IPL 2025: ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ಕಳೆದುಕೊಂಡ ಬೆನ್ನಲ್ಲೆ ಕೆಎಲ್ ರಾಹುಲ್‌ಗೆ ಮತ್ತೊಂದು ಹಿನ್ನಡೆ!
KL Rahul To Lose Opening Spot: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ಕಳೆದುಕೊಂಡ ಬೆನ್ನಲ್ಲೆ ಕನ್ನಡಿಗ ಕೆಎಲ್ ರಾಹುಲ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುವುದಿಲ್ಲ. ಇದರ ಬದಲಿಗೆ ಅವರಿಗೆ ಮತ್ತೊಂದು ಹೊಸ ಬ್ಯಾಟಿಂಗ್ ಕ್ರಮಾಂಕ ನೀಡಲಾಗುವುದು ಎಂದು ವರದಿಯಾಗಿದೆ.

ಕೆಎಲ್ ರಾಹುಲ್

ನವದೆಹಲಿ: ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡದ ನಾಯಕತ್ವವನ್ನು ತಿರಸ್ಕರಿಸಿದ್ದ ಕನ್ನಡಿಗ ಕೆಎಲ್ ರಾಹುಲ್‌ಗೆ (KL Rahul) ಇದೀಗ ಮತ್ತೊಂದು ಹಿನ್ನಡೆಯಾಗಿದೆ. ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ತಮ್ಮ ವೃತ್ತಿ ಜೀವನದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಆಡಿದ್ದ ಕೆಎಲ್ ರಾಹುಲ್, ಇದೀಗ ಮುಂಬರುವ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಓಪನರ್ ಆಗಿ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ವಿಕೆಟ್ ಕೀಪರ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ನೂತನ ಬ್ಯಾಟಿಂಗ್ ಕ್ರಮಾಂಕ ನೀಡಲಾಗುತ್ತದೆ ಎಂದು ವರದಿಯಾಗಿದೆ.
ಲಖನೌ ಸೂಪರ್ ಜಯಂಟ್ಸ್ ತಂಡವನ್ನು ಮೂರು ವರ್ಷಗಳ ಕಾಲ ಮುನ್ನಡೆಸಿದ್ದ ಕೆಎಲ್ ರಾಹುಲ್ ಕಳೆದ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದರು. ಅವರನ್ನು ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 14 ಕೋಟಿ ರೂ. ಗಳಿಗೆ ಖರೀದಿಸಿತ್ತು. ಆ ಮೂಲಕ ಡೆಲ್ಲಿ ತಂಡಕ್ಕೆ ನಾಯಕತ್ವ ನೀಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಅಂತಿಮವಾಗಿ ಅವರು ನಾಯಕತ್ವವನ್ನು ತೊರೆದ ಕಾರಣ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ನಾಯಕತ್ವವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಹಿರಿಯ ಬ್ಯಾಟ್ಸ್‌ಮನ್ ಆಗಿ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನಾದ ಅಕ್ಷರ್ ಪಟೇಲ್‌ಗೆ ಕೆಎಲ್ ರಾಹುಲ್ ವಿಶೇಷ ಸಂದೇಶ!
ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಬಹುದೆಂದು ಹೇಳಲಾಗಿತ್ತು. ಆದರೆ, ಟೈಮ್ಸ್ ಇಂಡಿಯಾ ವರದಿಯ ಪ್ರಕಾರ 32ರ ವಯಸ್ಸಿನ ಕೆಎಲ್ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಜೇಕ್ ಮೆಗರ್ಕ್ ಹಾಗೂ ಫಾಫ್ ಡು ಪ್ಲೆಸಿಸ್ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್‌ನ ಆರಂಭಿಕ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅಭಿಷೇಕ್ ಪೊರೆಲ್ ಆಡಲಿದ್ದಾರೆ. ನಂತರದ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಏಕೆಂದರೆ ಹ್ಯಾರಿ ಬ್ರೂಕ್ 2025ರ ಐಪಿಎಲ್ ಟೂರ್ನಿಯನ್ನು ಅಂತಿಮ ಹಂತದಲ್ಲಿ ವಿಥ್‌ಡ್ರಾ ಮಾಡಿಕೊಂಡಿದ್ದಾರೆ.
IPL 2025: ಪಂಜಾಬ್ ಕಿಂಗ್ಸ್‌ಗೆ ಕಪ್ ಗೆದ್ದುಕೊಡುವುದು ನನ್ನ ಗುರಿ ಎಂದ ಶ್ರೇಯಸ್ ಅಯ್ಯರ್!
2019ರ ಬಳಿಕ ಇದೇ ಮೊದಲ ಬಾರಿ ಹಿರಿಯ ಆಟಗಾರನಾಗಿ ಆಡಲಿರುವ ರಾಹುಲ್
2019ರ ಬಳಿಕ ಇದೇ ಮೊದಲ ಬಾರಿ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯುರ್ ಲೀಗ್ ಟೂರ್ನಿಯಲ್ಲಿ ನಾಯಕನಾಗಿ ಅಲ್ಲದೆ ಒಬ್ಬ ಹಿರಿಯ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರು 2020 ಹಾಗೂ 2021ರ ಐಪಿಎಲ್ ಟೂರ್ನಿಗಳಲ್ಲಿ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ನಂತರ 2022 ರಿಂದ 2024ರವರೆಗೆ ಲಖನೌ ಸೂಪರ್ ಜಯಂಟ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಡಲಿದ್ದಾರೆ.
2016ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದರು. ಆದರೆ, 2018ರಲ್ಲಿ ಪಂಜಾಬ್ ಕಿಂಗ್ಸ್ ಪರ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕೆಎಲ್ ರಾಹುಲ್ ಆಡಿದ್ದರು. ಅಂದಿನಿಂದ ಇಲ್ಲಿಯವರೆಗೂ ಅವರು ಓಪನರ್ ಆಗಿ ಕಾಣಿಸಿಕೊಂಡಿದ್ದರು. ಒಟ್ಟಾರೆಯಾಗಿ ಕೆಎಲ್ ರಾಹುಲ್ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅಲ್ಲದ 33 ಪಂದ್ಯಗಳನ್ನು ಆಡಿದ್ದಾರೆ ಹಾಗೂ 500 ರನ್‌ಗಳನ್ನು ಗಳಿಸಿದ್ದಾರೆ.
IPL 2025: ʻಸ್ಟ್ರೈಕ್ ರೇಟ್ ಕಡೆಗೆ ಗಮನ ಕೊಡಬೇಡಿʼ-ಕುಚುಕು ಗೆಳೆಯ ವಿರಾಟ್ ಕೊಹ್ಲಿಗೆ ಎಬಿಡಿ ಮಹತ್ವದ ಸಲಹೆ!
ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ರಾಹುಲ್ ಕಣ್ಣು
2026ರಲ್ಲಿ ಭಾರತದ ಆತಿಥ್ಯದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯ ಸಲುವಾಗಿ ಕೆಎಲ್ ರಾಹುಲ್ ಭಾರತ ಟಿ20 ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಎದುರು ನೋಡುತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು 2025ರ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಬೇಕಾಗಿದೆ. 2022ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದ ಬಳಿಕ ಕೆಎಲ್ ರಾಹುಲ್ ಭಾರತ ಟಿ20 ತಂಡದ ಪರ ಆಡಿಯೇ ಇಲ್ಲ.