ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜಸ್ಥಾನ್‌ ರಾಯಲ್ಸ್‌ ವಿರುದ್ದ ಕಣಕ್ಕೆ ಇಳಿದು ನೂತನ ಮೈಲುಗಲ್ಲು ಸ್ಥಾಪಿಸಿದ ಭುವನೇಶ್ವರ್‌ ಕುಮಾರ್‌!

Bhuvneshwar Kumar Creates History: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಿದ್ದಂತೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವೇಗಿ ಭುವನೇಶ್ವರ್‌ ಕುಮಾರ್‌ ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. 300 ಟಿ20 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ವೇಗಿ ಎಂಬ ದಾಖಲೆಯನ್ನು ಭುವನೇಶ್ವರ್‌ ಕುಮಾರ್‌ ಬರೆದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ನೂತನ ದಾಖಲೆ ಬರೆದ ಭುವನೇಶ್ವರ್‌ ಕುಮಾರ್‌!

ಭುವನೇಶ್ವರ್‌ ಕುಮಾರ್‌ 300 ಟಿ20 ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

Profile Ramesh Kote Apr 13, 2025 6:39 PM

ಜೈಪುರ: ಇಲ್ಲಿನ ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹಿರಿಯ ವೇಗಿ ಭುವನೇಶ್ವರ್‌ ಕುಮಾರ್‌ (Bhuvneshwar Kumar) ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಸನ್‌ರೈಸರ್ಸ್‌ ಹೈದರಾಬಾದ್‌ ಪರ ತಮ್ಮ ಐಪಿಎಲ್‌ ವೃತ್ತಿ ಜೀವನದ ಬಹುತೇಕ ಸಮಯವನ್ನು ಕಳೆದಿದ್ದ ಭುವನೇಶ್ವರ್‌ ಕುಮಾರ್‌, ಕಳೆದ ವರ್ಷ ಮೆಗಾ ಹರಾಜಿನಲ್ಲಿ ಆರ್‌ಸಿಬಿಗೆ ಸೇರ್ಪಡೆಯಾಗಿದ್ದರು. ಹರಾಜಿನಲ್ಲಿ ಬೆಂಗಳೂರು ಫ್ರಾಂಚೈಸಿ 10.75 ಕೋಟಿ ರೂ. ಗಳನ್ನು ನೀಡುವ ಮೂಲಕ ಸ್ವಿಂಗ್‌ ಮಾಸ್ಟರ್‌ ಬಲಗೈ ವೇಗಿಯನ್ನು ಖರೀದಿಸಿತ್ತು.

ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್‌ ಟೂರ್ನಿಯಲ್ಲಿ ಉತ್ತಮ ಬೌಲಿಂಗ್‌ ಪ್ರದರ್ಶನ ತೋರುತ್ತಿರುವ ಭುವನೇಶ್ವರ್‌ ಕುಮಾರ್‌ 6 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭಾನುವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಭುವನೇಶ್ವರ್‌ ಕುಮಾರ್‌ 300 ಟಿ20 ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಚುಟುಕು ಕ್ರಿಕೆಟ್‌ನಲ್ಲಿ 300 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಭಾರತೀಯ ವೇಗಿ (ವೇಗದ ಬೌಲಿಂಗ್‌ ಆಲ್‌ರೌಂಡರ್‌ ಕೂಡ) ಎಂಬ ನೂತನ ದಾಖಲೆಯನ್ನು ಬರೆದಿದ್ದಾರೆ. ಇವರು ತಮ್ಮ 300 ಟಿ20 ಪಂದ್ಯಗಳಿಂದ 316 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

IPL 2025: 40 ಎಸೆತಗಳಲ್ಲಿ ಸ್ಪೋಟಕ ಶತಕ ವಿಶೇಷ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

ಭುವನೇಶ್ವರ್‌ ಕುಮಾರ್‌ ಅವರು 2022ರಲ್ಲಿ ಕೊನೆಯ ಬಾರಿ ಭಾರತದ ಪರ ಕೊನೆಯ ಟಿ20ಐ ಪಂದ್ಯವನ್ನು ಆಡಿದ್ದರು. ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 87 ಪಂದ್ಯಗಳನ್ನು ಆಡಿದ್ದಾರೆ ಹಾಗೂ 90 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ದ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದ ಭುವನೇಶ್ವರ್‌, ನಾಲ್ಕು ಓವರ್‌ಗಳಲ್ಲಿ ಕೇವಲ 9 ರನ್‌ ನೀಡಿ 3 ವಿಕೆಟ್‌ಗಳನ್ನು ಕಿತ್ತಿದ್ದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಅನ್ನು ಅದ್ದೂರಿಯಾಗಿ ಆರಂಭಿಸಿದ್ದರು.

