IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ
IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್- ಐಟಿ ಸೇರಿ ಸುಮಾರು 68 ಹುದ್ದೆಗಳಿವೆ. ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅಪ್ಲೈ ಮಾಡಲು ಕೊನೆಯ ದಿನ 2025ರ ಜ. 10.
Ramesh B
December 30, 2024
ಬೆಂಗಳೂರು: ಕೇಂದ್ರ ಸರ್ಕಾರದ ಭಾರತೀಯ ಅಂಚೆ ಇಲಾಖೆ (Department of Post)ಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಲಿಮಿಟೆಡ್ (India Post Payments Bank)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ (IPPB Recruitment 2025). ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್- ಐಟಿ ಸೇರಿ ಸುಮಾರು 68 ಹುದ್ದೆಗಳಿವೆ. ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅಪ್ಲೈ ಮಾಡಲು ಕೊನೆಯ ದಿನ 2025ರ ಜ. 10 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟೆಂಟ್ ಮ್ಯಾನೇಜರ್ ಐಟಿ - 54 ಹುದ್ದೆಮ್ಯಾನೇಜರ್ ಐಟಿ-(ಪೇಮೆಂಟ್ ಸಿಸ್ಟಮ್ಸ್) - 1 ಹುದ್ದೆಮ್ಯಾನೇಜರ್ ಐಟಿ-(ಇನ್ಫ್ರಾಸ್ಟ್ರಕ್ಚರ್, ನೆಟ್‌ವರ್ಕ್ & ಕ್ಲೌಡ್) - 2 ಹುದ್ದೆಮ್ಯಾನೇಜರ್ ಐಟಿ-(ಎಂಟರ್ಪ್ರೈಸ್ ಡೇಟಾ ವೇರ್‌ಹೌಸ್) - 1 ಹುದ್ದೆಸೀನಿಯರ್ ಮ್ಯಾನೇಜರ್-ಐಟಿ (ಪೇಮೆಂಟ್ಸ್ ಸಿಸ್ಟಮ್) - 1 ಹುದ್ದೆಸೀನಿಯರ್ ಮ್ಯಾನೇಜರ್-ಐಟಿ (ಇನ್ಫ್ರಾಸ್ಟ್ರಕ್ಚರ್, ನೆಟ್‌ವರ್ಕ್ & ಕ್ಲೌಡ್) - 1 ಹುದ್ದೆಸೀನಿಯರ್ ಮ್ಯಾನೇಜರ್-ಐಟಿ (ಮಾರಾಟಗಾರ, ಹೊರಗುತ್ತಿಗೆ, ಗುತ್ತಿಗೆ ನಿರ್ವಹಣೆ, ಸಂಗ್ರಹಣೆ, ಎಸ್ಎಲ್ಎ, ಪಾವತಿಗಳು) - 1 ಹುದ್ದೆಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್ 7 ಹುದ್ದೆವಿವಿಧ ಹುದ್ದೆಗೆ ಅನುಗುಣವಾಗಿ ಬಿಇ ಅಥವಾ ಬಿ.ಟೆಕ್, ಬಿ.ಎಸ್‌ಸಿ, ಕಂಪ್ಯೂಟರ್ ಸೈನ್ಸ್/ ಐಟಿ/ ಕಂಪ್ಯೂಟರ್ ಅಪ್ಲಿಕೇಶನ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು, ಕಾರ್ಯಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 20-50 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಯ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಪಾವತಿಸಬೇಕು. ಇತರ ಎಲ್ಲ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್. ಆನ್‌ಲೈನ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
IPPB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವ ವಿಧಾನ(https://ibpsonline.ibps.in/ippbldec24/)
ಹೆಸರು ನೋಂದಾಯಿಸಿ.
ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: ippbonline.comಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: BOB Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿದೆ 1,267 ಹುದ್ದೆ; ಪದವಿ ವಿದ್ಯಾರ್ಹತೆ ಹೊಂದಿದ್ದರೆ ಈಗಲೇ ಅಪ್ಲೈ ಮಾಡಿ