IPL 2025 Points Table: ಗುಜರಾತ್ ಗೆಲುವಿನಿಂದ ಅಂಕಪಟ್ಟಿಯಲ್ಲಿ ಕುಸಿತ ತಂಡ ಆರ್‌ಸಿಬಿ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹ್ಯಾಜಲ್‌ವುಡ್ 2 ವಿಕೆಟ್ ಕಿತ್ತರೆ ಮತ್ತೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಳ್ಳಬಹುದು. 443 ರನ್ ಗಳಿಸಿರುವ ಆರ್‌ಸಿಬಿಯ ವಿರಾಟ್ ಕೊಹ್ಲಿ 62 ರನ್ ಬಾರಿಸಿದರೆ ಅಗ್ರಸ್ಥಾನಕ್ಕೇರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಳ್ಳುವ ಅವಕಾಶವಿದೆ.
-
Abhilash BC
May 3, 2025 6:49 AM
ಅಹಮದಾಬಾದ್: ಶುಕ್ರವಾರ ರಾತ್ರಿ ನಡೆದಿದ್ದ ಐಪಿಎಲ್(IPL 2025) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 38 ರನ್ ಅಂತರದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ(IPL 2025 Points Table) ದ್ವಿತೀಯ ಸ್ಥಾನಕ್ಕೆ ಜಿಗಿದಿದೆ. ಗುಜರಾತ್(GT vs SRH) ಗೆಲುವಿನಿಂದ ಈ ಹಿಂದೆ ದ್ವಿತೀಯ ಸ್ಥಾನಿಯಾಗಿದ್ದ ಆರ್‌ಸಿಬಿ ಮೂರನೇ ಸ್ಥಾನಕ್ಕೆ ಜಾರಿದೆ. ಉಳಿದಂತೆ ಪಂಜಾಬ್ ಕಿಂಗ್ಸ್ ನಾಲ್ಕನೇ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 5ನೇ ಸ್ಥಾನಿಯಾಗಿದೆ. ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿಯೇ ಮುಂದುವರಿದಿದೆ. ಇಂದು(ಶನಿವಾರ) ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಆರ್‌ಸಿಬಿ ಗೆದ್ದರೆ ಪ್ಲೇ-ಆಫ್ ಸ್ಥಾನವನ್ನು ಅಧಿಕೃತಗೊಳಿಸುವ ಮೂಲಕ ಅಗ್ರಸ್ಥಾನಕ್ಕೇರಲಿದೆ.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್‌ನಲ್ಲಿಯೂ ಬದಲಾವಣೆ ಸಂಭವಿಸಿದೆ. ಸೂರ್ಯಕುಮಾರ್ ಯಾದವ್(475 ರನ್) ಹಿಂದಿಕ್ಕಿ ಸಾಯಿ ಸುದರ್ಶನ್(504) ಆರೆಂಜ್ ಪಡೆದರೆ, ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ 19 ವಿಕೆಟ್ ಕಲೆಹಾಕಿ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಆರ್‌ಸಿಬಿಯ ಜೋಸ್ ಹ್ಯಾಜಲ್‌ವುಡ್(18) ದ್ವಿತೀಯ ಸ್ಥಾನಕ್ಕೆ ಜಾರಿದ್ದಾರೆ.
ಚೆನ್ನೈ ವಿರುದ್ಧ ಹ್ಯಾಜಲ್‌ವುಡ್ 2 ವಿಕೆಟ್ ಕಿತ್ತರೆ ಮತ್ತೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಳ್ಳಬಹುದು. 443 ರನ್ ಗಳಿಸಿರುವ ಆರ್‌ಸಿಬಿಯ ವಿರಾಟ್ ಕೊಹ್ಲಿ 62 ರನ್ ಬಾರಿಸಿದರೆ ಅಗ್ರಸ್ಥಾನಕ್ಕೇರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಳ್ಳುವ ಅವಕಾಶವಿದೆ.
ಹೈದರಾಬಾದ್ ಬಹುತೇಕ ಔಟ್
ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಗುಜರಾತ್ ತಂಡ ನಾಯಕ ಶುಭಮನ್ ಗಿಲ್ ಮತ್ತು ಜಾಸ್ ಬಟ್ಲರ್ ಅವರ ಅರ್ಧಶತಕದ ನೆರವಿನಿಂದ 6 ವಿಕೆಟ್‌ಗೆ 224 ರನ್ ಪೇರಿಸಿತು. ಜವಾಬಿತ್ತ ಹೈದರಾಬಾದ್ 6 ವಿಕೆಟ್‌ಗೆ 186 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನಿಂದ ಹೈದರಾಬಾದ್ ಬಹುತೇಕ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿದೆ. ಇನ್ನುಳಿದ 4 ಪಂದ್ಯ ಗೆದ್ದು, ಪವಾಡವೊಂದು ಸಂಭವಿಸಿದರೆ ಮಾತ್ರ ಕಮಿನ್ಸ್ ಪಡೆಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇರಲಿದೆ.