ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3500 ರನ್‌ʼ-ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

ರಾಜಸ್ಥಾನ್‌ ರಾಯಲ್ಸ್‌ ವಿರುದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹಿರಿಯ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಸತತ ಐದನೇ ಅರ್ಧಶತಕ ಸಿಡಿಸಿದ್ದಾರೆ. ಆ ಮೂಲಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3500 ಟಿ20 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಏಕೈಕ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ಟಿ20 ರನ್‌ ಗಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ.

1/6

ಬೆಂಗಳೂರು vs ರಾಜಸ್ಥಾನ್‌

ಏಪ್ರಿಲ್‌ 24 ರಂದು ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 42ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್‌ ಸೋತಿದ್ದ ಆರ್‌ಸಿಬಿ ಮೊದಲು ಬ್ಯಾಟ್‌ ಮಾಡುವಂತಾಗಿತ್ತು.

2/6

42 ಎಸೆತಗಳಲ್ಲಿ 70 ರನ್‌ ಗಳಿಸಿದ ಕೊಹ್ಲಿ

ಅತ್ಯುತ್ತಮ ಬ್ಯಾಟ್‌ ಮಾಡಿದ ವಿರಾಟ್‌ ಕೊಹ್ಲಿ, ರಾಜಸ್ಥಾನ್‌ ರಾಯಲ್ಸ್‌ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಆರಂಭಿಕ ಜೊತೆಗಾರ ಫಿಲ್‌ ಸಾಲ್ಟ್‌ ಬೇಗ ವಿಕೆಟ್‌ ಒಪ್ಪಿಸಿದರೂ ಕೊಹ್ಲಿ ಜವಾಬ್ದಾರಿಯುತ ಬ್ಯಾಟ್‌ ಮಾಡಿ 42 ಎಸೆತಗಳಲ್ಲಿ ಎರಡು ಸಿಕ್ಸರ್‌ ಹಾಗೂ 8 ಬೌಂಡರಿಗಳ ಮೂಲಕ 70 ರನ್‌ಗಳನ್ನು ಸಿಡಿಸಿದರು.

3/6

5ನೇ ಅರ್ಧಶತಕ ಸಿಡಿಸಿದ ವಿರಾಟ್‌

ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 70 ರನ್‌ ಗಳಿಸುವ ಮೂಲಕ ವಿರಾಟ್‌ ಕೊಹ್ಲಿ ಪ್ರಸಕ್ತ ಆವೃತ್ತಿಯಲ್ಲಿ ಐದನೇ ಅರ್ಧಶತಕವನ್ನು ವಿರಾಟ್‌ ಕೊಹ್ಲಿ ಪೂರೈಸಿದ್ದಾರೆ. ಆ ಮೂಲಕ ಈ ಸೀಸನ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಸಾಯಿ ಸುದರ್ಶನ್‌ ಜೊತೆ ಅಗ್ರ ಸ್ಥಾನವನ್ನು ಹಂಚಿಕೊಂಡಿದ್ದಾರೆ.

4/6

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ದಾಖಲೆ

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್‌ ಕೊಹ್ಲಿ 3500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ಏಕೈಕ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ಟಿ20 ರನ್‌ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ. ಬೆಂಗಳೂರಿನಲ್ಲಿ 105 ಇನಿಂಗ್ಸ್‌ಗಳಿಂದ ಕೊಹ್ಲಿ ಈ ದಾಖಲೆ ಬರೆದಿದ್ದಾರೆ.

5/6

ಏಕೈಕ ಅಂಗಣದಲ್ಲಿ ಅತಿ ಹೆಚ್ಚು ಟಿ20 ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ವಿವರ

3500: ವಿರಾಟ್‌ ಕೊಹ್ಲಿ-ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು (105)

3373: ಮುಷ್ಫಿಕರ್ ರಹೀಮ್ಶೇರ್-ಎ-ಬಾಂಗ್ಲಾ ಕ್ರೀಡಾಂಗಣ, ಮೀರ್‌ಪುರ್‌, (136)

3253: ಜೇಮ್ಸ್‌ ವಿನ್ಸ್‌- ರೋಸ್ ಬೌಲ್‌, ಸೌತಾಂಪ್ಟನ್‌ (106)

3241: ಅಲೆಕ್ಸ್ ಹೇಲ್ಸ್-ಟ್ರೆಂಟ್ ಬ್ರಿಡ್ಜ್‌, ನಾಟಿಂಗ್‌ಹ್ಯಾಮ್‌ (109)

3238: ತಮೀಮ್‌ ಇಕ್ಬಾಲ್‌, ಶೇರ್-ಎ-ಬಾಂಗ್ಲಾ ಕ್ರೀಡಾಂಗಣ, ಮೀರ್‌ಪುರ್‌ (110)

6/6

ಅತ್ಯುತ್ತಮ ಫಾರ್ಮ್‌ನಲ್ಲಿ ಕೊಹ್ಲಿ

ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಅದ್ಭುತ ಲಯದಲ್ಲಿದ್ದಾರೆ. ಅವರು ಇಲ್ಲಿಯ ತನಕ ಆಡಿದ 9 ಪಂದ್ಯಗಳಲ್ಲಿ 65.33ರ ಸರಾಸರಿಯಲ್ಲಿ 392 ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.