ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India-Pak Tensions: ಪಾಕ್‌ ವಾಯುಪ್ರದೇಶ ಬಂದ್‌; ಎಲ್ಲಾ ವಿಮಾನ ಸಂಚಾರ ಸ್ಥಗಿತ

Pak Shuts Airspace: ಪಾಕ್‌ ವಿರುದ್ಧ ಭಾರತ ಕೌಂಟರ್‌ ಅಟ್ಯಾಕ್‌ ಶುರು ಮಾಡಿದ ಬೆನ್ನಲ್ಲೇ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಇಂದು ಮಧ್ಯಾನದವರೆಗೆ ವಿಮಾನ ಸಂಚಾರ ಸ್ಥಗಿತಗೊಳಿಸಿರುವ ಮಾಹಿತಿ ಹೊರಬಿದ್ದಿದೆ. ಭಾರತದ ವೈಮಾನಿಕ ದಾಳಿ ಬಗ್ಗೆ ಭೀತಿ ಇರುವ ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸುತ್ತಿದೆ ಭಾರತ ಆರೋಪಿಸಿತ್ತು.

ಪಾಕ್‌ ವಾಯುಪ್ರದೇಶ ಬಂದ್‌; ಎಲ್ಲಾ ವಿಮಾನ ಸಂಚಾರ ಸ್ಥಗಿತ

Profile Rakshita Karkera May 10, 2025 5:03 AM

ಇಸ್ಲಮಾಬಾದ್: ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಾಯುಪ್ರದೇಶವನ್ನು ಮುಚ್ಚಿದ್ದು, ಇಂದು ಮಧ್ಯಾಹ್ನದವರೆಗೆ ಎಲ್ಲಾ ನಾಗರಿಕ ವಿಮಾನಗಳ ಸಂಚಾರ ಸ್ಥಗಿತಗೊಳಿಸಿ(Pak Shuts Airspace) ಆದೇಶ ಹೊರಡಿಸಿದೆ. ಭಾರತದ ಡ್ರೋನ್ ದಾಳಿಯಿಂದ ತತ್ತರಿಸಿರುವ ಪಾಕಿಸ್ತಾನ ತನ್ನ ನಾಗರಿಕ ವಿಮಾನಗಳನ್ನು ರಕ್ಷಣೆಗಾಗಿ ಗುರಾಣಿಯಂತೆ ಬಳಸಿಕೊಳ್ಳುತ್ತಿವೆ ಭಾರತ ಆರೋಪಿಸಿದ(India-Pak Tensions) ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಇಂದು ಎಲ್ಲಾ ವಾಯು ಸಂಚಾರಕ್ಕಾಗಿ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಭಾರತವು ಪ್ರಮುಖ ಸೇನಾ ನೆಲೆಗಳು ಮತ್ತು ನಗರಗಳ ಮೇಲೆ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದ ಸ್ವಲ್ಪ ಸಮಯದ ನಂತರ, ಪಾಕಿಸ್ತಾನವು NOTAM ಸಲಹೆಯನ್ನು ನೀಡಿತು ಮತ್ತು ಶನಿವಾರ ಮಧ್ಯಾಹ್ನದವರೆಗೆ ಎಲ್ಲಾ ಸಂಚಾರಕ್ಕಾಗಿ ತನ್ನ ವಾಯುಪ್ರದೇಶವನ್ನು ಮುಚ್ಚಿ ಆದೇಶ ಹೊರಡಿಸಿತು.

"ಭಾರತದ ವೈಮಾನಿಕ ದಾಳಿ ಬಗ್ಗೆ ಭೀತಿ ಇರುವ ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರರಾಷ್ಟ್ರೀಯ ಗಡಿಯ ಬಳಿ ಹಾರಾಟ ನಡೆಸುತ್ತಿದ್ದ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಅನುಮಾನಾಸ್ಪದ ನಾಗರಿಕ ವಿಮಾನಗಳಿಗೆ ಇದು ಸುರಕ್ಷಿತವಲ್ಲ" ಎಂದು ಸೇನೆಯ ಕರ್ನಲ್ ಸೋಫಿಯಾ ಖುರೇಷಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕಳೆದ ಮೂರು ದಿನಗಳಿಂದ ನಿರಂತರವಾಗಿ ಭಾರತದ ಗಡಿ ಪ್ರದೇಶಗಳಲ್ಲಿ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿ(India-Pak Tensions) ಪುಂಡಾಟ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತ ಮತ್ತೆ ಮುಟ್ಟಿ ನೋಡಿಕೊಳ್ಳುವಂತಹ ತಿರುಗೇಟು ನೀಡಿದೆ. ಭಾರತದ ನಾಗರಿಕರು ಮತ್ತು ಸೇನಾ ನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸುತ್ತಿದ್ದ ನಿರಂತರ ದಾಳಿಗೆ ಭಾರತ ಇದೀಗ ತಕ್ಕ ಪ್ರತ್ಯುತ್ತರ ನೀಡಿದೆ. ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗೆ ಭಾರತದ 26 ಸ್ಥಳಗಳಲ್ಲಿ ಪಾಕಿಸ್ತಾನ ಹೊಸ ಡ್ರೋನ್ ದಾಳಿಯನ್ನು ನಡೆಸಿದ ನಂತರ ಕೌಂಟರ್‌ ಅಟ್ಯಾಕ್‌ ಶುರು ಮಾಡಿದ ಭಾರತ, ಇಸ್ಲಾಮಾಬಾದ್, ಲಾಹೋರ್, ರಾವಲ್ಪಿಂಡಿ ಮತ್ತು ಶೇಖುಪುರ ನಗರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್‌ ದಾಳಿ ನಡೆಸಿದೆ. ‌

