಗಿದೆ. ಅವರು ಇಲ್ಲಿಯವರೆಗೆ ಕಿವೀಸ್ ತಂಡದ ವಿರುದ್ಧ 9 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 70.37ರ ಸರಾಸರಿ ಮತ್ತು 100.71 ಸ್ಟ್ರೈಕ್ ರೇಟ್‌ನಲ್ಲಿ 563 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಎರಡು ಶತಕಗಳು ಮತ್ತು ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧ ತಮ್ಮ ಏಕದಿನ ವೃತ್ತಿಜೀವನದಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧದ ತಮ್ಮ ಟೆಸ್ಟ್ ಚೊಚ್ಚಲ ಪಂದ್ಯದಲ್ಲಿ ಶತಕ ಗಳಿಸಿದರು.
Scored a fantastic 79(98) when the going got tough 💪
— BCCI (@BCCI) March 2, 2025
Well played Shreyas Iyer 👏👏
Live ▶️ https://t.co/Ba4AY30p5i#TeamIndia | #NZvIND | #ChampionsTrophy | @ShreyasIyer15 pic.twitter.com/WgZQRwYd5Q
105 ರನ್‌ಗಳ ಇನಿಂಗ್ಸ್
2023ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು ಸೋಲಿಸಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ 50 ನೇ ಶತಕವನ್ನು ಸಿಡಿಸಿದ್ದರು. ಆದರೆ, ಈ ಶ್ರೇಯಸ್ ಅಯ್ಯರ್ ಮ್ಯಾಚ್ ವಿನ್ನಿಂಗ್ ಶತಕವನ್ನು ಸಿಡಿಸಿದ್ದರು. ಗೆಲ್ಲುವ ಅವರು ಕೇವಲ 70 ಎಸೆತಗಳಲ್ಲಿ 105 ರನ್ ಸಿಡಿಸಿದ್ದರು. 150 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿದ್ದ ಅಯ್ಯರ್ 4 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದರ ಫಲವಾಗಿ ಭಾರತ ತಂಡ ಅಂದು 397 ರನ್‌ಗಳನ್ನು ಕಲೆ ಹಾಕಿತ್ತು ಹಾಗೂ ಅಂತಿಮವಾಗಿ 70 ರನ್‌ಗಳಿಂದ ಗೆಲುವು ಪಡೆದಿತ್ತು.