2009ರಲ್ಲಿ ಚಾಂಪಿಯನ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಭುವನೇಶ್ವರ್‌ ಕುಮಾರ್‌ ಚುಟುಕು ಕ್ರಿಕೆಟ್‌ ವೃತ್ತಿ ಜೀವನವನ್ನು ಆರಂಭಿಸಿದ್ದರು. 2011ರಲ್ಲಿ ಪುಣೆ ವಾರಿಯರ್ಸ್‌ ಅವರ ಪರ ತಮ್ಮ ಐಪಿಎಲ್‌ ವೃತ್ತಿ ಜೀವನವನ್ನು ಶುರು ಮಾಡಿದ್ದರು. 2013ರವರೆಗೂ ಈ ತಂಡದ ಪರ ಭುವಿ ಆಡಿದ್ದರು. 2014ರಲ್ಲಿ ಸನ್‌ಸೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಸೇರ್ಪಡೆಯಾಗಿದ್ದ ಭುವನೇಶ್ವರ್‌ ಕುಮಾರ್‌, ಸತತವಾಗಿ 10 ವರ್ಷಗಳ ಕಾಲ ಇದೇ ಫ್ರಾಂಚೈಸಿ ಪರ ಆಡಿದ್ದರು. ಆದರೆ, 2025ರ ಐಪಿಎಲ್‌ ಮೆಗಾ ಹರಾಜಿನಲ್ಲಿ ಆರ್‌ಸಿಬಿ ಅವರನ್ನು ಖರೀದಿಸಿತ್ತು.

RCB vs RR: ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

ಅತಿ ಹೆಚ್ಚು ಟಿ20 ಪಂದ್ಯಗಳನ್ನುಆಡಿದ ಭಾರತೀಯ ವೇಗಿಗಳು

ಭುವನೇಶ್ವರ್‌ ಕುಮಾರ್‌ ಬಳಿಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಹಾರ್ದಿಕ್‌ ಪಾಂಡ್ಯ ಇದ್ದಾರೆ. ಮುಂಬೈ ಇಂಡಿಯನ್ಸ್‌ ನಾಯಕ 291 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ದಿನದಿಂದ ಇಲ್ಲಿಯವರೆಗೂ ಅವರು ಭಾರತ ಟಿ20ಐ ತಂಡದ ಪರ ನಿಯಮಿತವಾಗಿ ಆಡುತ್ತಿದ್ದಾರೆ. ಭಾರತ ವೈಟ್‌ಬಾಲ್‌ ತಂಡವನ್ನು ಕೂಡ ಹಾರ್ದಿಕ್‌ ಮುನ್ನಡೆಸಿದ್ದಾರೆ.



ಭುವನೇಶ್ವರ್‌ ಕುಮಾರ್‌-300

ಹಾರ್ದಿಕ್‌ ಪಾಂಡ್ಯ-291

ಜಸ್‌ಪ್ರೀತ್‌ ಬುಮ್ರಾ-234

ಹರ್ಷಲ್‌ ಪಟೇಲ್‌-204

ಸಂದೀಪ್‌ ಶರ್ಮಾ-201

ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 234 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಸ್‌ಪ್ರೀತ್‌ ಬುಮ್ರಾ ಮುಂಬೈ ಇಂಡಿಯನ್ಸ್‌ ಪರ ಆಡುತ್ತಿದ್ದಾರೆ. 2016ರಲ್ಲಿಯೇ ಇವರು ಭಾರತದ ಪರ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ ಅವರು ಭಾರತದ ಪರ ಪ್ರಮುಖ ಟಿ20ಐ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಭಾರತ ಟಿ20 ಹಾಗೂ ಟೆಸ್ಟ್‌ ತಂಡಗಳನ್ನು ಮುನ್ನಡೆಸಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಹರ್ಷಲ್‌ ಪಟೇಲ್‌ ಇದ್ದಾರೆ. ಇವರು ಭಾರತದ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೂ ಪದಾರ್ಪಣೆ ಮಾಡಿದ್ದಾರೆ. 2025ರ ಐಪಿಎಲ್‌ ಟೂರ್ನಿಯಲ್ಲಿ ಅವರು ಸನ್‌ರೈಸರ್ಸ್‌ ಹೈದರಾಬಾದ್‌ ಪರ ಆಡುತ್ತಿದ್ದಾರೆ.