ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಅರ್ಧಶತಕ ಸಿಡಿಸುವ ಮೂಲಕ ಕ್ರಿಸ್‌ ಗೇಲ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ರಾಜಸ್ಥಾನ್‌ ರಾಯಲ್ಸ್‌ ವಿರುದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅರ್ಧಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ 111ನೇ ಬಾರಿ 50ಕ್ಕೂ ಅಧಿಕ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಆ ಮೂಲಕ ವೆಸ್ಟ್‌ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್‌ ದಾಖಲೆಯನ್ನು ವಿರಾಟ್‌ ಕೊಹ್ಲಿ ಹಿಂದಿಕ್ಕಿದ್ದಾರೆ.

1/6

ಅರ್ಧಶತಕ ಸಿಡಿಸಿದ ವಿರಾಟ್‌ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್‌ ಮಾಡಿದ ವಿರಾಟ್‌ ಕೊಹ್ಲಿ ಅರ್ಧಶತಕವನ್ನು ಬಾರಿಸಿದರು. ಅವರು ಆಡಿದ 42 ಎಸೆತಗಳಲ್ಲಿ ಎರಡು ಸಿಕ್ಸರ್‌ ಹಾಗೂ 8 ಬೌಂಡರಿಗಳೊಂದಿಗೆ 70 ರನ್‌ಗಳನ್ನು ಸಿಡಿಸಿದರು.

2/6

ಕ್ರಿಸ್‌ ಗೇಲ್‌ ದಾಖಲೆ ಮುರಿದ ಕೊಹ್ಲಿ

ರಾಜಸ್ಥಾನ್‌ ರಾಯಲ್ಸ್‌ ವಿರುದ್ದ 70 ರನ್‌ ಗಳಿಸುವ ಮೂಲಕ ವಿರಾಟ್‌ ಕೊಹ್ಲಿ, ತಮ್ಮ ಟಿ20 ವೃತ್ತಿ ಜೀವನದಲ್ಲಿ 111ನೇ ಬಾರಿ 50ಕ್ಕಿಂತ ಹೆಚ್ಚು ರನ್‌ಗಳನ್ನು ದಾಖಲಿಸಿದರು. ಆ ಮೂಲಕ ವೆಸ್ಟ್‌ ಇಂಡೀಸ್ ಮಾಜಿ ಆರಂಭಿಕ ಕ್ರಿಸ್‌ ಗೇಲ್‌ ಅವರನ್ನು ಹಿಂದಿಕ್ಕಿದರು. ಗೇಲ್‌ 110ನೇ ಬಾರಿ ಟಿ20 ಕ್ರಿಕೆಟ್‌ನಲ್ಲಿ 50ಕ್ಕೂ ಅಧಿಕ ರನ್‌ ಗಳಿಸಿದ್ದಾರೆ.

ಕೊಹ್ಲಿ 408 ಪಂದ್ಯಗಳಿಂದ ಈ ದಾಖಲೆ ಬರೆದಿದ್ದಾರೆ.

3/6

ಅಗ್ರ ಸ್ಥಾನದಲ್ಲಿ ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಮಾಜಿ ಆರಂಬಿಕ ಡೇವಿಡ್‌ ವಾರ್ನರ್‌ ಈ ದಾಖಲೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅವರು ತಮ್ಮ ಟಿ20 ವೃತ್ತಿ ಜೀವನದಲ್ಲಿ 117 ಬಾರಿ 50ಕ್ಕಿಂತ ಹೆಚ್ಚಿನ ರನ್‌ಗಳನ್ನು ದಾಖಲಿಸಿಒದ್ದಾರೆ. ಇವರು ಈ ದಾಖಲೆಯನ್ನು ಬರೆಯಲು 404 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ.

4/6

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50ಕ್ಕಿಂತ ಹೆಚ್ಚು ರನ್‌ ಗಳಿಸಿದ ಬ್ಯಾಟರ್ಸ್‌

ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): 117 (404 ಪಂದ್ಯಗಳು)

ವಿರಾಟ್ ಕೊಹ್ಲಿ (ಭಾರತ): 111* (408* ಪಂದ್ಯಗಳು)

ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 110 (463 ಪಂದ್ಯಗಳು)

ಬಾಬರ್ ಆಝಮ್ (ಪಾಕಿಸ್ತಾನ): 101 (314 ಪಂದ್ಯಗಳು)

ಜೋಸ್ ಬಟ್ಲರ್ (ಇಂಗ್ಲೆಂಡ್): 95 (442 ಪಂದ್ಯಗಳು)

5/6

205 ರನ್‌ಗಳನ್ನು ಕಲೆ ಹಾಕಿದ ಆರ್‌ಸಿಬಿ

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ತನ್ನ ಪಾಲಿನ 20 ಓವರ್‌ಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 205 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ರಾಜಸ್ಥಾನ್‌ ರಾಯಲ್ಸ್‌ಗೆ 206 ರನ್‌ಗಳ ಗುರಿಯನ್ನು ನೀಡಿತ್ತು. ಆರ್‌ಸಿಬಿ ಪರ ಕೊಹ್ಲಿ 70 ರನ್‌ ಹಾಗೂ ದೇವದತ್‌ ಪಡಿಕ್ಕಲ್‌ 50 ರನ್‌ಗಳನ್ನು ಗಳಿಸಿದರು.

6/6

ತವರಿನನಲ್ಲಿ ಆರ್‌ಸಿಬಿಗೆ ಮೊದಲ ಜಯ

206 ರನ್‌ಗಳ ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ್‌ ರಾಯಲ್ಸ್‌ ತಂಡ, ಕೊನೆಯವರೆಗೂ ಹೋರಾಟ ನಡಸಿತು. ಆದರೆ, ಆರ್‌ಸಿಬಿಯ ಪರಿಣಾಮಕಾರಿ ಬೌಲಿಂಗ್‌ ದಾಳಿಯಿಂದ 194 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ 11 ರನ್‌ಗಳಿಂದ ಗೆಲುವು ಸಾಧಿಸಿತು.