Jasprit Bumrah: ಮುಂಬೈ ತಂಡ ಸೇರಿದ ಬುಮ್ರಾ; ಆರ್‌ಸಿಬಿ ವಿರುದ್ಧ ಕಣಕ್ಕೆ
IPL 2025: ಜಸ್‌ಪ್ರೀತ್ ಬುಮ್ರಾ ಗಾಯದಿಂದ ಸಂಪೂರ್ಣ ಗುಣಮುಖರಾಗಿದ್ದರೂ ಬಿಸಿಸಿಐ ವೈದ್ಯಕೀಯ ತಂಡದಿಂದ ಆಡಲು ಅನುಮತಿಗಾಗಿ ಕಾಯುತ್ತಿದ್ದರು. ಇದೀಗ ಬಿಸಿಸಿಐ ಅವರಿಗೆ ಆಡುವ ಅವಕಾಶ ನೀಡಿದ್ದು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಎ.7ರಂದು ನಡೆಯುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.


ಮುಂಬಯಿ: ಸತತ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್(mumbai Indians ) ತಂಡಕ್ಕೆ ಆರ್‌ಸಿಬಿ(RCB vs MI) ವಿರುದ್ಧದ ಪಂದ್ಯಕ್ಕೂ ಮುನ್ನ ಆನೆ ಬಲ ಬಂದಂತಾಗಿದೆ. ತಂಡದ ಪ್ರಧಾನ ವೇಗಿ ಜಸ್‌ಪ್ರೀತ್ ಬುಮ್ರಾ(Jasprit Bumrah) ಅವರು ತಂಡಕ್ಕೆ ಮರಳಿದ್ದಾರೆ. ಈ ಸಂತಸದ ವಿಚಾರವನ್ನು ಭಾನುವಾರ ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. 'ಕಾಡಿನ ರಾಜ ತನ್ನ ರಾಜ್ಯಕ್ಕೆ ಮರಳಿದ್ದಾನೆ' ಎಂದು ಬರೆದುಕೊಂಡಿದೆ. ಎ.7ರಂದು ಆರ್‌ಸಿಬಿ ಮತ್ತು ಮುಂಬೈ ಪಂದ್ಯ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಕಳೆದ ಮೂರು ತಿಂಗಳಿನಿಂದ ಬಿಸಿಸಿಐ ಪುನಶ್ಚೇತನ ಶಿಬಿರದಲ್ಲಿದ್ದರು. ಗಾಯದಿಂದ ಸಂಪೂರ್ಣ ಗುಣಮುಖರಾಗಿದ್ದರೂ ಬಿಸಿಸಿಐ ವೈದ್ಯಕೀಯ ತಂಡದಿಂದ ಆಡಲು ಅನುಮತಿಗಾಗಿ ಕಾಯುತ್ತಿದ್ದರು. ಇದೀಗ ಬಿಸಿಸಿಐ ಅವರಿಗೆ ಆಡುವ ಅವಕಾಶ ನೀಡಿದ್ದು ಮುಂಬೈ ತಂಡವನ್ನು ಕೂಡಿಕೊಂಡಿದ್ದಾರೆ.
The King of the jungle is back in his kingdom 🦁🔥#MumbaiIndians #PlayLikeMumbai pic.twitter.com/oZMIiSiEm5
— Mumbai Indians (@mipaltan) April 6, 2025
ಹಾಲಿ ಆವೃತ್ತಿಯಲ್ಲಿ ಮುಂಬೈ ಆಡಿದ 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಸೋಲಿನ ಹತಾಶೆಯಲ್ಲಿದ್ದ ಪಾಂಡ್ಯ ಪಡೆಗೆ ಬುಮ್ರಾ ತಂಡ ಸೇರಿಕೊಂಡಿರುವುದು ಆನೆ ಬಲ ಬಂದಂತಾಗಿದೆ.
ಇದನ್ನೂ ಓದಿ IPL 2025 Points Table: ಡೆಲ್ಲಿಗೆ ಅಗ್ರಸ್ಥಾನ, ಏಳಕ್ಕೇರಿದ ರಾಜಸ್ಥಾನ್
ಮುಂಬೈ ತಂಡ
ವಿಲ್ ಜಾಕ್ಸ್, ರಿಯಾನ್ ರಿಕಲ್ಟನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ನಮನ್ ಧೀರ್, ರಾಜ್ ಬಾವಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಅಶ್ವನಿ ಕುಮಾರ್, ವಿಘ್ನೇಶ್ ಪುತ್ತೂರು, ಟ್ರೆಂಟ್ ಬೌಲ್ಟ್, ತಿಲಕ್ ವರ್ಮಾ, ಕಾರ್ಬಿನ್ ಬಾಷ್, ರಾಬಿನ್ ಮಿಂಜ್, ಸತ್ಯನಾರಾಯಣ ರಾಜು, ಕರ್ಣ್ ಶರ್ಮಾ, ರೋಹಿತ್ ಶರ್ಮಾ, ಮುಜೀಬ್ ಉರ್ ರೆಹಮಾನ್, ರೀಸ್ ಟೋಪ್ಲಿ, ಬೆವನ್ ಜೇಕಬ್ಸ್, ಕೃಷ್ಣನ್ ಶ್ರೀಜಿತ್, ಅರ್ಜುನ್ ತೆಂಡೂಲ್ಕರ್.