ಈ ಸುದ್ದಿಯನ್ನೂ ಓದಿ: Operation Sindoor: ರಾತ್ರಿಯಾಗುತ್ತಿದ್ದಂತೆ ಪಾಕಿಸ್ತಾನದಿಂದ ದಾಳಿ; ಪಂಜಾಬ್‌ನಲ್ಲಿ ಡ್ರೋನ್‌ ಸ್ಫೋಟಗೊಂಡು ಮೂವರಿಗೆ ಗಾಯ

ರಕ್ಷಣಾ ಮೂಲಗಳ ಪ್ರಕಾರ, ರಾವಲ್ಪಿಂಡಿಯಲ್ಲಿರುವ ನೂರ್ ಖಾನ್‌ನಲ್ಲಿರುವ ಪಾಕಿಸ್ತಾನದ ವಾಯುಪಡೆ ನೆಲೆಯ ಮೇಲೂ ಭಾರತ ದಾಳಿ ಮಾಡಿದೆ. ಸಿಯಾಲ್‌ಕೋಟ್ ಮತ್ತು ನರೋವಾಲ್‌ನಲ್ಲಿರುವ ಪಾಕಿಸ್ತಾನಿ ಸೇನಾ ನೆಲೆಗಳ ಮೇಲೆ ಅಟ್ಯಾಕ್‌ ನಡೆದಿದೆ.

ಪದೇ ಪದೇ ಕದನ ವಿರಾಮ ಉಲ್ಲಂಘನೆಗೆ ಪ್ರತೀಕಾರವಾಗಿ ಭಾರತ ರಾತ್ರೋರಾತ್ರಿ ದಾಳಿ ನಡೆಸಿದ್ದರಿಂದ ಪಾಕಿಸ್ತಾನದ ಮೂರು ಸೇನಾ ವಾಯುನೆಲೆಗಳು ಧ್ವಂಸಗೊಂಡಿವೆ ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಶೋರ್ಕೋಟ್‌ನ ರಫಿಕಿ ವಾಯುನೆಲೆ ಮತ್ತು ಚಕ್ವಾಲ್‌ನ ಮುರಿಯದ್ ವಾಯುನೆಲೆಯ ಮೇಲೆ ಈ ದಾಳಿ ನಡೆದಿದೆ. ಪಾಕಿಸ್ತಾನ ಶುಕ್ರವಾರ ಭಾರತದ 26 ಸ್ಥಳಗಳಲ್ಲಿ ಡ್ರೋನ್ ದಾಳಿ ನಡೆಸಿದ ನಂತರ, ಭಾರತ ಪಾಕಿಸ್ತಾನದ ಮೇಲೆ ರಾತ್ರಿಯಿಡೀ ದಾಳಿ ಮಾಡಲು ಗಾಳಿಯಿಂದ ಮೇಲ್ಮೈಗೆ ಚಿಮ್ಮುವ ಕ್ಷಿಪಣಿಯನ್ನು ಬಳಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. .

ಪಾಕಿಸ್ತಾನವು ಭಾರತೀಯ ನಾಗರಿಕ ಪ್ರದೇಶಗಳು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡ ನಂತರ ಭಾರತ ಪ್ರತೀಕಾರದ ದಾಳಿಯನ್ನು ನಡೆಸಿತು. ನಾವು ಪಾಕಿಸ್ತಾನದ ಸೇನಾ ನೆಲೆಗಳು ಅಥವಾ ನಾಗರಿಕ ಪ್ರದೇಶಗಳ ಮೇಲೆ ದಾಳಿ ಮಾಡಿಲ್ಲ. ನಿನ್ನೆಯಿಂದ ಪಾಕಿಸ್ತಾನದ ಪ್ರಯತ್ನಗಳು ಕ್ರಿಮಿನಲ್ ಕೃತ್ಯಗಳಾಗಿವೆ. ಅವರು ಭಾರತೀಯ ಸೇನಾ ನೆಲೆಗಳ ಮೇಲೆ ಅನೇಕ ದಾಳಿಗಳನ್ನು ಪ್ರಯತ್ನಿಸಿದರು. ಅವರು ಭಾರತೀಯ ನಾಗರಿಕ ಪ್ರದೇಶಗಳ ಮೇಲೂ ದಾಳಿ ಮಾಡಿದರು. ಅವರ ಅಪರಾಧ ಪಟ್ಟಿ ತುಂಬಾ ದೊಡ್ಡದಾಗಿದೆ. ಭಾರತ ಇದೀಗ ಪ್ರತಿದಾಳಿ ಮಾಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.