KKR vs RR: ಸಂಜು ಸ್ಯಾಮ್ಸನ್ ಬದಲು ರಿಯಾನ್ ಪರಾಗ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಲು ಕಾರಣವೇನು?
why Sanju Samson Not Captaining Rajasthan Royals?: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಕಯ ತನ್ನ ಎರಡನೇ ಪಂದ್ಯದಲ್ಲಿ ರಿಯಾನ್ ಪರಾಗ್ ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದರು. ಆ ಮೂಲಕ ಸಂಜು ಸ್ಯಾಮ್ಸನ್ ಕೇವಲ ಬ್ಯಾಟ್ಸ್‌ಮನ್ ಆಗಿ ಮಾತ್ರ ಕಣಕ್ಕೆ ಇಳಿದರು. ಇದಕ್ಕೆ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ.

ಕೆಕೆಆರ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ನಾಯಕತ್ವ ಏಕೆ ನೀಡಿಲ್ಲ?

ಗುವಾಹಟಿ: ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಪರ ಕೇವಲ ಬ್ಯಾಟ್ಸ್‌ಮನ್ ಆಗಿ ಆಡಿದ್ದ ಸಂಜು ಸ್ಯಾಮ್ಸನ್ (Sanju Samson), ಮಾರ್ಚ್ 26ರಂದು ಬುಧವಾರ ನಡೆದಿದ್ದ ಕೋಲ್ಕತಾ ನೈಟ್ ರೈಡರ್ಸ್ (KKR) ವಿರುದ್ದದ ಪಂದ್ಯದಲ್ಲಿ ಅವರು ನಾಯಕನಾಗಿ ಕಾಣಿಸಿಕೊಳ್ಳಲಿಲ್ಲ. ಮೊದಲನೇ ಪಂದ್ಯದಂತೆ ಈ ಪಂದ್ಯದಲ್ಲಿಯೂ ರಿಯಾನ್ ಪರಾಗ್ ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದರು. ಆ ಮೂಲಕ ಐಪಿಎಲ್ ತಂಡವನ್ನು ಮುನ್ನಡೆಸಿದ ಅಸ್ಸಾಂ ಮೂಲದ ಮೊದಲ ಕ್ರಿಕೆಟಿಗ ಎಂಬ ಕೀರ್ತಿಗೆ ಪರಾಗ್ ಭಾಜನರಾದರು. ಅಂದ ಹಾಗೆ ಸಂಜು ಸ್ಯಾಮ್ಸನ್ ಏಕೆ ಆರ್‌ಆರ್ ತಂಡವನ್ನು ಮುನ್ನಡೆಸುತ್ತಿಲ್ಲ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡುವುದು ಸಾಮಾನ್ಯ. ಇದಕ್ಕೆ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ.
ಬೆರಳಿನ ಗಾಯದ ಮೂಲಕ ಸಂಜು ಸ್ಯಾಮ್ಸನ್ ಅವರು 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಆಗಮಿಸಿದ್ದಾರೆ. ಇನ್ನೂ ಅವರು ಸಂಪೂರ್ಣ ಫಿಟ್ ಆಗಿಲ್ಲ. ಈ ಕಾರಣದಿಂದ ಅವರು ಆರಂಭಿಕ ಮೂರು ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ನಿರ್ವಹಿಸದೆ, ಕೇವಲ ಬ್ಯಾಟ್ಸ್‌ಮನ್ ಆಗಿ ಮಾತ್ರ ಆಡಲಿದ್ದಾರೆ. ಸಂಜು ಸ್ಯಾಮ್ಸನ್ ಪೂರ್ಣ ಪ್ರಮಾಣದ ಅಲಭ್ಯತೆಯ ಕಾರಣ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್‌ಗೆ ನಾಯಕತ್ವವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿಯೂ ಅವರು ಆರ್‌ಆರ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
KKR vs RR: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೋಲ್ಕತಾ ನೈಟ್ ರೈಡರ್ಸ್!
ಕೋಲ್ಕತಾ ನೈಟ್ ರೈಡರ್ಸ್ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿ.ಕೀ), ಶಿಮ್ರಾನ್ ಹೆಟ್ಮಾಯರ್, ವಾನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ
ಸೋಲಿನ ಆರಂಭ ಕಂಡಿರುವ ಕೆಕೆಆರ್, ಆರ್‌ಆರ್
ಹಾಲಿ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ತನ್ನ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ 7 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಅಜಿಂಕ್ಯ ರಹಾನೆಯ ಸ್ಪೋಟಕ ಅರ್ಧಶತಕದ ಬಲದಿಂದ ಭರ್ಜರಿ ಆರಂಭ ಪಡೆದಿದ್ದ ಕೆಕೆಆರ್, ನಂತರ ಕೃಣಾಲ್ ಪಾಂಡ್ಯ ಸ್ಪಿನ್ ಮೋಡಿಗೆ ನಲುಗಿ 174 ರನ್‌ಗಳಿಗೆ ಸೀಮಿತವಾಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಆರ್‌ಸಿಬಿ, 16.2 ಓವರ್‌ಗಳಿಗೆ ಗೆದ್ದು ಸಂಭ್ರಮಿಸಿತ್ತು.
SRH vs RR: ರಾಜಸ್ಥಾನ್ ವಿರುದ್ಧ 44 ರನ್ ಅಂತರದ ಗೆಲುವು ಸಾಧಿಸಿದ ಹೈದರಾಬಾದ್
ರಾಜಸ್ಥಾನ್ ರಾಯಲ್ಸ್ ತಂಡ ಕೂಡ ತನ್ನ ಮೊದಲನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 44 ರನ್‌ಗಳಿಂದ ಸೋಲು ಅನುಭವಿಸಿತ್ತು. ಮೊದಲು ಬ್ಯಾಟ್ ಮಾಡಿದ್ದ ಎಸ್‌ಆರ್‌ಎಚ್ ತಂಡ ಐಪಿಎಲ್ ಇತಿಹಾಸದ ಎರಡನೇ ಅತ್ಯಂತ ಗರಿಷ್ಠ ಮೊತ್ತವನ್ನು (286-6) ಕಲೆ ಹಾಕಿತ್ತು. ಇಶಾನ್ ಕಿಶನ್ ಶತಕ ಸಿಡಿಸಿದ್ದರು. ಜೋಫ್ರಾ ಆರ್ಚರ್ ಈ ಪಂದ್ಯದಲ್ಲಿ ಕೇವಲ 4 ಓವರ್‌ಗಳಿಗೆ 76 ರನ್‌ಗಳನ್ನು ಕೊಟ್ಟಿದ್ದರು. ಸಂಜು ಸ್ಯಾಮ್ಸನ್ ಹಾಗೂ ಧ್ರವ್ ಜುರೆಲ್ ಅರ್ಧಶತಕಗಳನ್ನು ಸಿಡಿಸಿದ ಹೊರತಾಗಿಯೂ ಆರ್‌ಆರ್ 242 ರನ್‌ಗಳಿಗೆ ಸೀಮಿತವಾಗಿತ್ತು.
ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯಕ್ಕೆ ಕೆಕೆಆರ್ ಪ್ಲೇಯಿಂಗ್ XI
ಕ್ವಿಂಟನ್ ಡಿ ಕಾಕ್ (ವಿ.ಕೀ), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಮೊಯೀನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