ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025 Points Table: 6ನೇ ಸ್ಥಾನಕ್ಕೆ ಜಿಗಿದ ಲಕ್ನೋ ಸೂಪರ್‌ ಜೈಂಟ್ಸ್‌

ಅಗ್ರ ನಾಲ್ಕು ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಪಂಜಾಬ್‌ ಕಿಂಗ್ಸ್‌ ಮೊದಲ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ ಮತ್ತು ಗುಜರಾತ್‌ ಕ್ರಮವಾಗಿ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿದೆ. ಇಂದು(ಶನಿವಾರ) ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ಸೆಣಸಾಟ ನಡೆಸಲಿವೆ.

6ನೇ ಸ್ಥಾನಕ್ಕೆ ಜಿಗಿದ ಲಕ್ನೋ ಸೂಪರ್‌ ಜೈಂಟ್ಸ್‌

Profile Abhilash BC Apr 5, 2025 6:33 AM

ಮುಂಬಯಿ: ಶುಕ್ರವಾರ ನಡೆದ ಐಪಿಎಲ್‌(IPL 2025)ನ 16ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಮುಂಬೈ ಇಂಡಿಯನ್ಸ್‌(MI vs LSG) ತಂಡವನ್ನು 12 ರನ್‌ ಅಂತರದಿಂದ ಮಣಿಸುವ ಮೂಲಕ ಅಂಕಪಟ್ಟಿಯಲ್ಲಿಯೂ ಪ್ರಗತಿ ಸಾಧಿಸಿದೆ. 7ನೇ ಸ್ಥಾನದಲ್ಲಿದ್ದ ಲಕ್ನೋ ಒಂದು ಸ್ಥಾನದ ಜಿಗಿತ ಕಂಡು 6ನೇ ಸ್ಥಾನಕ್ಕೆ ಬಂದು ನಿಂತಿದೆ. ಸೋಲು ಕಂಡ ಮುಂಬೈ ಇಂಡಿಯನ್ಸ್‌ 6ರಿಂದ 7ಕ್ಕೆ ಕುಸಿತ ಕಂಡಿದೆ.

ಅಗ್ರ ನಾಲ್ಕು ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಪಂಜಾಬ್‌ ಕಿಂಗ್ಸ್‌ ಮೊದಲ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ ಮತ್ತು ಗುಜರಾತ್‌ ಕ್ರಮವಾಗಿ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿದೆ.

ಇದನ್ನೂ ಓದಿ IPL 2025: 5 ವಿಕೆಟ್‌ ಕಿತ್ತು ಅನಿಲ್‌ ಕುಂಬ್ಳೆಯ 16 ವರ್ಷಗಳ ಹಳೆಯ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ!

ಆರೆಂಜ್‌ ಕ್ಯಾಪ್‌ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. 201 ರನ್‌ ಗಳಿಸಿರುವ ನಿಕೋಲಸ್‌ ಪೂರನ್‌ ಅವರ ಬಳಿಯೇ ಈ ಕ್ಯಾಪ್‌ ಉಳಿದಿದೆ. ಹಾಗೆಯೇ ಪರ್ಪಲ್‌ ಕ್ಯಾಪ್‌ ಕೂಡ ನೂರ್‌ ಅಹ್ಮದ್‌ ಬಳಿಯೇ ಉಳಿದಿದೆ. ಇಂದು(ಶನಿವಾರ) ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ಸೆಣಸಾಟ ನಡೆಸಲಿವೆ.

ನೂತನ ಅಂಕಪಟ್ಟಿ ಹೀಗಿದೆ



ಶುಕ್ರವಾರ ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಲಕ್ನೋ ಸೂಪರ್‌ ಜಯಂಟ್ಸ್‌ ತಂಡ, ತನ್ನ ಪಾಲಿನ 20 ಓವರ್‌ಗಳಲ್ಲಿ 203 ರನ್‌ಗಳನ್ನು ಕಲೆ ಹಾಕಿತು. ಬೃಹತ್‌ ಮೊತ್ತದ ಗುರಿ ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಿಗೆ 191 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ ಎರಡು ಓವರ್‌ಗಳಲ್ಲಿ ಮುಂಬೈ ಗೆಲುವಿಗೆ 29 ರನ್‌ಗಳ ಅಗತ್ಯವಿತ್ತು. ಆದರೆ, ಶಾರ್ದುಲ್‌ ಠಾಕೂರ್‌ ಬುದ್ದಿವಂತಿಕೆಯಿಂದ ಬೌಲ್‌ ಮಾಡಿ ಕೇವಲ 7 ರನ್‌ ನೀಡಿದರು. ನಂತರ 20ನೇ ಓವರ್‌ನಲ್ಲಿ ಆವೇಶ್‌ ಖಾನ್‌, 9 ರನ್‌ ನೀಡಿ ಹಾರ್ದಿಕ್‌ ಪಾಂಡ್ಯ ಅವರನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.