ದುಬೈ: ಇಲ್ಲಿನ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ಆರಂಭಗೊಂಡ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಗಳು ಕೂಡ ತಮ್ಮ-ತಮ್ಮ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದಿವೆ. ಆ ಮೂಲಕ ಟೂರ್ನಿಯ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಮೂಲಕ ಇದೀಗ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯವನ್ನು ಗೆದ್ದು ಅಂತಿಮ ನಾಲ್ಕರ ಪಂದ್ಯಕ್ಕೆ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಎದುರು ನೋಡುತ್ತಿವೆ.
IND vs NZ: ಇಂದು ಭಾರತ ಗೆದ್ದರೆ ಅಥವಾ ಸೋತರೆ ಸೆಮಿ ಎದುರಾಳಿ ಯಾರು?
ಈ ಪಂದ್ಯಕ್ಕೆ ಭಾರತ ತಂಡದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ಟಾಸ್ ವೇಳೆ ತಿಳಿಸಿದ್ದಾರೆ. ಯುವ ವೇಗಿ ಹರ್ಷಿತ್ ರಾಣಾಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನಕ್ಕೆ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಪ್ಲೇಯಿಂಗ್ XIನಲ್ಲಿ ಅವಕಾಶ ನೀಡಲಾಗಿದೆ.
ಇನ್ನು ಎದುರಾಳಿ ನ್ಯೂಜಿಲೆಂಡ್ ತಂಡದ ಪ್ಲೇಯಿಂಗ್ XIನಲ್ಲಿಯೂ ಒಂದು ಬದಲಾವಣೆಯನ್ನು ತರಲಾಗಿದೆ. ಔಟ್ ಆಫ್ ಫಾರ್ಮ್ ಡ್ಯಾರಿಲ್ ಮಿಚೆಲ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ಡ್ಯಾರಿಲ್ ಮಿಚೆಲ್‌ಗೆ ಸ್ಥಾನವನ್ನು ಕಲ್ಪಿಸಲಾಗಿದೆ. ಉಭಯ ತಂಡಗಳು 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿಯೂ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ತಂಡ 70 ರನ್‌ಗಳಿಂದ ಗೆದ್ದು ಫೈನಲ್‌ಗೆ ಪ್ರವೇಶ ಮಾಡಿತ್ತು.
ಇತ್ತಂಡಗಳ ಪ್ಲೇಯಿಂಗ್ XI ವಿವರ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ : ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ರೌರ್ಕಿ
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
ನ್ಯೂಜಿಲೆಂಡ್: ವಿಲ್ ಯಂಗ್, ಡೆವೋನ್ ಕಾನ್ವೇ, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಟಾಮ್ ಲೇಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ರೌರ್ಕಿ, ಡ್ಯಾರಿಲ್ ಮಿಚೆಲ್, ನೇಥನ್ ಸ್ಮಿತ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