IPL 2025: ವಿರಾಟ್ ಕೊಹ್ಲಿಯ ಬೆರಳಿನ ಗಾಯದ ಬಗ್ಗೆ ಅಪ್‌ಡೇಟ್ ನೀಡಿದ ಆರ್‌ಸಿಬಿ ಕೋಚ್ ಆಂಡಿ ಫ್ಲವರ್!
Andy Flower on Virat Kohli's Injury: ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಬೆರಳಿಗೆ ಚೆಂಡು ತಗುಲಿತ್ತು. ಪಂದ್ಯದ ಬಳಿಕ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್‌ಸಿಬಿ ಕೋಚ್ ಆಂಡಿ ಫ್ಲವರ್ ಅವರು ಮಾಹಿತಿ ನೀಡಿದ್ದಾರೆ.

ವಿರಾಟ್ ಕೊಹ್ಲಿ ಬೆರಳಿಗೆ ಗಾಯ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ (Gujarat Titans) ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bengaluru) ತಂಡದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯ (Virat Kohli) ಬೆರಳಿಗೆ ಚೆಂಡು ತಗುಲಿ ಗಾಯವಾಗಿತ್ತು. ಪಂದ್ಯದ ಬಳಿಕ ಮಾತನಾಡಿದ್ದ ಆರ್‌ಸಿಬಿ ಹೆಡ್ ಕೋಚ್ ಆಂಡಿ ಫ್ಲವರ್, ವಿರಾಟ್ ಕೊಹ್ಲಿ ಗಾಯದ ಬಗ್ಗೆ ಪ್ರಮುಖ ಮಾಹಿತಿ ನೀಡಿದ್ದಾರೆ. ಅಂದ ಹಾಗೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಆರ್‌ಸಿಬಿ 8 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಈ ಸೋಲಿನ ಬಳಿಕ ಬೆಂಗಳೂರು ತಂಡ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಬುಧವಾರ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 14ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್‌ಗಳ ನಷ್ಟಕ್ಕೆ 169 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡ, 17.5 ಓವರ್‌ಗಳಲ್ಲಿ 2 ವಿಕೆಟ್ 170 ರನ್‌ಗಳನ್ನು ಗಳಿಸಿ ಗೆಲುವು ಪಡೆಯಿತು. ಅಂದ ಹಾಗೆ ಗುಜರಾತ್ ಟೈಟನ್ಸ್ ತಂಡ ಚೇಸಿಂಗ್ ವೇಳೆ 12ನೇ ಓವರ್‌ನ ಐದನೇ ಎಸೆತದಲ್ಲಿ ಬೌಂಡರಿ ಹೋಗದಂತೆ ಚೆಂಡನ್ನು ತಡೆಯುವ ವೇಳೆ ವಿರಾಟ್ ಕೊಹ್ಲಿ ಬೆರಳಿಗೆ ಚೆಂಡು ತಗುಲಿ ಗಾಯ ಮಾಡಿಕೊಂಡಿದ್ದರು.
IPL 2025: ಆರ್‌ಸಿಬಿ, ಸಿಎಸ್‌ಕೆ ಅಲ್ಲವೇ ಅಲ್ಲ! ತಮ್ಮ ನೆಚ್ಚಿನ ಐಪಿಎಲ್ ತಂಡವನ್ನು ಆರಿಸಿದ ಇರ್ಫಾನ್ ಪಠಾಣ್!
ಈ ವೇಳೆ ನೋವು ತಾಳಲಾರದೆ ವಿರಾಟ್ ಕೊಹ್ಲಿ ನೆಲಕ್ಕೆ ಉರುಳಿದ್ದರು ಹಾಗೂ ತಕ್ಷಣ ಫಿಸಿಯೊ ಆಗಮಿಸಿ ಹಿರಿಯ ಆಟಗಾರನಿಗೆ ಚಿಕಿತ್ಸೆ ನೀಡಿದ್ದರು. ಇದಾದ ಬಳಿಕವೂ ವಿರಾಟ್ ಕೊಹ್ಲಿ ಫೀಲ್ಡಿಂಗ್‌ನಲ್ಲಿ ಮುಂದುವರಿದಿದ್ದರು. ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌ಸಿಬಿ ಕೋಚ್ ಆಂಡಿ ಫ್ಲವರ್, ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿರಾಟ್ ಕೊಹ್ಲಿ ಚೆನ್ನಾಗಿದ್ದಾರೆಂದು ಹೇಳಿದ್ದಾರೆ.
