#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Kris Gopalakrishnan: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 17 ಜನರ ವಿರುದ್ಧ SC/ST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

ಇನ್ಫೋಸಿಸ್‌ ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಮೇಲೆ SC/ST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

Kris Gopalakrishnan

Profile Vishakha Bhat Jan 28, 2025 8:04 AM

ಬೆಂಗಳೂರು: ಇನ್ಫೋಸಿಸ್‌ (Infosys) ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌ ( Kris Gopalakrishnan) ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಮತ್ತು ಕ್ರಿಸ್ ಗೋಪಾಲಕೃಷ್ಣನ್ ಟ್ರಸ್ಟಿಗಳ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ನಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ. ದೂರುದಾರ ದುರ್ಗಪ್ಪ ಎಂಬುವವರಾಗಿದ್ದು ಅವರು ಬುಡಕಟ್ಟು ಬೋವಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಐಐಎಸ್ಸಿಯ ಸೆಂಟರ್ ಫಾರ್ ಸಸ್ಟೈನಬಲ್ ಟೆಕ್ನಾಲಜಿಯಲ್ಲಿ ಅಧ್ಯಾಪಕರಾಗಿದ್ದ ದುರ್ಗಪ್ಪ, 2014 ರಲ್ಲಿ ಹನಿ ಟ್ರ್ಯಾಪ್ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಮತ್ತು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ದೂರಿನಲಲ್ಲಿ ಉಲ್ಲೇಖಿಸಿದ್ದಾರೆ. ದುರ್ಗಪ್ಪ ಅವರು ಜಾತಿ ನಿಂದನೆ ಮತ್ತು ಬೆದರಿಕೆಗಳಿಗೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಈ ಸುದ್ದಿಯನ್ನೂ ಓದಿ : Dharmasthala Cow Slaughter: ಧರ್ಮಸ್ಥಳದ ನದಿಗೆ ಗೋ ಮಾಂಸ ತ್ಯಾಜ್ಯ ಎಸೆದ ಪ್ರಕರಣ-ಇಬ್ಬರು ಅರೆಸ್ಟ್‌

ಪ್ರಕರಣದಲ್ಲಿ ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂದ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಬಲರಾಮ್ ಪಿ, ಹೇಮಲತಾ ಮ್ಹಿಷಿ, ಚಟ್ಟೋಪಾದ್ಯಾಯ ಕೆ, ಪ್ರದೀಪ್ ಡಿ ಸಾವ್ಕರ್ ಮತ್ತು ಮನೋಹರನ್ ಮೇಲೆಯೂ ದೂರು ದಾಖಲಾಗಿದೆ. ಈ ಬಗ್ಗೆ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಯಾರು ಈ ಕ್ರಿಸ್ ಗೋಪಾಲಕೃಷ್ಣನ್ ?

ಗೋಪಾಲಕೃಷ್ಣನ್ ಅವರು ಇನ್ಫೋಸಿಸ್‌ನ ಸಹ-ಸಂಸ್ಥಾಪಕರಲ್ಲಿ ಒಬ್ಬರು ಮತ್ತು 2007 ರಿಂದ 2011 ರವರೆಗೆ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು 2011 ರಿಂದ 2014 ರವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2011 ರ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಗೋಪಾಲಕೃಷ್ಣನ್ ಅವರು ಓಕಿನಾವಾ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದಾರೆ ಮತ್ತು ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.