IND vs ENG: ಇಂದು ಭಾರತ-ಇಂಗ್ಲೆಂಡ್ ಮೊದಲ ಟಿ20 ಕದನ; ಹವಾಮಾನ ವರದಿ ಹೇಗಿದೆ?
IND vs ENG: ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ 23 ಬಾರಿ ಟಿ20 ಮುಖಾಮುಖಿಯಾಗಿವೆ. ಈ ಪೈಕಿ ಭಾರತ 13(ತವರಿನಲ್ಲಿ 5), ಇಂಗ್ಲೆಂಡ್ 11 ಪಂದ್ಯಗಳನ್ನು ಜಯಿಸಿದೆ.
ಕೋಲ್ಕತಾ: ಭಾರತ ಮತ್ತು ಇಂಗ್ಲೆಂಡ್(IND vs ENG) ನಡುವಣ ಮೊದಲ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತಂಡಗಳ ಈ ಕಾದಾಟ ಇಂದು ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಇಂಗ್ಲೆಂಡ್ ಈಗಾಗಲೇ ಆಡುವ ಬಳಗವನ್ನು ಪ್ರಕಟಿಸಿದೆ. ಹೀಗಾಗಿ ಭಾರತದ ಆಡುವ ಬಳಗ ಹೇಗಿರಲಿದೆ ಎಂಬ ಕುತೂಹಲ ಸಹಜ. ಈ ಪಂದ್ಯದ ಇನ್ನೊಂದು ವಿಶೇಷತೆ ಎಂದರೆ, ಈ ಮೈದಾನದಲ್ಲಿ ಉಭಯ ತಂಡಗಳು 14 ವರ್ಷಗಳ ಬಳಿಕ ಟಿ20 ಆಡುತ್ತಿರುವುದು. ಕೊನೆಯ ಬಾರಿಗೆ ಇಲ್ಲಿ ಮುಖಾಮುಖಿಯಾದದ್ದು 2011ರಲ್ಲಿ. ಪಂದ್ಯದಲ್ಲಿ ಭಾರತ 6 ವಿಕೆಟ್ ಸೋಲು ಕಂಡಿತ್ತು.
ಮಳೆ ಭೀತಿ ಇಲ್ಲ
ಈ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ಆದರೆ, ಮಂಜಿನ ಕಾಟ ತಪ್ಪಿದ್ದಲ್ಲ. ಇಬ್ಬನಿ ಸಮಸ್ಯೆಯಿಂದ ಬೌಲರ್‌ಗಳು ಶಕ್ತಿ ಮೀರಿ ಪ್ರದರ್ಶನ ತೋರುವುದು ಅಗತ್ಯ.
ಪಿಚ್ ರಿಪೋರ್ಟ್
ಈಡನ್ ಗಾರ್ಡನ್ಸ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್. ಹೆಚ್ಚಾಗಿ ಇಲ್ಲಿ ಚೇಸಿಂಗ್ ನಡೆಸುವ ತಂಡಗಳೇ ಗೆದ್ದಿದೆ. ಇದಕ್ಕೆ ಕಾರಣ ಇಬ್ಬನಿ ಕಾಟ. ಹೀಗಾಗಿ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ದಕೊಳ್ಳುವ ಸಾಧ್ಯತೆ ಅಧಿಕ. ಈ ಮೈದಾನದಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಪಾಕಿಸ್ತಾನ ತಂಡದ ಹೆಸರಿನಲ್ಲಿದೆ. 2016ರ ಟಿ20 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಕ್ 5ಕ್ಕೆ 201 ರನ್ ಬಾರಿಸಿತ್ತು. ಭಾರತ ತಂಡದ ಗರಿಷ್ಠ ದಾಖಲೆ 5 ಕ್ಕೆ186 ರನ್.
ಬಲಾಬಲ
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ 23 ಬಾರಿ ಟಿ20 ಮುಖಾಮುಖಿಯಾಗಿವೆ. ಈ ಪೈಕಿ ಭಾರತ 13(ತವರಿನಲ್ಲಿ 5), ಇಂಗ್ಲೆಂಡ್ 11 ಪಂದ್ಯಗಳನ್ನು ಜಯಿಸಿದೆ. ಈಡನ್ ಗಾರ್ಡನ್ಸ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. 2011ರಲ್ಲಿ ನಡೆದಿದ್ದ ಪಂದ್ಯವನ್ನು ಇಂಗ್ಲೆಂಡ್ 6 ವಿಕೆಟ್ ಅಂತರದಿಂದ ಗೆದ್ದು ಬೀಗಿತ್ತು.
ಇದನ್ನೂ ಓದಿ IND vs ENG: ಟಿ20ಐ ವಿಶ್ವ ದಾಖಲೆಯ ಸನಿಹದಲ್ಲಿ ತಿಲಕ್ ವರ್ಮಾ!
ಭಾರತ ಸಂಭಾವ್ಯ ಆಡುವ ಬಳಗ
ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್,, ರವಿ ಬಿಷ್ಣೋಯ್, ವರುಣ್ ಚರ್ಕವರ್ತಿ, ಮೊಹಮ್ಮದ್ ಶಮಿ.
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವೀ.ಕಿ), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮಿ ಓವರ್ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.