"ವಿರಾಟ್ ಕೊಹ್ಲಿ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯದ ಸಮಸ್ಯೆ ಇಲ್ಲ," ಎಂದು ಸುದ್ದಿಗೋಷ್ಠಿಯಲ್ಲಿ ಆರ್‌ಸಿಬಿ ಕೋಚ್ ಆಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ.
IPL 2025: ʻಕೆಕೆಆರ್ ಪ್ರಶಸ್ತಿ ಗೆದ್ದರೂ ಶ್ರೇಯಸ್ ಅಯ್ಯರ್‌ಗೆ ಸಿಗದ ಶ್ರೇಯʼ-ಸುನೀಲ್ ಗವಾಸ್ಕರ್!
ಬ್ಯಾಟಿಂಗ್‌ನಲ್ಲಿ ವಿಫಲರಾದ ವಿರಾಟ್ ಕೊಹ್ಲಿ
ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ಬುಧವಾರ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಆಡಿದ 6 ಎಸೆತಗಳಲ್ಲಿ 7 ರನ್ ಗಳಿಸಿ ಅರ್ಷದ್ ಖಾನ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಆ ಮೂಲಕ ಈ ಟೂರ್ನಿಯಲ್ಲಿ ಇದೇ ಮೊದಲ ಬಾರಿ 40 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅರ್ಷದ್ ಖಾನ್ ಎಸೆದಿದ್ದ ಲೆಗ್ ಸೈಡ್ ಮೇಲಿನ ಎಸೆತಗಳನ್ನು ಸಿಕ್ಸರ್ ಹೊಡೆಯಲು ಪ್ರಯತ್ನಿಸಿದ ವಿರಾಟ್ ಕೊಹ್ಲಿ ಸ್ಕೈರ್ ಲೆಗ್‌ನಲ್ಲಿ ಕ್ಯಾಚ್ ಕೊಟ್ಟರು.
ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಅವರು ಕೂಡ ವಿಫಲರಾದರು. ಆ ಮೂಲಕ ಆರ್‌ಸಿಬಿ 42 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಜಿತೇಶ ಶರ್ಮಾ (33) ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ (54) ಅವರು ಐದನೇ ವಿಕೆಟ್‌ಗೆ 52 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಆರ್‌ಸಿಬಿಯನ್ನು ಸಂಕಷ್ಟದಿಂದ ಪಾರು ಮಾಡಿದ್ದರು.
IPL 2025: ಪಂಜಾಬ್ ಕಿಂಗ್ಸ್ ವಿರುದ್ದದ ಸೋಲಿನ ಬೆನ್ನಲ್ಲೆ ಪಿಚ್ ಕ್ಯುರೇಟರ್‌ಗಳನ್ನು ದೂರಿದ ಜಹೀರ್ ಖಾನ್!
ಕೊನೆಯಲ್ಲಿ ಆರ್‌ಸಿಬಿ ಪರ ಟಿಮ್ ಡೇವಿಡ್ ಕೂಡ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದರು. ಅವರು ಆಡಿದ್ದ ಕೇವಲ 18 ಎಸೆತಗಳಲ್ಲಿ 32 ರನ್‌ಗಳನ್ನು ಸಿಡಿಸಿದ್ದರು. ಗುಜರಾತ್ ಟೈಟನ್ಸ್ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ್ದ ಮೊಹಮ್ಮದ್ ಸಿರಾಜ್ ಅವರು 19 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.